DA Hike: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; 4% ಡಿಎ ಹೆಚ್ಚಳ
ಕೇಂದ್ರ ಸರ್ಕಾರಿ ನೌಕರರ ಹಲವು ದಿನಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದೆ. ಕೇಂದ್ರ ಸರ್ಕಾರ ತನ್ನ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ 4ರಷ್ಟು ಹೆಚ್ಚಿಸಿದ್ದು, ಶಿವರಾತ್ರಿ ಹಬ್ಬಕ್ಕೆ ಮುನ್ನವೇ ಭರ್ಜರಿ ಸಿಹಿ ಸುದ್ದಿ ನೀಡಿದೆ.
4% ಡಿಎ ಹೆಚ್ಚಳ ಬಳಿಕ ಒಟ್ಟು ಡಿಎ ಹೆಚ್ಚಳ ಶೇ 50ಕ್ಕೆ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಡಿಎ ಮತ್ತು ಪಿಂಚಣಿದಾರರಿಗೆ ಡಿಆರ್‌ನೆಸ್ ರಿಲೀಫ್ (ಡಿಆರ್) ಅನ್ನು ಜನವರಿ 1, 2024 ರಿಂದ ಜಾರಿಗೆ ತರಲು ಅನುಮೋದನೆ ನೀಡಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಏರುತ್ತಿರುವ ಬೆಲೆಗಳ ಪರಿಣಾಮವನ್ನು ಸರಿದೂಗಿಸುವ ಗುರಿಯನ್ನು ಹೊಂದಿರುವ ಮೂಲ ವೇತನ/ಪಿಂಚಣಿಯನ್ನು ಈಗ ಇರುವ 46 ಪ್ರತಿಶತ ದರಕ್ಕಿಂತ ಇದು 4 ಪ್ರತಿಶತ ಹೆಚ್ಚಳವಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಸರ್ಕಾರಕ್ಕೆ ಹೆಚ್ಚಿನ ಹೊರೆ
ಈ ಹೆಚ್ಚಳದಿಂದ ಕೇಂದ್ರ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ವಾರ್ಷಿಕವಾಗಿ ₹12,868.72 ಕೋಟಿಗಳಷ್ಟು ಹೊರೆಯಾಗಬಹುದು ಎಂದು ಹೇಳಲಾಗಿದೆ. ಸರ್ಕಾರದ ಈ ನಿರ್ಧಾರದಿಂದ 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.
7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಈ ಹೆಚ್ಚಳವು ಸ್ವೀಕೃತ ಸೂತ್ರಕ್ಕೆ ಬದ್ಧವಾಗಿದೆ ಎಂದು ಸರ್ಕಾರ ಹೇಳಿದೆ. ಕೇಂದ್ರವು ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 4 ರಿಂದ 50 ರಷ್ಟು ಹೆಚ್ಚಿಸಿದೆ.











Click it and Unblock the Notifications