• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಕಿಂಗ್ ಸುದ್ದಿ: ಪೆಟ್ರೋಲ್ ದರದಲ್ಲಿ 10, ಡೀಸೆಲ್ 13 ರೂಪಾಯಿ ಏರಿಕೆ!

|

ನವದೆಹಲಿ, ಮೇ.05: ಕೊರೊನಾ ವೈರಸ್ ಅಟ್ಟಹಾಸ ಹಾಗೂ ಭಾರತ ಲಾಕ್ ಡೌನ್ ನಡುವೆ ಕೇಂದ್ರ ಸರ್ಕಾರವು ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದಾಖಲೆ ಮಟ್ಟದಲ್ಲಿ ಹೆಚ್ಚಳ ಮಾಡಲಾಗಿದೆ.

ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ 10 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ ಬರೋಬ್ಬರಿ 13 ರೂಪಾಯಿ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ.

ಬ್ರೇಕಿಂಗ್ ನ್ಯೂಸ್; ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ

ಕೊರೊನಾ ವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತ ಲಾಕ್ ಡೌನ್ ಮಾಡಲಾಗಿದೆ. ಹೀಗಿದ್ದರೂ ವಾಹನ ಸವಾರರ ಓಡಾಟಕ್ಕೆ ಬ್ರೇಕ್ ಬೀಳುತ್ತಿಲ್ಲ. ಈ ಹಿನ್ನೆಲೆ ಇಂಧನ ದರದಲ್ಲಿ ಭಾರಿ ಏರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ವಾಹನ ಸವಾರರ ಜೇಬಿಗೆ ಕತ್ತರಿ:

ಪೆಟ್ರೋಲ್ ಮೇಲೆ 5 ರೂಪಾಯಿ ಅಬಕಾರಿ ಶುಲ್ಕ ಹಾಗೂ ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಶುಲ್ಕವನ್ನು ವಿಧಿಸಲಾಗಿದೆ. ಭಾರತ ಲಾಕ್ ಡೌನ್ ನಡುವೆಯೂ ಓಡಾಡುತ್ತಿದ್ದ ವಾಹನ ಸವಾರರ ಜೇಬಿಗೆ ಭರ್ಜರಿ ಕತ್ತರಿ ಬೀಳಲಿದೆ. ಬೈಕ್ ಮತ್ತು ಕಾರ್ ಗಳಲ್ಲಿ ಸುತ್ತಾಡಲು ಬಯಸುವವರು ಒಮ್ಮೆ ಜೇಬು ಮುಟ್ಟಿ ನೋಡಿಕೊಳ್ಳುವಂತಾ ಸ್ಥಿತಿ ನಿರ್ಮಾಣವಾಗಿದೆ.

English summary
Shocking News: Petrol 10 Rupees, Diesel 13 Rupees Hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X