Government Holiday: ನಾಳೆ ಸರ್ಕಾರಿ ರಜೆ ಘೋಷಣೆ
Government Holiday: ಈ ವರ್ಷದ ಆರಂಭದಿಂದಲೂ ದೇಶದ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್‌ಗಳಿಗೆ ಸಾಲು ರಜೆಗಳೇ ಸಿಕ್ಕಿವೆ. ಹಾಗೆಯೇ ನಾಳೆ ಅಂದರೆ ಏಪ್ರಿಲ್ 14ರಂದು ಎಲ್ಲಾ ರಾಜ್ಯಗಳಿಗೂ ಅನ್ವಯಿಸುವಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಇದಕ್ಕೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದೇಶದಲ್ಲಿ ಹಲವು ದಿನಗಳನ್ನು ಸಾರ್ವಜನಿಕ ರಜೆ ದಿನಗಳನ್ನಾಗಿ ಘೋಷಣೆ ಮಾಡಲಾಗಿದೆ. ಹಾಗೆಯೇ ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ಈ ಸಾಲಿಗೆ ಏಪ್ರಿಲ್ 14 ಅನ್ನು ಕೂಡ ಸೇರ್ಪಡೆ ಮಾಡಿದೆ. ನಾಳೆಯೇ ಏಪ್ರಿಲ್ 14 ಆಗಿದ್ದು, ಈ ದಿನ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಕೇಂದ್ರ ಸರ್ಕಾರವು ಡಾ.ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಣೆ ಮಾಡಿದೆ. ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್ ಖಾತೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ಘೋಷಣೆ ಮಾಡಿದ್ದಾರೆ.
ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ, ಬಾಬಾ ಸಾಹೇಬ್ ಅವರ ನಿಷ್ಠಾವಂತ ಅನುಯಾಯಿ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ಶೇಖಾವತ್ ಹೇಳಿದರು. ಇನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಬಾಬಾಸಾಹೇಬ್ ಅಂಬೇಡ್ಕರ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಡಾ.ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು ಏಪ್ರಿಲ್ 14, 1891ರಂದು ಮಧ್ಯಪ್ರದೇಶದ ಮಾವ್‌ನಲ್ಲಿ ಜನಿಸಿದರು. ಅವರು ಆಧುನಿಕ ಭಾರತವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ದಲಿತ ಸಮುದಾಯದಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಲ್ಪಟ್ಟಿದ್ದಾರೆ.
ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಪ್ರಬಲ ಪ್ರತಿಪಾದಕರಾಗಿದ್ದರು. ಅಂಚಿನಲ್ಲಿರುವ ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಭಾರತದ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಹಾಗೂ ಅವರನ್ನು ಸ್ಮರಿಸಲಾಗುತ್ತದೆ. ಆದ್ದರಿಂದ ಅವರ ಜನ್ಮ ದಿನಾಚರಣೆ ದಿನವನ್ನು ಸಾರ್ವಜನಿಕ ರಜಾದಿನವೆಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ನಿರ್ಧಾರ ತೆಗೆದುಕೊಂಡ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.












Click it and Unblock the Notifications