ಶೌಚಾಲಯ ಬಳಕೆ ಮೇಲೆ ಮೊಬೈಲ್ ಕಣ್ಗಾವಲು
ನವದೆಹಲಿ, ಜ. 2: ಶೌಚಾಲಯಗಳ ನಿರ್ಮಾಣಕ್ಕೆ ಸರ್ಕಾರ ವಿಶೇಷ ಒತ್ತು ನೀಡುತ್ತಿರುವುದರ ಜತೆಗೆ ಅವುಗಳ ಬಳಕೆ ಸರಿಯಾಗಿ ಆಗುತ್ತಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಲು ತೀರ್ಮಾನಿಸಿದೆ. ಅಧಿಕಾರಿಗಳು ತಂತ್ರಜ್ಞಾನ ಬಳಸಿಕೊಂಡು ಶೀಘ್ರ ವರದಿ ನೀಡುವಂತೆ ಕೇಂದ್ರ ಸರ್ಕಾರ ತಿಳಿಸಿದೆ.
2019 ವೇಳೆಗೆ ಬಯಲು ಶೌಚಕ್ಕೆ ಮುಕ್ತಿ ಕಾಣಿಸಬೇಕು ಎಂಬ ಗುರಿ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಐಪಾಡ್, ಮೊಬೈಲ್ ಮತ್ತು ಟ್ಯಾಬ್ಲೆಡ್ ಬಳಸಿಕೊಂಡು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯಕ್ಕೆ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದು ತಿಳಿಸಿದ್ದು ಈ ಪ್ರಕ್ರಿಯೆ ಜನವರಿ 1 ರಿಂದಲೇ ಆರಂಭವಾಗಿದೆ.[ಪೆನ್ನನ್ನೇ ಪೊರಕೆಯಾಗಿಸಿದ ಪತ್ರಕರ್ತರಿಗೆ ಮೋದಿ ಧನ್ಯವಾದ]

ಈ ಮಾಹಿತಿ ನೀಡುವ ವ್ಯವಸ್ಥೆ ನಿರ್ವಹಣೆಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು 24 ಹಿರಿಯ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಇವರು ಮೊಬೈಲ್ ಮತ್ತಿತರ ಸಾಧನಗಳ ಮೂಲಕ ನಿರಂತರವಾಗಿ ವರದಿ ಸಲ್ಲಿಸುತ್ತಿರಬೇಕು.['ಕರ್ನಾಟಕ ಮೊಬೈಲ್ ಒನ್' ಸೇವೆ ಪಡೆಯುವುದು ಹೇಗೆ?]
ನಾಗರಿಕರಿಗೂ ಅವಕಾಶ
ಸಾರ್ವಜನಿಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳ ಸರಿಯಾದ ಬಳಕೆ ಆಗುತ್ತಿದೆಯೇ? ಇಲ್ಲವೇ? ಎಂಬ ಬಗ್ಗೆ ನಾಗರಿಕರು ವರದಿ ಸಲ್ಲಿಸಬಹುದು. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ವೆಬ್ ಸೈಟ್ ನಲ್ಲಿ ಮಾಹಿತಿ ದಾಖಲು ಮಾಡಲು ಅವಕಾಶ ಕಲ್ಪಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications