ಜೀವಂತ ಪ್ರಮಾಣ ಪತ್ರ ಸಲ್ಲಿಕೆ ಅವಧಿ ವಿಸ್ತರಣೆ
ನವದೆಹಲಿ, ನವೆಂಬರ್ 29 : ಕೋವಿಡ್ ಸಂದರ್ಭದಲ್ಲಿ ನಿವೃತ್ತ ಸರ್ಕಾರಿ ನೌಕರರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಮುಂದಾಗಿದೆ. ಪಿಂಚಣಿ ಪಡೆಯುವ ನಿವೃತ್ತ ನೌಕರರು ಜೀವಂತ ಪ್ರಮಾಣ ಪತ್ರ ಸಲ್ಲಿಸುವ ಅವಧಿಯನ್ನು ಫೆಬ್ರವರಿ ತನಕ ವಿಸ್ತರಣೆ ಮಾಡಿದೆ.
ಪಿಂಚಣಿ ಪಡೆಯುವ ನಿವೃತ್ತ ಸರ್ಕಾರಿ ನೌಕರರು ಪ್ರತಿ ವರ್ಷ ಜೀವಂತ ಪ್ರಮಾಣಪತ್ರ ಸಲ್ಲಿಸಬೇಕು. ಪೋಸ್ಟ್ ಮ್ಯಾನ್ ನಿವೃತ್ತ ಸರ್ಕಾರಿ ನೌಕರರ ಫೋಟೋ ಹಾಗೂ ಬೆರಳಚ್ಚನ್ನು ಪಡೆಯುವ ಮೂಲಕ ಜೀವಂತ ಪ್ರಮಾಣಪತ್ರವನ್ನು ಪಡೆದುಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‍ನ ಮೂಲಕ ಮನೆಯಿಂದಲೇ ಜೀವಂತ ಪ್ರಮಾಣ ಪತ್ರ ಸಲ್ಲಿಸುವ ವ್ಯವಸ್ಥೆ ಮಾಡಲಾಗಿದೆ. ನಿವೃತ್ತ ಸರ್ಕಾರಿ ನೌಕರರು ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಪ್ರತಿವರ್ಷ ನವೆಂಬರ್ ತಿಂಗಳಿನಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. ಆದರೆ, ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿ 2021ರ ಫೆಬ್ರವರಿ ತನಕ ಪ್ರಮಾಣ ಪತ್ರ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೋವಿಡ್ ಪರಿಸ್ಥಿತಿಯ ಕಾರಣ ಸುಮಾರು 35 ಲಕ್ಷ ಪಿಂಚಣಿ ಪಡೆಯುವ ಜನರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್‌ನಲ್ಲಿ ಸಲ್ಲಿಕೆ ಮಾಡಿಲ್ಲ. ಅವರಿಗೆ ಈ ಘೋಷಣೆಯಿಂದ ಸಹಾಯಕವಾಗಲಿದೆ.
ಪ್ರತಿವರ್ಷ ನವೆಂಬರ್ ತಿಂಗಳ ಕೊನೆಯ ಒಳಗೆ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಬೇಕಿತ್ತು. ಆದರೆ, ಈ ಬಾರಿ ಅದನ್ನು 2021ರ ಫೆಬ್ರವರಿ ತನಕ ವಿಸ್ತರಣೆ ಮಾಡಲಾಗಿದೆ.
ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸದೇ ಹೋದರೂ ನಿವೃತ್ತ ನೌಕರರು ಫೆಬ್ರವರಿ ತನಕ ಪಿಂಚಣಿಯನ್ನು ಪಡೆಯಬಹುದಾಗಿದೆ ಎಂದು ಇಪಿಎಫ್‌ಒ ತಿಳಿಸಿದೆ.












Click it and Unblock the Notifications