• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಬೆಲೆ ಪರಿಷ್ಕರಿಸಿದ ಕೇಂದ್ರ; ಯಾವ್ಯಾವ ಲಸಿಕೆಗೆ ಎಷ್ಟು ಬೆಲೆ?

|
Google Oneindia Kannada News

ನವದೆಹಲಿ, ಜೂನ್ 09: ಸೋಮವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಿದ್ದರು.

18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೇಂದ್ರ ಸರ್ಕಾರದಿಂದ ಉಚಿತ ಕೊರೊನಾ ಲಸಿಕೆ ನೀಡುವುದರೊಂದಿಗೆ ಕೇಂದ್ರ ಸರ್ಕಾರ ನೀಡಿರುವ ಲಸಿಕೆಯ ಶೇ.25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಪಡೆಯಬಹುದು. ಹಣವಿರುವವರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಪಡೆದುಕೊಳ್ಳಬಹುದು ಎಂದು ಹೇಳಿದ್ದರು. ಈ ಬೆನ್ನಲ್ಲೇ ಮಂಗಳವಾರ ಕೇಂದ್ರ ಸರ್ಕಾರ ಮಂಗಳವಾರ ಲಸಿಕೆಗಳ ಬೆಲೆ ಪರಿಷ್ಕರಿಸಿದೆ. ಲಸಿಕೆ ತಯಾರಕರು ಪ್ರಸ್ತುತ ಘೋಷಿಸಿರುವ ಬೆಲೆಯ ಆಧಾರದ ಮೇಲೆ ದರ ಪರಿಷ್ಕರಣೆ ಮಾಡಲಾಗಿದೆ. ಸದ್ಯ ಈ ಲಸಿಕೆಗಳು ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಬೆಲೆಗೆ ಸಿಗುತ್ತಿವೆ? ಇಲ್ಲಿದೆ ಮಾಹಿತಿ...

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಬಿಹಾರ ಸರ್ಕಾರದಿಂದ 4 ಲಕ್ಷ ರೂ. ಪರಿಹಾರಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಬಿಹಾರ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ

 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗಳ ಬೆಲೆ ಎಷ್ಟೆಷ್ಟಿದೆ?

ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗಳ ಬೆಲೆ ಎಷ್ಟೆಷ್ಟಿದೆ?

ಕೇಂದ್ರ ಆರೋಗ್ಯ ಸಚಿವಾಲಯ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ ಪರಿಷ್ಕರಣೆ ಮಾಡಿದ್ದು, ಕೋವಿಶೀಲ್ಡ್‌ ಲಸಿಕೆಗೆ 780 ರೂ, ಕೋವ್ಯಾಕ್ಸಿನ್‌ ಲಸಿಕೆಗೆ 1410 ರೂ ಹಾಗೂ ಸ್ಫುಟ್ನಿಕ್ ವಿ ಲಸಿಕೆಗೆ 1145 ರೂಪಾಯಿ ಬೆಲೆ ನಿಗದಿಪಡಿಸಿದೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ಲಸಿಕೆಗಳಿಗೆ ಅಧಿಕ ಶುಲ್ಕ ವಿಧಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದೆ.

 ಸೇವಾ ಶುಲ್ಕ ನಿಗದಿ

ಸೇವಾ ಶುಲ್ಕ ನಿಗದಿ

ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲು ಸೇವಾ ಶುಲ್ಕವಾಗಿ ಪ್ರತಿ ಡೋಸ್‌ಗೆ ಗರಿಷ್ಠ 150 ರೂ ವಿಧಿಸಬಹುದು ಎಂದು ತಿಳಿಸಿದೆ. ಖಾಸಗಿ ಆಸ್ಪತ್ರೆಗಳು ವಿಧಿಸುವ ದರವನ್ನು ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ಮಾಡಬೇಕು. ಈ ಕುರಿತು ಜನರಿಂದ ಮಾಹಿತಿ ಪಡೆದುಕೊಳ್ಳುತ್ತಿರಬೇಕೆಂದು. ಹೆಚ್ಚಿನ ದರ ನಿಗದಿ ಮಾಡುವುದು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

 ಲೋಕ ಕಲ್ಯಾಣ್ ಕಾರ್ಯಯೋಜನೆ

ಲೋಕ ಕಲ್ಯಾಣ್ ಕಾರ್ಯಯೋಜನೆ

ಖಾಸಗಿ ಲಸಿಕೆ ವಿತರಣೆ ಕೇಂದ್ರಗಳಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ವರ್ಗವನ್ನು ಉತ್ತೇಜಿಸುವುದಕ್ಕಾಗಿ "ಲೋಕ ಕಲ್ಯಾಣ್" ಎಂಬ ಕಾರ್ಯಯೋಜನೆ ರೂಪಿಸಲಾಗಿದೆ. ಖಾಸಗಿ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವವರಿಗೆ ಪುನಃ ಪಡೆದುಕೊಳ್ಳಬಹುದಾದ ಹಾಗೂ ವರ್ಗಾವಣೆ ಮಾಡಲಾಗದ ಎಲೆಕ್ಟ್ರಾನಿಕ್ ವೋಚರ್‌ಗಳನ್ನು ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದರು.

 ಆದ್ಯತೆ ಮೇರೆಗೆ ರಾಜ್ಯಗಳಿಗೆ ಲಸಿಕೆ ಹಂಚಿಕೆ

ಆದ್ಯತೆ ಮೇರೆಗೆ ರಾಜ್ಯಗಳಿಗೆ ಲಸಿಕೆ ಹಂಚಿಕೆ

ದೇಶದಲ್ಲಿ ಶೇ.75ರಷ್ಟು ಕೊರೊನಾ ವೈರಸ್ ಲಸಿಕೆಯನ್ನು ಉತ್ಪಾದಿಸಲಾಗುತ್ತದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ಪೂರೈಸಲಾಗುತ್ತದೆ. ರಾಷ್ಟ್ರೀಯ ಲಸಿಕೆ ವಿತರಣೆ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರದ ಲಸಿಕೆ ಕೇಂದ್ರಗಳಲ್ಲಿ ಎಲ್ಲ ಅರ್ಹ ಪ್ರಜೆಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದರು. ಭಾರತ ಸರ್ಕಾರವು ರಾಜ್ಯಗಳಲ್ಲಿ ನಿಗದಿತ ಮಾನದಂಡಗಳ ಅಡಿಯಲ್ಲಿ ಆದ್ಯತೆಗಳ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು. ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ವೈರಸ್ ಲಸಿಕೆ ನೀಡಲಾಗುವುದು ಎಂದು ಮೋದಿ ಘೋಷಿಸಿದ್ದರು.

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಗೆ ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

Recommended Video

   Rohini ಮತ್ತು Shilpa Nag ನಡುವಿನ ಜಗಳಕ್ಕೆ ಕಾರಣ ಯಾರೆಂದು ಹೇಳಿದ Siddaramaiah | Oneindia Kannada
   English summary
   Union Health Ministry on Tuesday capped charges for administration of Covishield at Rs 780, Covaxin at Rs 1,410, and Sputnik V at Rs 1,145 in private hospitals,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X