ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸುವಂತಿಲ್ಲ: ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಮಾರ್ಚ್ 12: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ಕಾರಿ ಉದ್ಯೋಗದಲ್ಲಿರುವ ವ್ಯಕ್ತಿಗಳನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಸರ್ಕಾರಿ ಅಧಿಕಾರಿಯೊಬ್ಬರಿಗೆ ರಾಜ್ಯ ಚುನಾವಣಾ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ವಹಿಸುವುದು ಸಂವಿಧಾನದ ಅಣಕ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ರಾಜ್ಯ ಚುನಾವಣಾ ಆಯುಕ್ತರು ಯಾವಾಗಲೂ ಸ್ವತಂತ್ರ ವ್ಯಕ್ತಿಗಳಾಗಿರಬೇಕು ಎಂಬ ಹೈಕೋರ್ಟ್ ತೀರ್ಪನ್ನು ನ್ಯಾಯಮೂರ್ತಿಗಳಾದ ರೊಹಿಂಗ್ಟನ್ ಫಾಲಿ ನಾರಿಮನ್, ಬಿಆರ್ ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರ ನೇತೃತ್ವದ ನ್ಯಾಯಪೀಠ ಎತ್ತಿಹಿಡಿಯಿತು.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್ ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಸರ್ಕಾರದ ಯಾವುದೇ ಕಚೇರಿಯಲ್ಲಿ ಹುದ್ದೆ ಹೊಂದಿರುವ ವ್ಯಕ್ತಿಯೊಬ್ಬರನ್ನು ಚುನಾವಣಾ ಆಯುಕ್ತರನ್ನಾಗಿ ಯಾವುದೇ ರಾಜ್ಯವೂ ನೇಮಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

 Government Servants Should Not Be Appointed As Election Commissioners: Supreme Court

ಗೋವಾದ ರಾಜ್ಯ ಚುನಾವಣಾ ಆಯೋಗವು ಮಾರ್ಗೋವಾ, ಮಪುಸಾ, ಮರ್ಮುಗೋವಾ, ಸಾಂಗುಯೆಮ್ ಮತ್ತು ಕುಪೆಮ್ ಪಾಲಿಕೆಗಳಿಗೆ ಚುನಾವಣಾ ಅಧಿಸೂಚನೆ ಹೊರಡಿಸಿದ್ದನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ತೀರ್ಪು ನೀಡಲಾಗಿದೆ.

English summary
Supreme Court on Friday said, Central and state governments should not appoint persons holding government office as Election Commissioners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X