ಮೀನುಗಾರರಿಗೆ ನೆರವಾಗಲು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ

ನವದೆಹಲಿ, ಮೇ 15 : ಕೊರೊನಾ ಲಾಕ್ ಡೌನ್‌ನಿಂದಾಗಿ ಮತ್ಸ್ಯೋದ್ಯಮಕ್ಕೂ ತೊಂದರೆ ಉಂಟಾಗಿದೆ. ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೀನುಗಾರರಿಗೆ ನೆರವಾಗಲು 'ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ' ಜಾರಿಗೆ ಬರಲಿದೆ.

ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ನಡೆಸಿದರು. 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನ 3ನೇ ಹಂತದ ಯೋಜನೆಗಳ ವಿವರಣೆಗಳನ್ನು ನೀಡಿದರು. "55 ಲಕ್ಷ ಮೀನುಗಾರರಿಗೆ ಉದ್ಯೋಗ ಒದಗಿಸಲಾಗುತ್ತದೆ" ಎಂದರು.

"ಸರ್ಕಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೆ ತರಲಿದೆ. ಮತ್ಸ್ಯೋದ್ಯಮಕ್ಕೆ ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ. ಮತ್ಸ್ಯೋದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗೆ 11 ಸಾವಿರ ಕೋಟಿ ರೂ. ಗಳನ್ನು ಮೀಸಲಾಗಿಡಲಾಗುತ್ತದೆ" ಎಂದು ವಿವರಿಸಿದರು.

Government To Launch Pradhan Mantri Matsya Sampada Yojana

"ಬಂದರುಗಳ ಮೂಲಸೌಕರ್ಯ ಅಭಿವೃದ್ಧಿ, ಉದ್ಯಮದ ಆಧುನೀಕರಣ, ಉತ್ಪಾದನೆ, ಉತ್ಪಾದನಾ ಸಾಮರ್ಥ್ಯ ಹೆಚ್ಚಳ, ಮಾರುಕಟ್ಟೆ ಅಭಿವೃದ್ಧಿ ಸೇರಿದಂತೆ ಮೀನುಗಾರರು ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಕಾರ್ಯಗಳ ನಿರ್ವಹಣೆಗೆ ಆದ್ಯತೆ ನೀಡಲಾಗುತ್ತದೆ" ಎಂದು ಹಣಕಾಸು ಸಚಿವರು ಹೇಳಿದರು.

"ಹೊಸ ಉಪಕ್ರಮಗಳಿಂದ ಮುಂದಿನ ಐದು ವರ್ಷಗಳಲ್ಲಿ ಮೀನು ಉತ್ಪಾದನಾ ಸಾಮರ್ಥ್ಯ 70 ಲಕ್ಷ ಟನ್‌ಗಳಿಗೆ ಏರಿಕೆಯಾಗಲಿದೆ. 55 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದ್ದು, 1 ಲಕ್ಷ ಕೋಟಿಯಷ್ಟು ರಫ್ತು ಹೆಚ್ಚಾಗಲಿದೆ" ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

"ಮೀನುಗಾರಿಕೆ ನಿಷೇಧ ಇರುವ ಸಂದರ್ಭದಲ್ಲಿ ಮೀನುಗಾರರಿಗೆ ನೆರವಾಗಲು ವೈಯಕ್ತಿಕ ಮತ್ತು ದೋಣಿ ವಿಮೆಗಳನ್ನು ಜಾರಿಗೆ ತರಲಾಗುತ್ತದೆ. ಮೀನುಗಾರರು ಕೃಷಿಯೊಡನೆಯೂ ಅವಿನಾಭಾವ ಸಂಬಂಧ ಹೊಂದಿದ್ದಾರೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+