ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪರ ಬ್ಯಾಟ್ ಬೀಸಿದ ತಮಿಳುನಾಡಿನ ಸಿ.ಎಂ ಎಂ.ಕೆ ಸ್ಟಾಲಿನ್
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯಪಾಲರ ಕಾರ್ಯವೈಖರಿಯ ಬಗ್ಗೆ ಕಟುವಾಗಿ ಟೀಕೆ ಮಾಡಿದ್ದಾರೆ.
ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಾಜ್ಯಪಾಲರು ಹಾಗೂ ಆಡಳಿತ ಪಕ್ಷಗಳ ನಡುವೆ ತಿಕ್ಕಾಟವಿತ್ತು. ಈ ತಿಕ್ಕಾಟವು ಇದೀಗ ಕರ್ನಾಟಕಕ್ಕೂ ವಿಸ್ತರಿಸಿದೆ. ಕರ್ನಾಟಕದಲ್ಲೂ ರಾಜ್ಯಪಾಲರು ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ವೈಮನಸ್ಸು ಮೂಡಿದೆ. ಇಷ್ಟು ದಿನಗಳ ಕಾಲ ತಿಳಿಯಾಗಿದ್ದ ಈ ಮುಸುಕಿನ ಗುದ್ದಾಟವು ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಜನವರಿ 22 ರಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಜಂಟಿ ಅಧಿವೇಶನಕ್ಕೆ ಸಿದ್ಧಪಡಿಸಿದ್ದ ಭಾಷಣವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮೊದಲು ಓದಿರಲಿಲ್ಲ. ಬದಲಿಗೆ ಅವರೇ ಬರೆದುಕೊಂಡು ಬಂದಿದ್ದ ಭಾಷಣವನ್ನು ಓದಿದ್ದರು ಇದು ತೀವ್ರ ಟೀಕೆಗೆ ಕಾರಣವಾಗಿತ್ತು.

ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸನಲ್ಲಿ ಟ್ವೀಟ್ ಮಾಡಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, ಮೊದಲು ತಮಿಳುನಾಡು. ನಂತರ ಕೇರಳ, ಈಗ ಕರ್ನಾಟಕ. ಈ ಮಾದರಿ ಸ್ಪಷ್ಟ ಮತ್ತು ಉದ್ದೇಶಪೂರ್ವಕವಾಗಿದೆ. ರಾಜ್ಯಪಾಲರು ರಾಜ್ಯ ಸರ್ಕಾರಗಳು ಸಿದ್ಧಪಡಿಸಿದ ಭಾಷಣವನ್ನು ಓದಲು ನಿರಾಕರಿಸುತ್ತಾರೆ ಮತ್ತು ಪಕ್ಷದ ಏಜೆಂಟರಂತೆ ವರ್ತಿಸುತ್ತಾರೆ, ಸರಿಯಾಗಿ ಚುನಾಯಿತ ರಾಜ್ಯ ಸರ್ಕಾರಗಳನ್ನು ದುರ್ಬಲಗೊಳಿಸುತ್ತಾರೆ ಎಂದು ಅವರು ದೂರಿದ್ದಾರೆ.
ನಾನು ಮೊದಲೇ ಹೇಳಿದಂತೆ ಈಗಿರುವ ಏಕೈಕ ಪರಿಹಾರವೆಂದರೆ ಮೊದಲ ವಾರ್ಷಿಕ ವಿಧಾನಸಭಾ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಪ್ರಾರಂಭಿಸುವ ಅಭ್ಯಾಸವನ್ನು ಕೊನೆಗೊಳಿಸುವುದು.
#DMK ಭಾರತದಾದ್ಯಂತ ಸಮಾನ ಮನಸ್ಕ ವಿರೋಧ ಪಕ್ಷಗಳೊಂದಿಗೆ ಸಮಾಲೋಚಿಸಿ ಮುಂದಿನ ಸಂಸತ್ತಿನ ಅಧಿವೇಶನದಲ್ಲಿ ಈ ಬಳಕೆಯಲ್ಲಿಲ್ಲದ ಮತ್ತು ಅಪ್ರಸ್ತುತ ಅಭ್ಯಾಸವನ್ನು ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅನುಸರಿಸುತ್ತದೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ
ಇನ್ನು ರಾಜ್ಯಪಾಲರ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಖಂಡಿಸಿದ್ದಾರೆ. ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ.
ಸಂವಿಧಾನದ ಕಲಂ 176 ಮತ್ತು 163 ರಂತೆ ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡು ಬಂದಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
First Tamil Nadu. Then Kerala. Now Karnataka. The pattern is clear and deliberate.
— M.K.Stalin - தமிழ்நாட்டை தலைகுனிய விடமாட்டேன் (@mkstalin) January 22, 2026
Governors refusing to read the speech prepared by state governments and behaving like party agents, undermining duly elected state governments.
As I stated earlier, the only solution now is to… https://t.co/ycmPmBXciz
ಇದನ್ನು ನಮ್ಮ ಪಕ್ಷ ಮತ್ತು ಸರ್ಕಾರ, ಶಾಸಕರು, ಎಂಎಲ್‌ಸಿ ಗಳು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ ಎಂದು ದೂರಿದ್ದಾರೆ.












Click it and Unblock the Notifications