ಭಾರತ್ ಬಯೋಟೆಕ್ ಮತ್ತು ಎಸ್ಐಐಗಳಿಗೆ ಕೇಂದ್ರದಿಂದ 4,500 ಕೋಟಿ ರೂ. ಸಾಲ
ನವದೆಹಲಿ, ಏಪ್ರಿಲ್ 19: ಕೋವಿಡ್-19 ಲಸಿಕೆ ಉತ್ಪಾದಕ ಕಂಪೆನಿಗಳಾದ ಭಾರತ್ ಬಯೋಟೆಕ್ ಮತ್ತು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗಳಿಗೆ ಸಾಲ ಪೂರೈಕೆ ಮಾಡಲು ಹಣಕಾಸು ಸಚಿವಾಲಯ ಸೋಮವಾರ ಅನುಮೋದನೆ ನೀಡಿದೆ.
ಈ ಸಾಲವನ್ನು ಕೋವಿಡ್-19 ಉಸ್ತುವಾರಿ ನಡೆಸುತ್ತಿರುವ ನೋಡಲ್ ಸಚಿವರಿಗೆ ಮಂಜೂರು ಮಾಡಲಾಗುತ್ತದೆ. ಅವರು ಅದನ್ನು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಈ ಎರಡೂ ಕಂಪೆನಿಗಳಿಗೆ ವರ್ಗಾವಣೆ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ.
ಪುಣೆ ಮೂಲದ ಎಸ್ಐಐಗೆ 3,000 ಕೋಟಿ ರೂ ಮತ್ತು ಹೈದರಾಬಾದ್ ಮೂಲಕ ಭಾರತ್ ಬಯೋಟೆಕ್ ಕಂಪೆನಿಗೆ 1,500 ಕೋಟಿ ರೂ ಸಾಲ ಒದಗಿಸಲು ಸಚಿವಾಲಯ ಅಂಗೀಕಾರ ನೀಡಿದೆ. ಈ ಮೊತ್ತವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. ಕೋವಿಡ್ ಲಸಿಕೆಗಳ ಉತ್ಪಾದನೆಯ ಸಾಮರ್ಥ್ಯವನ್ನು ತಿಂಗಳಿಗೆ 100 ಮಿಲಿಯನ್ ಡೋಸ್ಗಿಂತಲೂ ಅಧಿಕ ಮಟ್ಟಕ್ಕೆ ವೃದ್ಧಿಸಲು 3,000 ಕೋಟಿ ರೂ ಸಾಲ ನೀಡುವಂತೆ ಎಸ್ಐಐ ಸಿಇಒ ಆದಾರ್ ಪೂನಾವಲ್ಲಾ ಸರ್ಕಾರವನ್ನು ಕೋರಿದ್ದರು. ಅದರ ಬೆನ್ನಲ್ಲೇ ಸರ್ಕಾರ ಈ ನೆರವು ನೀಡಲು ಮುಂದಾಗಿದೆ.

ಕೆಲವು ದಿನಗಳ ಹಿಂದಷ್ಟೇ ಕೋವ್ಯಾಕ್ಸಿನ್ ಲಸಿಕೆ ಉತ್ಪಾದಕ ಭಾರತ್ ಬಯೋಟೆಕ್ ಸಂಸ್ಥೆಗೆ ಸೌಲಭ್ಯ ವೃದ್ಧಿಯ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ 65 ಕೋಟಿ ರೂ ಅನುದಾನ ಘೋಷಿಸಿತ್ತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications