ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: 21 ಬೆಟ್ಟಿಂಗ್ ಆಪ್ ಮತ್ತು ಆನ್‌ಲೈನ್ ಮೇಲೆ ನಿರ್ಬಂಧ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತನಿಖೆಯ ಮಧ್ಯೆ ಐಟಿ ಸಚಿವಾಲಯವು ಮಹದೇವ್ ಬುಕ್ ಆನ್‌ಲೈನ್ ಮತ್ತು ಇತರ 21 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಭಾನುವಾರ ನಿರ್ಬಂಧಿಸುವ ಆದೇಶವನ್ನು ಹೊರಡಿಸಿದೆ.
ಇಡಿ ಶಿಫಾರಸಿನ ನಂತರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ಆದೇಶದ ಪ್ರಕಾರ 21 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳು ಬಂದ್ ಆಗಲಿವೆ.

ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಈ ಬಗ್ಗೆ ಹೇಳಿಕೆ ನೀಡಿದ್ದು, "ಸೆಕ್ಷನ್ 69 ಎ ಐಟಿ ಕಾಯಿದೆ ಅಡಿಯಲ್ಲಿ ವೆಬ್‌ಸೈಟ್/ಆ್ಯಪ್ ಅನ್ನು ಮುಚ್ಚಲು ಶಿಫಾರಸು ಮಾಡುವ ಎಲ್ಲಾ ಅಧಿಕಾರವನ್ನು ಛತ್ತೀಸ್‌ಗಢ ಸರ್ಕಾರ ಹೊಂದಿದೆ. ಆದರೆ, ಅವರು ಹಾಗೆ ಮಾಡಲಿಲ್ಲ ಮತ್ತು ಕಳೆದ 1.5 ವರ್ಷಗಳಿಂದ ತನಿಖೆ ನಡೆಸುತ್ತಿರುವಾಗ ರಾಜ್ಯ ಸರ್ಕಾರದಿಂದ ಅಂತಹ ಯಾವುದೇ ಮನವಿ ಮಾಡಲಾಗಿಲ್ಲ. ವಾಸ್ತವವಾಗಿ, ಇಡಿಯಿಂದ ಮೊದಲ ಮತ್ತು ಏಕೈಕ ವಿನಂತಿಯನ್ನು ಸ್ವೀಕರಿಸಲಾಗಿದೆ ಮತ್ತು ಅದರ ಮೇಲೆ ಕಾರ್ಯನಿರ್ವಹಿಸಲಾಗಿದೆ. ಛತ್ತೀಸ್‌ಗಢ ಸರ್ಕಾರವು ಇದೇ ರೀತಿಯ ವಿನಂತಿಗಳನ್ನು ಮಾಡಬಹುದಿತ್ತು" ಎಂದು ಹೇಳಿದ್ದಾರೆ.
ಛತ್ತಿಸ್‌ಗಢ ಸಿಎಂ ವಿರುದ್ಧ ಆರೋಪ
ಮಹಾದೇವ್ ಬುಕ್‌ನ ಮಾಲೀಕರನ್ನು 2023ರ ಆಗಸ್ಟ್‌ನಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 19 ರ ಅಡಿಯಲ್ಲಿ ಬಂಧಿಸಲಾಯಿತು.
ಕಳೆದ ವಾರ, ಫೋರೆನ್ಸಿಕ್ ವಿಶ್ಲೇಷಣೆ ಮತ್ತು 'ನಗದು ಕೊರಿಯರ್' ನೀಡಿದ ಹೇಳಿಕೆಯು ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲಿಕರು, ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ಸುಮಾರು ₹ 508 ಕೋಟಿ ಪಾವತಿಸಿದ್ದಾರೆ ಎಂಬ ಸ್ಫೋಟಕ ಆರೋಪಗಳನ್ನು ಮಾಡಿದ್ದರು.
ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಮಾಲೀಕರಿಂದ ಇದುವರೆಗೆ ₹ 508 ಕೋಟಿ ಸ್ವೀಕರಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ನಡೆಯುತ್ತಿರುವ ತನಿಖೆಯನ್ನು ಉಲ್ಲೇಖಿಸಿ ಶುಕ್ರವಾರ ಹೇಳಿದೆ.
ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಲಿಂಕ್ ಮಾಡಲಾದ ಮನಿ ಲಾಂಡರಿಂಗ್ ನೆಟ್‌ವರ್ಕ್‌ಗಳ ವಿರುದ್ಧ ಛತ್ತೀಸ್‌ಗಢದಲ್ಲಿ ಇಡಿ ದಾಳಿ ನಡೆಸಿದ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ, ಇದು ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಅಡಿಯಲ್ಲಿ ತನಿಖೆ ನಡೆಸುತ್ತಿದೆ.
ಇಡಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಾಘೆಲ್ ಅವರು ಮಾನಹಾನಿ ಮಾಡಲು ಇಡಿ ಮೊದಲು ತನಗೆ ಹತ್ತಿರವಿರುವ ಜನರ ಮನೆಗಳ ಮೇಲೆ ದಾಳಿ ನಡೆಸಿತು ಆರೋಪಿಸಿದ್ದಾರೆ.
ಮಹದೇವ್ ಆಪ್ ಮಾಲಿಕರು ತಮಗೆ ₹ 508 ಕೋಟಿ ಪಾವತಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿಕೆ ನೀಡಿದ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಶುಕ್ರವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications