Government Employees: ಸರ್ಕಾರಿ ಉದ್ಯೋಗಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು, ಜೂನ್‌ 25: ಇನ್ಮೇಲೆ ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶವನ್ನು ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಹೇಳಿದೆ.

ಈ ಕುರಿತು ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದೆ. ಇನ್ನು ಮುಂದೆ ಬೆಳಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದೆ, ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದ್ದು, ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್​​​ ಆದೇಶವೊಂದನ್ನು ನೀಡಿದೆ.

Govt Employees Must Reach Office By 9 15 Am Or Half-Day Leave Cut

ಸರ್ಕಾರಿ ನೌಕರರರು ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ನೌಕರರು ತಮ್ಮ ಕಚೇರಿಗಳಿಗೆ ಬೆಳಗ್ಗೆ 9:15 ಕ್ಕೆ ತಲುಪಬೇಕು ಹಾಗೂ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಹಾಜರಾತಿಯನ್ನು ಹಾಕಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳು ಕಚೇರಿಗೆ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವವರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದನ್ನು ತಡೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ರವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಸಿಬ್ಬಂದಿಗಳು ಒಂದು ವೇಳೆ ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನೀಡಿದೆ.

ಇನ್ನೂ ಸಿಬ್ಬಂದಿಗಳಿಗೆ ಒಂದು ದಿನ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಮುಂಚಿತವಾಗಿ ತಿಳಿಸಲು ನೌಕರರಿಗೆ ಸುತ್ತೋಲೆ ಹೇಳಲಾಗಿದೆ. ಇದಕ್ಕಾಗಿ ಕ್ಯಾಶುಯಲ್ ರಜೆಯನ್ನು ಬಳಸಿಕೊಳ್ಳಬೇಕು ಎಂದು ಹೇಳಿದೆ. ಇನ್ನು ಈ ಬಗ್ಗೆ ಹಿರಿಯ ಅಧಿಕಾರಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಸಿಬ್ಬಂದಿಗಳು ಸಂಜೆ 7 ರ ನಂತರ ಹೊರಡುವುದರಿಂದ ಅವರಿಗೆ ನಿಗದಿತ ಕೆಲಸದ ಸಮಯವಿಲ್ಲ. ಹೆಚ್ಚಿದ ಡಿಜಿಟಲೀಕರಣವು ಅನೇಕ ಫೈಲ್‌ಗಳನ್ನು ವಿದ್ಯುನ್ಮಾನವಾಗಿ ಅವರಿಗೆ ಲಭ್ಯವಾಗುವಂತೆ ಮಾಡಿದೆ. ಇದು ಮನೆಯಿಂದಲೂ ಕೆಲಸ ಮಾಡುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಕೋವಿಡ್-19ನಿಂದ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಬಳಕೆಯನ್ನು ಅಮಾನತುಗೊಳಿಸಲಾಗಿತ್ತು. ಆದರೆ ಇದೀಗ ಆ ವ್ಯವಸ್ಥೆಯನ್ನು ಮತ್ತೆ ಜಾರಿ ಮಾಡಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಹಾಕಲೇಬೇಕು ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+