ಮಾತುಕತೆಗೆ ಸಿದ್ಧ ಎಂದು ಕೇಂದ್ರ ಹೇಳುತ್ತಿರುವುದು ಸುಳ್ಳು: ರಾಕೇಶ್ ಟೀಕಾಯತ್
ರೈತರ ಜತೆ ಮಾತುಕತೆಗೆ ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳುತ್ತಿರುವುದು ಸುಳ್ಳು ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟೀಕಾಯತ್ ಆರೋಪಿಸಿದ್ದಾರೆ.
ರಾಯಪುರದಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಟೀಕಾಯತ್ ಕೇಂದ್ರ ಸರ್ಕಾರವು ಮಾಧ್ಯಮಗಳಿಗೆ ಸುಳ್ಳು ಹೇಳುತ್ತಿದೆ. ಅದು ಷರತ್ತುಬದ್ದ ಮಾತುಕತೆಗಳನ್ನು ಮಾತ್ರ ನಡೆಸುತ್ತದೆ.
ಇದರಲ್ಲಿ ರೈತರು ಭಾಗವಹಿಸುವುದಿಲ್ಲ. ಈಗಾಗಲೇ ಕೇಂದ್ರ ಸರ್ಕಾರ ಕಾಯ್ದೆ ರಚಿಸಿದ್ದು, ರೈತರು ಸಹಿ ಹಾಕಬೇಕೆಂಬುದು ಕೇಂದ್ರ ಸರ್ಕಾರದ ಒತ್ತಾಯ ಮಾಡುತ್ತಿದೆ ಎಂದು ಟೀಕಾಯತ್ ಹೇಳಿದ್ದಾರೆ.

'ನಮ್ಮ ಮುಂದಿನ ಗುರಿ ಮಾಧ್ಯಮಗಳು' ಎಂದು ಹೇಳಿದ್ದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಇದನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾವು ಮಾಧ್ಯಮಗಳ ವಿರುದ್ಧವಾಗಿ ಏನನ್ನೂ ಮಾತನಾಡಿಲ್ಲ. ಕೇಂದ್ರ ಸರ್ಕಾರದ ಮುಂದಿನ ಗುರಿ ಮಾಧ್ಯಮಗಳು ಎಂದು ಹೇಳಿದ್ದೇನೆ ಎಂದು ಟೀಕಾಯತ್ ಸ್ಪಷ್ಟನೆ ನೀಡಿದ್ದಾರೆ.
ನಾವು ಛತ್ತೀಸ್ಗಢದ ರೈತರ ಸಮಸ್ಯೆಗಳ ವಿರುದ್ಧ ಹೋರಾಡಲಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದ ಎಲ್ಲರೂ ಹೋರಾಡೋಣ ಎಂದು ಟಿಕಾಯತ್ ಕರೆ ನೀಡಿದ್ದಾರೆ.
ಎಲ್ಲರೂ ನಮ್ಮೊಂದಿಗೆ ಸೇರಬೇಕು. ಕೇಂದ್ರದ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳಾಗಿರುತ್ತವೆ. ನೀವು ಉಳಿಯಬೇಕೆಂದರೆ ನಮ್ಮೊಂದಿಗೆ ಕೈಜೋಡಿಸಿ, ಇಲ್ಲದಿದ್ದರೆ ನಿಮಗೂ ತೊಂದರೆಯಾಗುತ್ತದೆ.
ರೈತರು ಪ್ರತಿಭಟನಾ ಹಾದಿಯನ್ನು ಬಿಟ್ಟು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಹಾದಿಗೆ ಬರಬೇಕೆಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದರು.
ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್ ಬಂದ್'ಗೆ ಕರೆ ನೀಡಿತ್ತು. ಸಾಕಷ್ಟು ಸಂಘ ಸಂಸ್ಥೆಗಳು ಈ ಪ್ರತಿಭಟನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿವೆ.
ಈ ಬೆಳವಣಿಗೆ ಕುರಿತು ಗ್ವಾಲಿಯರ್ ನ ಕೃಷಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ತೋಮರ್ ಅವರು, ಪ್ರತಿಭಟನಾ ಹಾದಿ ಬಿಡುವಂತೆ ರೈತರ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ರೈತರು ಎತ್ತಿರುವ ವಿರೋಧಗಳನ್ನು ಪರಿಗಣಿಸಲು ಸರ್ಕಾರ ಸಿದ್ಧವಿದೆ.
ಈ ಹಿಂದೆ ಕೂಡ ಸಾಕಷ್ಟು ಬಾರಿ ಮಾತುಕತೆಗಳು ನಡೆದಿವೆ. ಇನ್ನೂ ಮಾತುಕತೆ ನಡೆಸಬೇಕೆಂದಿದ್ದರೆ, ಮಾತುಕತೆಗೆ ಸರ್ಕಾರ ಸಿದ್ಧವಿದೆ. ರೈತರ ಪ್ರತಿಭಟನೆ ರಾಜಕೀಯ ವಿಚಾರವಾಗಬಾರದು ಎಂದು ಹೇಳಿದ್ದಾರೆ.
ರೈತರ ಪ್ರತಿಭಟನೆ ರಾಜಕೀಯದೊಂದಿಗೆ ಮಿಶ್ರಿತಗೊಳ್ಳಬಾರದು. ರೈತರು ಎಲ್ಲರಿಗೂ ಸೇರಿದವರಾಗಿದ್ದಾರೆ. ಸರ್ಕಾರವು ರೈತರ ಒಕ್ಕೂಟದೊಂದಿಗೆ ಬಹಳ ಸೂಕ್ಷ್ಮವಾಗಿ ಮಾತುಕತೆ ನಡೆಸಿದೆ ಮತ್ತು ಭವಿಷ್ಯದಲ್ಲಿಯೂ ಇದನ್ನು ಮಾಡಲು ಸಿದ್ಧವಾಗಿದೆ ಎಂದು ತಿಳಿಸಿದ್ದರು.
ರೈತರು ಎತ್ತಿರುವ ವಿರೋಧಗಳನ್ನು ಪರಿಗಣಿಸಲು ಸರ್ಕಾರ ಸಿದ್ಧವಿದೆ. ಈ ಹಿಂದೆ ಕೂಡ ಸಾಕಷ್ಟು ಬಾರಿ ಮಾತುಕತೆಗಳು ನಡೆದಿವೆ. ಇನ್ನೂ ಮಾತುಕತೆ ನಡೆಸಬೇಕೆಂದಿದ್ದರೆ, ಮಾತುಕತೆಗೆ ಸರ್ಕಾರ ಸಿದ್ಧವಿದೆ. ರೈತರ ಪ್ರತಿಭಟನೆ ರಾಜಕೀಯ ವಿಚಾರವಾಗಬಾರದು ಎಂದು ಹೇಳಿದ್ದಾರೆ. ರೈತರ ಪ್ರತಿಭಟನೆ ರಾಜಕೀಯದೊಂದಿಗೆ ಮಿಶ್ರಿತಗೊಳ್ಳಬಾರದು. ರೈತರು ಎಲ್ಲರಿಗೂ ಸೇರಿದವರಾಗಿದ್ದಾರೆ. ಸರ್ಕಾರವು ರೈತರ ಒಕ್ಕೂಟದೊಂದಿಗೆ ಬಹಳ ಸೂಕ್ಷ್ಮವಾಗಿ ಮಾತುಕತೆ ನಡೆಸಿದೆ ಮತ್ತು ಭವಿಷ್ಯದಲ್ಲಿಯೂ ಇದನ್ನು ಮಾಡಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications