ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ, ಮಾರ್ಚ್ 14: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
Recommended Video
Excise duty on petrol and diesel was hiked by Rs 3 per litre |ONEINDIA KANNADA
ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆಯಲ್ಲಿ ತೀವ್ರ ಕುಸಿತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದರ ಜೊತೆಗೆ ಪೆಟ್ರೋಲ್ ಮೇಲೆ ರಸ್ತೆ ಸುಂಕ ಲೀಟರ್ ಗೆ 1 ರೂಪಾಯಿ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಹೆಚ್ಚಿಸಲಾಗಿದೆ.

ಪೆಟ್ರೋಲ್ ಮೇಲೆ ವಿಶೇಷ ತೆರಿಗೆಯನ್ನು ಲೀಟರ್ ಗೆ 2 ರೂಪಾಯಿಯಿಂದ 8 ರೂಪಾಯಿಗೆ ಹೆಚ್ಚಳ ಮಾಡಿದ್ದು ಡೀಸೆಲ್ ಗೆ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.












Click it and Unblock the Notifications