ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18 ವರ್ಷಕ್ಕಿಂತ ಮೇಲ್ಪಟ್ಟ ಶೇ.66ರಷ್ಟು ಮಂದಿಗೆ ಕನಿಷ್ಠ ಒಂದು ಡೋಸ್ ಕೊರೊನಾ ಲಸಿಕೆ

|
Google Oneindia Kannada News

ನವದೆಹಲಿ,ಸೆಪ್ಟೆಂಬರ್ 23: ಭಾರತದಲ್ಲಿ 18 ವರ್ಷ ಮೇಲ್ಪಟ್ಟವರ ಪೈಕಿ ಶೇ.66ರಷ್ಟು ಮಂದಿ ಇದುವರೆಗೆ ಕನಿಷ್ಠ ಒಂದು ಡೋಸ್ ಕೊರೊನಾ ಲಸಿಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಯಸ್ಕ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರು ಒಂದು ಡೋಸ್ ಕೊರೊನಾ ಲಸಿಕೆ ಪಡೆದಿದ್ದಾರೆ. ಕಾಲು ಭಾಗದಷ್ಟು ಜನರು ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ ಇದು ಒಂದು ಪ್ರಮುಖ ಮೈಲುಗಲ್ಲಿ ಎಂದು ನೀತಿ ಆಯೋಗ ತಿಳಿಸಿದೆ.

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪಡಿಹಾರ ನೀಡಿ: ಕಾಂಗ್ರೆಸ್ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪಡಿಹಾರ ನೀಡಿ: ಕಾಂಗ್ರೆಸ್

ಒಟ್ಟು 61.85 ಕೋಟಿ ಭಾರತೀಯರಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದ್ದು, ಇದುವರೆಗೆ 21.55 ಕೋಟಿ ಮಂದಿಗೆ ಎರಡನೇ ಡೋಸ್ ನೀಡಲಾಗಿದೆ.

Govt Says 66% Of Indias Adults Vaccinated With At Least First Dose Of Corona Vaccine

ಸೆಪ್ಟೆಂಬರ್ ತಿಂಗಳ ಮೊದಲ 22 ದಿನಗಳಲ್ಲಿ ಇಲ್ಲಿಯವರೆಗೆ 18 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲಸಿಕೆ ಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾಹಿತಿ ನೀಡಿದ್ದಾರೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ವಯಸ್ಕ ಜನಸಂಖ್ಯೆಯ ಶೇ.90ರಷ್ಟು ಮಂದಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್‌ ಅನ್ನು ನೀಡಿವೆ ಎಂದು ತಿಳಿಸಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 80.67 (80,67,26,335) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 4,29,03,090 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಇನ್ನು ಕೆಲವೇ ದಿನಗಳಲ್ಲಿ 64 ಲಕ್ಷ ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 83,39,90,049 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ಕೊರೊನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,923 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 282 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33563421ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,604ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 31,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,28,15,731ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 15,27,443 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 55,83,67,013 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
The central government informed on Thursday that 66 per cent of the eligible adult population in India have been inoculated with at least one dose of a Covid-19 vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X