ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮಾಜಿಕ ಜಾಲತಾಣ ಖಾತೆ ಜೊತೆ ಆಧಾರ್ ಜೋಡಣೆ: ಸ್ಪಷ್ಟನೆ

|
Google Oneindia Kannada News

Recommended Video

Should we link Social Media account to Aadhaar ? | Facebook | Aadhar card | Oneindia Kannada

ನವದೆಹಲಿ, ಫೆಬ್ರವರಿ 06: ಸಾಮಾಜಿಕ ಜಾಲ ತಾಣ ಖಾತೆಗಳ ಜೊತೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಕುರಿತಂತೆ ಹರಡಿರುವ ಸುದ್ದಿಗಳ ಬಗ್ಗೆ ಬುಧವಾರದಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವ ಕುರಿತು ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಸಾಮಾಜಿಕ ಜಾಲತಾಣಕ್ಕೆ ಆಧಾರ್ ಜೋಡಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಸುಳ್ಳು ಸುದ್ದಿ ಹಬ್ಬಿಸುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ದೇಶವಿರೋಧಿ ಸಂದೇಶ, ಅಶ್ಲೀಲ ವೀಡಿಯೋ, ಸುಳ್ಳುಸುದ್ದಿ ತಡೆಯಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

Govt says, no proposal to link social media users profiles with Aadhaar

ಚೆಲ್ಡ್ ಪೋರ್ನೊಗ್ರಾಫಿ ತಡೆಗಟ್ಟಲು ಅಗತ್ಯ ಕ್ರಮ ಜರುಗಿಸಲಾಗುತ್ತಿದೆ. ರೆವೇಂಜ್ ಪೋರ್ನ್ ಅಭಿಯಾನಕ್ಕೆ ಗೂಗಲ್ ಸೇರಿದಂತೆ ಹಲವು ಸಂಸ್ಥೆಗಳು ಕೈಜೋಡಿಸಿವೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದರು.

ಸಾಮಾಜಿಕ ಜಾಲ ತಾಣಗಳಿಂದ ಹರಡುವ ಸುಳ್ಳುಸುದ್ದಿಗಳ ಮೇಲೆ ನಿಯಂತ್ರಣ ಹೊಂದುವುದು ಅಗತ್ಯ ಈ ಬಗ್ಗೆ ವಿಸ್ತೃತ ಚರ್ಚೆ ಅಗತ್ಯವಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಚೀನಾ, ಮಧ್ಯಪ್ರಾಚ್ಯದಲ್ಲಿ ಇಂಥ ವೆನ್ ತಾಣಗಳ ಮೇಲೆ ಸಂಪೂರ್ಣ ನಿಷೇಧ ಹೇರಿದಂತೆ ಭಾರತದಲ್ಲಿ ನಿಷೇಧ ಹೇರಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿರ್ಬಂಧ, ಕಡಿವಾಣ ಕ್ರಮ ತೆಗೆದುಕೊಳ್ಳಬಹುದು ಎಂದು ಸಚಿವರು ಪ್ರತಿಕ್ರಿಯಿಸಿದರು.

ಜಾಮಿಯಾ ಶೂಟರ್ ವಿಡಿಯೋ ಫೇಸ್ಬುಕ್ ನಲ್ಲಿ ಲೈವ್ ಪ್ರಸಾರವಾಗಿದ್ದನ್ನು ಉಲ್ಲೇಖಿಸಿದ ಕಾಂಗ್ರೆಸ್ ಮುಖಂಡ ಗೌರವ್ ಗೊಗಾಯಿ, ಈ ಬಗ್ಗೆ ಸರ್ಕಾರ ಯಾವ ಕ್ರಮ ಜರುಗಿಸಿದೆ ಎಂದು ಪ್ರಶ್ನಿಸಿದರು. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಈ ಸಂದರ್ಭದಲ್ಲಿ ಹೆಚ್ಚು ಹೇಳಲು ಸಾಧ್ಯವಿಲ್ಲ ಎಂದು ರವಿಶಂಕರ್ ಹೇಳಿದರು.

English summary
The government on Wednesday said there is no proposal to link social media profiles of users with their Aadhaar numbers and asserted that steps are being taken to curb spreading of fake news and pornography through social media platforms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X