ಬಜೆಟ್: ದೇಶದಲ್ಲಿ ಮಾನಸಿಕ ಆರೋಗ್ಯಕ್ಕಾಗಿ ಏನಿದು ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ?
ನವದೆಹಲಿ, ಫೆಬ್ರವರಿ 1: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಂತರದಲ್ಲಿ ಸಾರ್ವಜನಿಕರ ಮಾನಸಿಕ ಸ್ಥಿತಿ ಕೆಡುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ರಾಷ್ಟ್ರೀಯ ಟೆಲಿ ಮಂಟಲ್ ಹೆಲ್ತ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 10ನೇ ಬಜೆಟ್ ಮತ್ತು ನಿರ್ಮಲಾ ಸೀತಾರಾಮನ್ ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡುವ ಮೂಲಕ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಪ್ರಾರಂಭಿಸಿದರು. ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಿದರು.
ಸಂಸತ್ತಿನಲ್ಲಿ ತಮ್ಮ ಬಜೆಟ್ 2022 ಭಾಷಣದಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ "ಸಾಂಕ್ರಾಮಿಕವು ಎಲ್ಲಾ ವಯಸ್ಸಿನ ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸಿದೆ. ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳನ್ನು ಉತ್ತಮಗೊಳಿಸಲು, ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು," ಎಂದರು.

ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ ನಿಮ್ಹಾನ್ಸ್ ಬಳಕೆ:
ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮವು 23 ಟೆಲಿ ಮೆಂಟಲ್ ಹೆಲ್ತ್ ಸೆಂಟರ್ ಅನ್ನು ಒಳಗೊಂಡಿರುತ್ತದೆ. ನಿಮ್ಹಾನ್ಸ್ ನೋಡಲ್ ಕೇಂದ್ರ ಮತ್ತು ಐಐಐಟಿ ಬೆಂಗಳೂರು ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ ತಾಂತ್ರಿಕ ಬೆಂಬಲವನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Recommended Video
ಕೇಂದ್ರ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ ನೀಡಿಲಾಗಿದ್ದು, ಇದಕ್ಕಾಗಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಸೆಂಟರ್ ಫಾರ್ ಎಕ್ಸ್ ಲೆನ್ಸ್ ಎಂಬ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಈ ಕಾರ್ಯಕ್ರಮವು 23 ಕೇಂದ್ರಗಳನ್ನು ಒಳಗೊಂಡಿರುತ್ತದೆ. ಇದನ್ನು ಬೆಂಗಳೂರಿನ ನಿಮ್ಹಾನ್ಸ್ ನಿರ್ವಹಣೆ ಮಾಡಲಿದೆ. ಬೆಂಗಳೂರಿನ ಐಐಐಟಿ ಸಂಸ್ಥೆ ತಾಂತ್ರಿಕ ನೆರವು ನೀಡಲಿದೆ. ಇದರಿಂದಾಗಿ ಮಾನಸಿಕ ಆರೋಗ್ಯದ ನಿರ್ವಹಣೆ ಭವಿಷ್ಯದಲ್ಲಿ ಕರ್ನಾಟಕ ಮುಂದಾಳತ್ವ ವಹಿಸಿ ಮಾದರಿಯಾಗಿ ನಿಲ್ಲಲಿದೆ. ಇಂತಹ ಅವಕಾಶವನ್ನು ರಾಜ್ಯಕ್ಕೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಚಿವ ಡಾ ಸುಧಾಕರ್ ಶ್ಲಾಘಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮಾಂಡವೀಯಾ ಟ್ವೀಟ್:
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಟ್ವಿಟರ್‌ನಲ್ಲಿಈ ಉಪಕ್ರಮವನ್ನು ಘೋಷಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಿಮ್ಹಾನ್ಸ್ ಅಡಿಯಲ್ಲಿ 23 ದೂರವಾಣಿ-ಮಾನಸಿಕ ಆರೋಗ್ಯ ಶ್ರೇಷ್ಠತಾ ಕೇಂದ್ರಗಳ ಜಾಲದೊಂದಿಗೆ ಎಲ್ಲರಿಗೂ ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆಯನ್ನು ಖಚಿತಪಡಿಸುತ್ತದೆ ಎಂದು ಡಾ. ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಸಾರ್ವಜನಿಕರಿಗಾಗಿ ಸಬ್ಸಿಡಿ ಘೋಷಣೆ:
2020ರಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಂತರ ಆರ್ಥಿಕತೆ ಅಡ್ಡಿಯಾದ ಹಲವು ಅಂಶಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ಟೀಕೆಗಳ ನಡುವೆ ರಸ್ತೆ, ರೈಲ್ವೆ ಮತ್ತು ಕೈಗೆಟುಕುವ ವಸತಿಗಾಗಿ ಹೆಚ್ಚಿನ ಸಬ್ಸಿಡಿ ಅನ್ನು ಘೋಷಿಸಲಾಗಿದ್ದು, ಅದಕ್ಕಾಗಿ ಹೆಚ್ಚು ಹಣವನ್ನು ಖರ್ಚು ಮಾಡಲಾಗುತ್ತಿದೆ.
ಕೈಗೆಟುಕುವ ದರದಲ್ಲಿ ವಸತಿ:
ಸಣ್ಣ ಮತ್ತು ಮಧ್ಯಮ ಗಾತ್ರದ ವ್ಯವಹಾರಗಳಿಗೆ 'ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ'ಯನ್ನು ಮಾರ್ಚ್ 2023 ರವರೆಗೆ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. 2022-23ರಲ್ಲಿ ಸಾರ್ವಜನಿಕರಿಗೆ ವಸತಿಯು ಕೈಗೆಟುಕುವ ದರದಲ್ಲಿ ಸಿಗುವುದಕ್ಕಾಗಿ 480 ಶತಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.
ಮುಂದಿನ ಮೂರು ವರ್ಷಗಳಲ್ಲಿ 400 ಇಂಧನ-ಸಮರ್ಥ ರೈಲುಗಳನ್ನು ತಯಾರಿಸಲಾಗುವುದು. 2022-23ರಲ್ಲಿ ಹೆದ್ದಾರಿ ವಿಸ್ತರಣೆಗೆ 200 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅಂಚೆ ಇಲಾಖೆಯಲ್ಲಿ ಖಾತೆ ಮೂಲಕ ಹಣ ವರ್ಗಾವಣೆ:
ಭಾರತದಲ್ಲಿನ ಎಲ್ಲಾ 1.5 ಲಕ್ಷ ಅಂಚೆ ಕಚೇರಿಗಳು ಕೋರ್ ಬ್ಯಾಂಕಿಂಗ್ ವ್ಯವಸ್ಥೆಗೆ ಸಂಪರ್ಕ ಹೊಂದಿದ್ದು, ಜನರು ತಮ್ಮ ಖಾತೆಗಳನ್ನು ಆನ್‌ಲೈನ್‌ನಲ್ಲಿ ಪ್ರವೇಶಿಸಲು ಮತ್ತು ಅಂಚೆ ಕಚೇರಿ ಖಾತೆಗಳಲ್ಲಿ ಮತ್ತು ಇತರ ಬ್ಯಾಂಕ್‌ಗಳಿಗೆ ಹಣವನ್ನು ವರ್ಗಾಯಿಸಲು ಅನುವು ಮಾಡಿಕೊಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.












Click it and Unblock the Notifications