ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಮ್‌ಡೆಸಿವಿರ್ ಲಸಿಕೆ ಮೇಲಿನ ಆಮದು ಸುಂಕ ರದ್ದುಗೊಳಿಸಿದ ಭಾರತ

|
Google Oneindia Kannada News

ನವದೆಹಲಿ, ಏಪ್ರಿಲ್ 21: ಭಾರತ ಸರ್ಕಾರವು ರೆಮ್‌ಡೆಸಿವಿರ್ ಲಸಿಕೆ ಹಾಗೂ ಅದರ ಕಚ್ಚಾವಸ್ತುಗಳ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸಿದೆ.

ಭಾರತವು ರೆಮ್‌ಡೆಸಿವಿರ್ ಅನ್ನು ರಫ್ತು ಮಾಡುವುದೇ ಹೆಚ್ಚು. ಕೆಲ ದಿನಗಳ ಹಿಂದಿನವರೆಗೂ ಸುಮಾರು 100 ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಇತ್ತೀಚೆಗೆ ರಫ್ತು ನಿಷೇಧಿಸಲಾಗಿತ್ತು. ಈ ಮಧ್ಯೆ, ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ರಾಜ್ಯಗಳಿಗೆ ರೆಮ್‌ಡೆಸಿವಿರ್ ಔಷಧವನ್ನು ಹಂಚಿಕೆ ಮಾಡಲೂ ಕೇಂದ್ರ ನಿರ್ಧರಿಸಿದೆ.

ಅತಿ ಹೆಚ್ಚು ಕೊರೊನಾ ಲಸಿಕೆ ವ್ಯರ್ಥವಾಗಿರುವುದು ಯಾವ ರಾಜ್ಯದಲ್ಲಿ?ಅತಿ ಹೆಚ್ಚು ಕೊರೊನಾ ಲಸಿಕೆ ವ್ಯರ್ಥವಾಗಿರುವುದು ಯಾವ ರಾಜ್ಯದಲ್ಲಿ?

ರೆಮ್ಡೆಸಿವಿರ್ ಉತ್ಪಾದನೆಗೆ ಬಳಸುವ ಔಷಧೀಯ ಪದಾರ್ಥಗಳ ಮೇಲಿನ ಆಮದು ಸುಂಕವನ್ನೂ ರದ್ದುಪಡಿಸಲಾಗಿದೆ. ರೆಮ್ಡೆಸಿವಿರ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.ದೇಶದಲ್ಲಿ ರೆಮ್ಡೆಸಿವಿರ್ ಕೊರತೆ ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

Govt Waive Import Duty On Covid 19 Drug Remdesivir

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಈ ಜೀವರಕ್ಷಕಗಳ ಬೆಲೆ ಭಾರೀ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ವಿದೇಶದಿಂದ ಆಮದಾಗುವ ವಸ್ತುಗಳಿಗೆ ಶೇ.10ರಷ್ಟು ಸುಂಕ ಇರುತ್ತದೆ.

ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿದ್ದು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಪರಿಣಾಮವಾಗಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿದೆ. ರೆಮ್‌ಡೆಸಿವಿರ್ ಸಹ ಸಾಕಷ್ಟು ಪ್ರಮಾಣದಲ್ಲಿ ದೊರೆಯುತ್ತಿಲ್ಲ ಎಂದು ರಾಜ್ಯ ಸರ್ಕಾರಗಳು ದೂರಿವೆ.

ವೈದ್ಯಕೀಯ ಆಮ್ಲಜನಕ ಅಗತ್ಯವೂ ಇರುವಂಥ ಸಂದರ್ಭಗಳಲ್ಲಿ ರೆಮ್ಡೆಸಿವಿರ್ ಬಳಸಬೇಕೆಂದು ವೈದ್ಯಕೀಯ ಮಾರ್ಗದರ್ಶನ ಇದೆ. ಹೀಗಾಗಿ ವಿವಿಧ ರಾಜ್ಯಗಳಿಗೆ ಮಾಡಲಾದ ಆಮ್ಲಜನಕ ಹಂಚಿಕೆಯನ್ನು ಆಧರಿಸಿ ರೆಮ್ಡೆಸಿವಿರ್ ಪೂರೈಸಲಾಗುವುದು' ಎಂದೂ ಹರ್ಷವರ್ಧನ್ ತಿಳಿಸಿದ್ದಾರೆ.

ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಔಷಧ ಕಾರ್ಯದರ್ಶಿ ಎಸ್.ಅಪರ್ಣಾ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

English summary
The Centre on Tuesday has waived import duty on COVID-19 drug Remdesivir, its raw materials and other components used to make the antiviral drug until 31 October amid surge in COVID-19 cases in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X