• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಳೆಯ ಮತ್ತು ಮಾಲಿನ್ಯಕಾರ ವಾಹನಗಳ ಮೇಲೆ ಗ್ರೀನ್ ಟ್ಯಾಕ್ಸ್!

|

ನವದೆಹಲಿ, ಜನವರಿ.25: ದೇಶದ ಪರಿಸರಕ್ಕೆ ಹಾನಿ ಉಂಟು ಮಾಡುವಂತಾ ಹಳೆಯ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರ್ ಅನುಮೋದನೆ ನೀಡಿದ್ದಾರೆ.

ಭಾರತದಲ್ಲಿ ಹಸಿರು ತೆರಿಗೆ ಜಾರಿಗೊಳಿಸುವುದಕ್ಕೂ ಮೊದಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅನುಮೋದನೆ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ರಾಜ್ಯಗಳ ಪ್ರತಿಕ್ರಿಯೆ ನಂತರದಲ್ಲಿ ಕೇಂದ್ರದ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಈ ಬಗ್ಗೆ ಅಧಿಕೃತವಾಗಿ ಘೋಷಿಸಲಿದೆ.

ಟ್ರಾಫಿಕ್ ನಿಯಮ ಉಲ್ಲಂಘನೆ: ಟ್ರಕ್ ಚಾಲಕನಿಗೆ 6.5 ಲಕ್ಷ ರೂ. ದಂಡ!ಟ್ರಾಫಿಕ್ ನಿಯಮ ಉಲ್ಲಂಘನೆ: ಟ್ರಕ್ ಚಾಲಕನಿಗೆ 6.5 ಲಕ್ಷ ರೂ. ದಂಡ!

ಎಂಟು ವರ್ಷಗಳಿಗಿಂತ ಹಳೆಯ ವಾಹನಗಳ ಮೇಲೆ ಈ ಗ್ರೀನ್ ಟ್ಯಾಕ್ಸ್ ವಿಧಿಸುವುದರ ಜೊತೆಗೆ ಫಿಟ್ನೆಸ್ ಪ್ರಮಾಣಪತ್ರವನ್ನು ನವೀಕರಿಸಬೇಕಾಗುತ್ತದೆ. ಈ ವೇಳೆ ಶೇ.10 ರಿಂದ ಶೇ.25ರಷ್ಟು ರಸ್ತೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.


ಭಾರತದಲ್ಲಿ ಹೊಸ ಸಾರಿಗೆ ನೀತಿ:

ಕಳೆದ 2020ರ ನವೆಂಬರ್ ತಿಂಗಳಿನಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಹೊಸ ಮೋಟಾರು ಕಾಯ್ದೆ ನೀತಿ ಬಗ್ಗೆ ಪ್ರಸ್ತಾಪಿಸುವ ಬಗ್ಗೆ ಘೋಷಿಸಲಾಗಿತ್ತು. ದೇಶದ ಪರಿಸರಕ್ಕೆ ಹಾನಿಯುಂಟು ಮಾಡುವಂತಾ ಹಳೆ ವಾಹನಗಳ ಮೇಲೆ ತೆರಿಗೆ ವಿಧಿಸುವ ಬಗ್ಗೆ ಚರ್ಚಿಸಲಾಗಿತ್ತು.

ರಾಜ್ಯಸಭೆಯಲ್ಲಿ ಈ ಸಂಬಂಧ ಪ್ರಶ್ನೆಯೊಂದಕ್ಕೆ ಸಚಿವ ವಿ.ಕೆ. ಸಿಂಗ್ ಉತ್ತರಿಸಿದ್ದರು. ದೇಶದಲ್ಲಿ ಹಳೆಯ ಮಾಲಿನ್ಯಕಾರಕ ವಾಹನಗಳಿಂದ ಸ್ವಯಂಪ್ರೇರಿತ ಮತ್ತು ಪರಿಸರ ಸ್ನೇಹಿ ಹಂತಹಂತವಾಗಿ ಪರಿಸರ ವ್ಯವಸ್ಥೆಯನ್ನು ರಚಿಸುವ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕ್ಯಾಬಿನೆಟ್‌ಗೆ ಟಿಪ್ಪಣಿ ರೂಪಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ವಿ.ಕೆ.ಸಿಂಗ್ ಉತ್ತರಿಸಿದ್ದರು.

English summary
'Green Tax' on Old And Polluting Vehicles; Minister Nitin Gadkari Approves Proposal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X