Government Jobs: ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದಕ್ಕೂ ಜಿಎಸ್‌ಟಿ ?
ಕೇಂದ್ರ ಸರ್ಕಾರವು ಜಿಎಸ್‌ಟಿ ವಿಚಾರದಲ್ಲಿ ಮತ್ತೊಮ್ಮೆ ದೇಶದಾದ್ಯಂತ ವ್ಯಾಪಕ ಚರ್ಚೆ ಹಾಗೂ ಆಕ್ರೋಶಕ್ಕೆ ಗುರಿಯಾಗಿದೆ. ಈಚೆಗೆ ನಡೆದ ಜಿಎಸ್‌ಟಿ ಸಭೆಯಲ್ಲಿ ಹಲವು ಪ್ರಮುಖ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಪಾಪ್ ಕಾರ್ನ್‌ಗೂ ಮೂರು ಮಾದರಿಯ ಭಿನ್ನ ಜಿಎಸ್‌ಟಿ ವಿಧಿಸಿ ಟೀಕೆ ಹಾಗೂ ಟ್ರೋಲ್‌ಗೆ ಗುರಿಯಾಗಿದೆ. ಇದರ ನಡುವೆ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದಕ್ಕೂ ಜಿಎಸ್‌ಟಿ ವಿಧಿಸಲು ಸರ್ಕಾರ ಮುಂದಾಗಿದೆ ಎನ್ನುವ ವಿಷಯ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಸಹ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಜಿಎಸ್‌ಟಿಯ ಹೊಸ ಬದಲಾವಣೆ ಹಾಗೂ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಜಿಎಸ್‌ಟಿ ವಿಧಿಸಲಾಗುತ್ತಿದೆಯೇ ಏನಿದು ಚರ್ಚೆ ಎನ್ನುವ ಮಾಹಿತಿ ಇಲ್ಲಿದೆ.
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದಕ್ಕೂ ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದು ಕಾಂಗ್ರೆಸ್ ದೂರಿದ್ದು, ಈ ಸಂಬಂಧ ಉತ್ತರ ಪ್ರದೇಶದಲ್ಲಿ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದಕ್ಕೂ ಜಿಎಸ್‌ಟಿ ವಿಧಿಸಲಾಗಿದೆ ಎನ್ನುವ ಆದೇಶವೊಂದನ್ನು ಹಂಚಿಕೊಂಡಿದೆ. ಸರ್ಕಾರವು ಅರ್ಜಿ ಸಲ್ಲಿಸುವುದಕ್ಕೂ ಶೇ 18%ರಷ್ಟು ಜಿಎಸ್‌ಟಿ ವಿಧಿಸುತ್ತಿದೆ ಎನ್ನಲಾಗಿದೆ. ಉತ್ತರ ಪ್ರದೇಶದ ಲಖನೌ ಕಲ್ಯಾಣ್ ಸಿಂಗ್ ಕಾನ್ಸರ್ ಇನ್ಸ್‌ಟಿಟ್ಯೂಟ್ ಹೊರಡಿಸಿರುವ ಪ್ರಕಟಣೆ ವೈರಲ್ ಆಗಿದೆ. ಈ ಕ್ರಮ ದೇಶದಾದ್ಯಂತ ಬರಲಿದೆಯೇ ಎನ್ನುವ ಚರ್ಚೆ ಜೋರಾಗಿದೆ.

ಜಿಎಸ್‌ಟಿ ಜಾರಿ ಮಾಡುವಾಗ ದೇಶದಾದ್ಯಂತ ಏಕ ರೂಪ ದರ ನಿಗದಿ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಜಿಎಸ್‌ಟಿಯಲ್ಲೂ ಹಲವು ಬೆಲೆಯನ್ನು ನಿಗದಿ ಮಾಡಲಾಗಿದೆ. ಉದಾಹರಣೆಗೆ ಈಗ ಪಾಪ್ ಕಾರ್ನ್‌ಗೆ ಹಲವು ದರ ನಿಗದಿ ಮಾಡಿರುವುದು ಆಕ್ರೋಶಕ್ಕೆ ಗುರಿಯಾಗಿದೆ. ಈ ರೀತಿ ಇರುವಾಗಲೇ ಸರ್ಕಾರಿ ಉದ್ಯೋಗದ ಅರ್ಜಿಗೂ ಜಿಎಸ್‌ಟಿ ಎನ್ನುವುದು ಚರ್ಚೆಗೆ ಕಾರಣವಾಗಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ: ಬಿಜೆಪಿ ಸರ್ಕಾರವು ಸರ್ಕಾರದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸುತ್ತದೆ. ಆದರೆ, ಆ ಅರ್ಜಿಗೂ ಜಿಎಸ್‌ಟಿ ವಿಧಿಸುವುದು ಎಷ್ಟು ಸರಿ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ಸರ್ಕಾರವು ಪರೀಕ್ಷೆಯ ಅರ್ಜಿಗಳ ಮೇಲೂ ಜಿಎಸ್‌ಜಿ ವಿಧಿಸಲು ಮುಂದಾಗಿದೆ. ಪರೀಕ್ಷೆಗೆ ಹಾಜಾರಾಗುವುದಕ್ಕೆ (ಅರ್ಜಿಗೆ) ಸಹ ಶೇ 18ರಷ್ಟು ಜಿಎಸ್‌ಟಿ ವಿಧಿಸಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಿ ಉದ್ಯೋಗ ಅರ್ಜಿಗೂ ಸಂಕಷ್ಟ
ಸರ್ಕಾರಿ ಉದ್ಯೋಗಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಎಸ್‌ಟಿ ವಿಧಿಸಲಾಗುತ್ತಿದೆ. ಈಗಾಗಲೇ ಹಲವು ವಸ್ತುಗಳಿಗೆ ಕೇಂದ್ರ ಸರ್ಕಾರ ಜಿಎಸ್‌ಟಿ ವಿಧಿಸುತ್ತಿದೆ. ಇದೀಗ ಬಿಜೆಪಿ ಸರ್ಕಾರ ಪ್ರತಿಯೊಂದು ಸರ್ಕಾರಿ ಉದ್ಯೋಗಗಳ ಅರ್ಜಿಗೆ ಸಹ ಜಿಎಸ್‌ಟಿ ವಿಧಿಸಲು ಮುಂದಾಗಿದೆ ಎಂದು ಪ್ರಿಯಾಂಕಾ ಗಾಂಧಿ ಅವರು ಆರೋಪಿಸಿದ್ದಾರೆ. ಜಿಎಸ್‌ಟಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಲೂಟಿ ಮಾಡುತ್ತಿದೆ ಎಂದು ದೂರಿದ್ದಾರೆ. ಅಗ್ನಿವೀರ್ ಹಾಗೂ ಪ್ರಮುಖ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಜಿಎಸ್‌ಟಿ ಹಾಕುತ್ತಿರುವುದು ಈ ದೇಶದ ಯುವಕರಿಗೆ ಮಾಡುತ್ತಿರುವ ದ್ರೋಹ ಎಂದು ಅವರು ಹೇಳಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications