GST: ಭಾರತೀಯರಿಗೆ ಭರ್ಜರಿ ಗುಡ್‌ನ್ಯೂಸ್: ಈ ವಸ್ತುಗಳಿಗೆ ಜಿಎಸ್‌ಟಿ ಇಲ್ಲ, ದೀಪಾವಳಿ ಗಿಫ್ಟ್‌ ಎಂದ ಮೋದಿ!

ಭಾರತದಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ಜಿಎಸ್‌ಟಿಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಟ್ವೀಟ್ ಮಾಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿನ ತೆರಿಗೆ ಹಂತಗಳನ್ನು ಕಡಿಮೆ ಮಾಡಲಾಗಿದೆ. ಅಲ್ಲದೇ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದ್ದು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ ದೇಶದ ಜನರಿಗೆ ದೀಪಾವಳಿ ಗಿಫ್ಟ್‌ ಕೊಟ್ಟಿರುವುದಾಗಿ ಕೇಂದ್ರ ಸರ್ಕಾರವು ಹೇಳಿಕೊಂಡಿದೆ.

ಜನಸಾಮಾನ್ಯರು ನಿತ್ಯವೂ ಬಳಕೆ ಮಾಡುವಂತಹ ಬೆಣ್ಣೆ, ಎಣ್ಣೆ ಹಾಗೂ ಪಾದರಕ್ಷೆ ಸೇರಿದಂತೆ ಕೆಲವೊಂದು ವಸ್ತುಗಳ ಮೇಲೆ ಜಿಎಸ್‌ಟಿ ಕಡಿಮೆ ಮಾಡಲಾಗಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿ ಇಳಿಕೆ ಮಾಡುವ ಮುನ್ಸೂಚನೆಯನ್ನು ಕೊಟ್ಟಿದ್ದರು.

GST Relief Modi Announces Diwali Gift No Tax on These Items

ಸ್ವಾತಂತ್ರ್ಯೋತ್ಸವ ಭಾಷಣದ ಸಂದರ್ಭದಲ್ಲಿ ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗಾಗಿ ಕೆಲವೊಂದು ಮಹತ್ವದ ಸುಧಾರಣೆಗಳನ್ನು ತರುವ ನಮ್ಮ ಉದ್ದೇಶದ ಬಗ್ಗೆ ನಾನು ಮಾತನಾಡಿದ್ದೆ. ಸಾಮಾನ್ಯ ಜನರಿಗೆ ಜೀವನ ಸುಗಮಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ವಿಶಾಲ ಆಧಾರಿತ ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆ ಮತ್ತು ಈ ಪ್ರಕ್ರಿಯೆಯ ಸುಧಾರಣೆಗಳಿಗಾಗಿ ಕೇಂದ್ರ ಸರ್ಕಾರವು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಕೌನ್ಸಿಲ್‌ (GST Council) ಸಾಮಾನ್ಯ ಜನರು, ರೈತರು, MSMEಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುವ ಜಿಎಸ್‌ಟಿ ದರ ಕಡಿತ ಮತ್ತು ಸುಧಾರಣೆಗಳ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳಿಗೆ ಸಾಮೂಹಿಕವಾಗಿ ಒಪ್ಪಿಗೆ ನೀಡಿದೆ ಎಂದು ಹೇಳಲು ಸಂತೋಷವಾಗುತ್ತಿದೆ ಎಂದು ಮೋದಿ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಜಿಎಸ್‌ಟಿ ಹಂತ (ಶ್ರೇಣಿಯ) ಸುಧಾರಣೆಗಳು ನಮ್ಮ ದೇಶದ ಜನರ ಜೀವನವನ್ನು ಸುಧಾರಿಸುತ್ತದೆ. ಅಲ್ಲದೇ ಎಲ್ಲರಿಗೂ, ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ವ್ಯವಹಾರಗಳಿಗೆ ವ್ಯಾಪಾರ ಮಾಡುವ ಸುಲಭತೆ ಮಾರ್ಗವನ್ನು ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಕೇವಲ ಎರಡು ಹಂತದ ಜಿಎಸ್‌ಟಿ: ಇನ್ನು ಇನ್ಮುಂದೆ ದೇಶದಲ್ಲಿ ಕೇವಲ ಎರಡು ಹಂತದ ಜಿಎಸ್‌ಟಿ ಮಾತ್ರ ಇರಲಿದೆ. ಎರಡು ಹಂತದ ಜಿಎಸ್‌ಟಿ ತೆರಿಗೆ ರಚನೆಗೆ ಜಿಎಸ್‌ಟಿ ಮಂಡಳಿ ಅನುಮೋದನೆ ಕೊಟ್ಟಿದೆ. ಇನ್ಮುಂದೆ ದೇಶದಲ್ಲಿ ಶೇ5 ಮತ್ತು ಶೇ18 ರಷ್ಟು ಜಿಎಸ್‌ಟಿ ಮಾತ್ರ ಇರಲಿದೆ ಎಂದು ಹೇಳಲಾಗಿದೆ.

ಇನ್ನು ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಹಂಚಿಕೊಂಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಎಲ್ಲರಿಗೂ ದೀಪಾವಳಿ ಹಬ್ಬದ ಗಿಫ್ಟ್‌. GST Council ಅನುಮೋದನೆ ನೀಡಿರುವ NextGenGST ಸುಧಾರಣೆಗಳನ್ನು ಪರಿಚಯಿಸಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಈ ವಿಶಾಲ-ಆಧಾರಿತ GST ನಿಖರ ದರ ನಿಗದಿ ಪ್ರಕ್ರಿಯೆ ಮತ್ತು ಪ್ರಕ್ರಿಯೆ ಸುಧಾರಣೆಗಳು ಸಾರ್ವಜನಿಕರ ಜೀವನವನ್ನು ಸುಲಭವಾಗಿಸುತ್ತದೆ. ರೈತರು, MSMEಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರನ್ನು ಬೆಂಬಲಿಸುವುದು ಮತ್ತು ಆರ್ಥಿಕತೆಯ ಪ್ರಮುಖ ವಲಯಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿವೆ.

GST ಸುಧಾರಣೆಗಳು ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತವೆ, ವ್ಯಾಪಾರ ಮಾಡುವ ಸುಲಭತೆಯನ್ನು ಬಲಪಡಿಸುತ್ತವೆ ಮತ್ತು ಸಣ್ಣ ವ್ಯಾಪಾರಿಗಳು, ಉದ್ಯಮಗಳು ಮತ್ತು ಕೈಗಾರಿಕೆಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ. #ViksitBharat ನ ದೃಷ್ಟಿಕೋನವನ್ನು ಬಲಪಡಿಸುತ್ತವೆ ಮತ್ತು ಸುಸ್ಥಿರ ಮತ್ತು ಸಮಗ್ರ ಬೆಳವಣಿಗೆಯತ್ತ ಭಾರತವನ್ನು ಮುನ್ನಡೆಸುತ್ತದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+