• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾದಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ: ಮೋದಿ

By Sachhidananda Acharya
|

ನವದೆಹಲಿ, ಅಕ್ಟೋಬರ್ 26: ಗ್ರಾಹಕರನ್ನು ದಾರಿ ತಪ್ಪಿಸುವ ಜಾಹೀರಾತುಗಳಿಂದ ರಕ್ಷಿಸಲು ಹೊಸ ಗ್ರಾಹಕ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಗ್ರಾಹಕ ರಕ್ಷಣಾ ಸಮ್ಮೇಳನದಲ್ಲಿ ಮಾತನಾಡಿದ ಅವರು, "'ನವ ಭಾರತದ ನಿರ್ಮಾಣ'ದಲ್ಲಿ ಗ್ರಾಹಕರ ರಕ್ಷಣೆಯೂ ನಮ್ಮ ಆದ್ಯತೆಯಾಗಿದೆ. ಗ್ರಾಹಕ ಸಬಲೀಕರಣದ ನಿಟ್ಟಿನಲ್ಲಿ ನಾವು ಗ್ರಾಹಕ ರಕ್ಷಣಾ ಕಾಯ್ದೆಗಳನ್ನು ಬದಲಾವಣೆ ಮಾಡಲಿದ್ದೇವೆ," ಎಂದು ಹೇಳಿದರು.

"ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮಗಳನ್ನು ಕಾಯ್ದೆಯಲ್ಲಿ ಪ್ರಸ್ತಾಪಿಸಲಾಗಿದೆ. ಇಂಥಹ ಜಾಹೀರಾತುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗುವುದು," ಎಂದು ಅವರು ತಿಳಿಸಿದರು.

ಗ್ರಾಹಕರ ರಕ್ಷಣೆಗೆ ಸಂಬಂಧಿಸಿ 2015ರಲ್ಲಿ ವಿಶ್ವಸಂಸ್ಥೆ ನಿಗದಿಪಡಿಸಿದ್ದ ಮಾರ್ಗಸೂಚಿಗೆ ಅನುಗುಣವಾಗಿ ಸರ್ಕಾರ ಹೊಸ ಕಾಯ್ದೆಯನ್ನು ಜಾರಿಗೆ ತರುತ್ತಿದೆ. ಸದ್ಯಕ್ಕೆ ಜಾರಿಯಲ್ಲಿರುವ 1986ರ ಗ್ರಾಹಕ ರಕ್ಷಣಾ ಕಾಯ್ದೆಯನ್ನು ಪರಿಷ್ಕರಿಸಿ ಈ ಹೊಸ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

24 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಮ್ಮೇಳನದಲ್ಲಿ ಮಾತನಾಡಿದ ಅವರು ಹೊಸ ಜಿಎಸ್‌ಟಿ ಜಾರಿಯಿಂದಾಗಿ ದೇಶದಲ್ಲಿ ಹೊಸ ಉದ್ಯಮ ಸಂಸ್ಕೃತಿ ಸೃಷ್ಟಿಯಾಗಿದೆ ಎಂದು ಹೇಳಿದರು

"ಜಿಎಸ್‌ಟಿ ನಿಯಮದಿಂದಾಗಿ ಉತ್ಪಾದಕರಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಬೆಲೆ ಇಳಿಕೆಯಾಗಿ ಮಧ್ಯಮ ವರ್ಗ ಮತ್ತು ಬಡ ಜನರಿಗೆ ಪ್ರಯೋಜನವಾಗಲಿದೆ," ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Prime Minister Narendra Modi on Thursday announced consumer empowerment will be a major part of the new consumer protection act, saying guidelines on misleading ads will be stricter. PM was addressing the International Conference on Consumer Protection for East, South and South-East Asian Countries in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more