ಮಾರ್ಗಸೂಚಿ ಉಲ್ಲಂಘನೆ; ಗೃಹ ಇಲಾಖೆಯಿಂದ ರಾಜ್ಯಗಳಿಗೆ ಪತ್ರ

ನವದೆಹಲಿ, ಮೇ 21 : ಕೊರೊನಾ ಹರಡದಂತೆ ತಡೆಯಲು ಕೇಂದ್ರ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿಲ್ಲ. ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಇದನ್ನು ಪಾಲಿಸುತ್ತಿಲ್ಲ ಎಂಬುದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ.

Recommended Video

      ವರ್ಕ್ ಫ್ರಂ ಹೋಂ‌ನಿಂದ ಆಗ್ತಿರೋ ಸಮಸ್ಯೆಗಳು ಅಷ್ಟಿಷ್ಟಲ್ಲ... | Oneindia Kannada

      ಗುರುವಾರ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಒಟ್ಟು 7 ಅಂಶಗಳನ್ನು ಉಲ್ಲೇಖಿಸಿದ್ದು, ಮಾರ್ಗಸೂಚಿ ಪಾಲನೆ ಬಗ್ಗೆ ನಿರ್ದೇಶನ ನೀಡಲಾಗಿದೆ.

      ಕೇಂದ್ರ ಸರ್ಕಾರ 17/5/2020ರಂದು ಲಾಕ್ ಡೌನ್‌ ಅನ್ನು ಮೇ 31ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ಕೆಲವು ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

      ಆರ್ಥಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ರಾಜ್ಯಗಳು 4ನೇ ಹಂತದ ಲಾಕ್ ಡೌನ್‌ನಲ್ಲಿ ಹಲವು ಬದಲಾವಣೆಗಳನ್ನು ಮಾಡಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದ್ದು, ಮಾರ್ಗಸೂಚಿ ಪಾಲನೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

      ಮಾರ್ಗಸೂಚಿ ಪಾಲಿಸುತ್ತಿಲ್ಲ

      ಮಾರ್ಗಸೂಚಿ ಪಾಲಿಸುತ್ತಿಲ್ಲ

      ಮಾಧ್ಯಮಗಳವರದಿ ಮತ್ತು ಇತರ ಮೂಲಗಳ ಮಾಹಿತಿಯಂತೆ ಕೆಲವು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸುತ್ತಿಲ್ಲ ಎಂಬುದು ತಿಳಿದಿದೆ. ಗೃಹ ಇಲಾಖೆ ನೀಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳ ಮಾರ್ಗಸೂಚಿ ಪಾಲನೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಮೂಲಕ ಸೂಚನೆ ನೀಡಲಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

      ಕಂಟೈನ್ಮೆಂಟ್ ಝೋನ್

      ಕಂಟೈನ್ಮೆಂಟ್ ಝೋನ್

      ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಕಂಟೈನ್ಮೆಂಟ್ ಝೋನ್‌ಗಳನ್ನು ಗುರುತಿಸುವಲ್ಲಿ ವಿಫಲವಾಗಿವೆ. ಕೊರೊನಾ ಹರಡದಂತೆ ತಡೆಯಲು ಕಂಟೈನೆಂಟ್‌ ಝೋನ್‌ಗಳಲ್ಲಿ ನಿಯಮಗಳನ್ನು ಇನ್ನು ಬಿಗಿಗೊಳಿಸಬೇಕು. ಸ್ಥಳೀಯ ಆಡಳಿತಗಳು ಘೋಷಣೆ ಮಾಡಿದ ಮಾರ್ಗಸೂಚಿ ಪಾಲನೆಯಾಗದಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

      ಕರ್ಫ್ಯೂ ಪಾಲನೆಯಾಗುತ್ತಿಲ್ಲ

      ಕರ್ಫ್ಯೂ ಪಾಲನೆಯಾಗುತ್ತಿಲ್ಲ

      ಸಂಜೆ 7 ರಿಂದ ಬೆಳಗ್ಗೆ 7ರ ತನಕ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು. ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಬೇಕು. ಸಾಮಾಜಿಕ ಅಂತರ ಕಾಪಾಡಲು, ಕೊರೊನಾ ಹರಡದಂತೆ ತಡೆಯಲಿ ಕರ್ಫ್ಯೂ ಜಾರಿಗೆ ತರುವುದು ಅನಿವಾರ್ಯವಾಗಿದೆ. ರಾತ್ರಿಯ ವೇಳೆ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಕ್ರಮ ಕೈಗೊಳ್ಳಬೇಕು.

      ನಿಯಮಗಳನ್ನು ಪಾಲಿಸಿ

      ನಿಯಮಗಳನ್ನು ಪಾಲಿಸಿ

      ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ, ಸಾರಿಗೆ ಸಂಚಾರ ಮುಂತಾದ ಸಂದರ್ಭದಲ್ಲಿ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲಾ ಆಡಳಿತಗಳು ಈ ಕುರಿತು ಗಮನ ಹರಿಸಬೇಕು. ಕೋವಿಡ್ - 19 ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+