ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣೆ: ವಂಸ್ಡಾದ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ- ಕಾಂಗ್ರೆಸ್ ಮೇಲೆ ಆರೋಪ

|
Google Oneindia Kannada News

ಅಹಮದಾಬಾದ್ ಡಿಸೆಂಬರ್ 1: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ವಂಸ್ದಾ(Vansda) ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಪಿಯೂಷ್ ಪಟೇಲ್ ಅವರ ಮೇಲೆ ಗುರುವಾರ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪಿಯೂಷ್ ಪಟೇಲ್ ವಾನ್ಸ್ಡಾದ ಝರಿ ಗ್ರಾಮದಲ್ಲಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ದಾಳಿಯಲ್ಲಿ ಅವರ ತಲೆಗೆ ಗಾಯವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಅನಂತ್ ಪಟೇಲ್ ಬೆಂಬಲಿಗರು ಈ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ವಂಸ್ಡಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ವರದಿಯಾಗಿದ್ದು, ಪಿಯೂಷ್ ಪಟೇಲ್ ಬೆಂಬಲಿಗರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.

Gujarat Assembly Election 2022: Attack on Vansda BJP Candidate - Allegation on Congress

ವಂಸ್ಡಾ ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಇದು ನವಸಾರಿ ಜಿಲ್ಲೆಯ ಭಾಗವಾಗಿದೆ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

English summary
Gujarat Assembly Election 2022: BJP candidate Piyush Patel, who is contesting the Gujarat Assembly election from the Vansda constituency, was allegedly attacked on by unidentified assailants on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X