ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ನ.3 ರಂದು ಘೋಷಣೆ

|
Google Oneindia Kannada News

ನವದೆಹಲಿ, ನ.3: ಗುಜರಾತ್‌ ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು(ನ.3) ಪ್ರಕಟಿಸುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಚುನಾವಣಾ ವೇಳಾಪಟ್ಟಿ ಇನ್ನಿತರ ವಿವರಗಳನ್ನು ನೀಡಲಿದೆ.

ಹಿಮಾಚಲ ವಿಧಾನಸಭಾ ಚುನಾವಣಾ ದಿನಾಂಕಗಳ ಘೋಷಣೆಯೊಂದಿಗೆ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಗಳಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಗುಜರಾತ್ ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗಿತ್ತು. ಮೂಲಗಳ ಪ್ರಕಾರ, ಚುನಾವಣೆಗೆ ಸಂಬಂಧಿಸಿದ ಜಿಲ್ಲಾಧಿಕಾರಿ (ಡಿಎಂ), ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಅವರ ಪೋಸ್ಟಿಂಗ್ ಪೂರ್ಣಗೊಂಡಿಲ್ಲ.

ಗುಜರಾತ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರದಲ್ಲಿ ಆಯೋಗವು ಚುನಾವಣಾ ಸಿದ್ಧತೆಯ ದೃಷ್ಟಿಯಿಂದ ಆಡಳಿತಾತ್ಮಕ ಅಧಿಕಾರಿಗಳ ಸರಿಯಾದ ವರ್ಗಾವಣೆಯ ಆದೇಶದ ವರದಿಯನ್ನು ಸಲ್ಲಿಸದೆ, ವಿಳಂಬ ಮಾಡಿದ್ದಾರೆ ಎಂಬ ವರದಿ ಇದೆ. ಈ ಬಗ್ಗೆ ಗಮನಿಸಿದ ಚುನಾವಣಾ ಆಯೋಗವು ತುರ್ತು ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ತಿಳಿಸಿತ್ತು.

 Gujarat Assembly Election Dates To Be Announced Nov 3

ಗುಜರಾತ್ ವಿಧಾನಸಭೆ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. ಗುಜರಾತ್‌ 182 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಕಳೆದ ಚುನಾವಣೆಯಲ್ಲಿ ಸುಮಾರು ಮೂರು ದಶಕಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ 99 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಕಾಂಗ್ರೆಸ್ 77 ಸ್ಥಾನಗಳಲ್ಲಿ ಜಯಗಳಿಸಿತ್ತು.

2022 ರ ಗುಜರಾತ್ ಚುನಾವಣೆಯಲ್ಲಿ ಎಎಪಿ ಭಾರಿ ತಯಾರಿಯೊಂದಿಗೆ ಕಣಕ್ಕಿಳಿದಿದೆ. ಎಎಪಿ ಮಾತ್ರ 182 ಅಭ್ಯರ್ಥಿಗಳ ಪೈಕಿ 72 ಅಭ್ಯರ್ಥಿಗಳಿಗೆ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ತಮ್ಮ ಸ್ಪರ್ಧಿಗಳನ್ನು ಅಂತಿಮಗೊಳಿಸಿಲ್ಲ. ಎಲ್ಲಾ ಮೂರು ಪ್ರಮುಖ ಪಕ್ಷಗಳು ಎಲ್ಲಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ನಂತರ ಎಲ್ಲೆಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ ಎಂಬುದು ತಿಳಿಯಲಿದೆ.

English summary
The dates for the Gujarat Assembly election will be announced by the Election Commission at noon today (Nov 3)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X