ಗುಜರಾತ್ : 36 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಬಿಜೆಪಿ
ಅಹಮದಾಬಾದ್, ನವೆಂಬರ್ 19: ಗುಜರಾತ್ ಚುನಾವಣಾ ಕಣದಲ್ಲಿ ವಿಡಿಯೋಗಳ ಭರಾಟೆ ನಡುವೆ ಅಭ್ಯರ್ಥಿಗಳ ಟಿಕೆಟ್ ಬಗ್ಗೆ ಈಗ ಚರ್ಚೆ ಜೋರಾಗಿದೆ. ಆಡಳಿತಾರೂಢ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 36 ಅಭ್ಯರ್ಥಿಗಳ ಹೆಸರಿರುವ ಪಟ್ಟಿಯನ್ನು ಶನಿವಾರದಂದು ಪ್ರಕಟಿಸಿದೆ.
ಬಿಜೆಪಿ 70 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಡಿಸಿಎಂ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಪ್ರಮುಖರಿದ್ದ 70 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು.

ಪಾಟೀದಾರ್ ಸಮುದಾಯದ 17 ಅಭ್ಯರ್ಥಿಗಳು, ಒಬಿಸಿಯ 18 ಮಂದಿ, ಪರಿಶಿಷ್ಟ ಜಾತಿಯ 3 ಮಂದಿ ಹಾಗೂ ಪರಿಶಿಷ್ಟ ವರ್ಗದ 11 ಮಂದಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ.
ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಲಿದೆ. ಜೊತೆಗೆ 6 ಮಂದಿ ಸಚಿವರಿಗೂ ಸ್ಪರ್ಧೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂಬ ಸುದ್ದಿಯಿದೆ.
ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ 93 ಕ್ಷೇತ್ರಗಳಿಗೆ ಡಿಸೆಂಬರ್ 14ರಂದು ನಡೆಯಲಿದೆ. 182 ವಿಧಾನಸಭಾ ಕ್ಷೇತ್ರಗಳ ಗುಜರಾತ್ ವಿಧಾಸಭೆಗೆ ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.












Click it and Unblock the Notifications