ಗುಜರಾತ್ ವಿಧಾನಸಭೆ ಚುನಾವಣೆ: ಸಿಎಂ ಭೂಪೇಂದ್ರ ಪಟೇಲ್, ಬಿಜೆಪಿ ಮುಖ್ಯಸ್ಥರೊಂದಿಗೆ ಅಮಿತ್ ಶಾ ಸಭೆ

ಅಹಮದಾಬಾದ್, ಅ. 27: ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿಆರ್ ಪಾಟೀಲ್ ಅವರೊಂದಿಗೆ ಬುಧವಾರ ಸಭೆ ನಡೆಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ಗಾಂಧಿನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಗುಜರಾತ್ ಪ್ರಧಾನ ಕಚೇರಿ 'ಶ್ರೀ ಕಮಲಂ' ನಲ್ಲಿ ಸುಮಾರು ಒಂದು ಗಂಟೆ ಸಭೆ ನಡೆದಿದೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಸಿಆರ್ ಪಾಟೀಲ್ ಅವರಲ್ಲದೆ, ರಾಜ್ಯ ಬಿಜೆಪಿಯ ಕೆಲವು ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಮಾಧ್ಯಮ ಸಂಯೋಜಕ ಯಜ್ಞೇಶ್ ದವೆ ತಿಳಿಸಿದ್ದಾರೆ.

Gujarat Assembly elections 2022: Amit Shah holds meeting with CM Bhupendra Patel

ಮಂಗಳವಾರ, ಅಮಿತ್ ಶಾ ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್‌ನಲ್ಲಿ ಸೌರಾಷ್ಟ್ರ ಪ್ರದೇಶದ ಪಕ್ಷದ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಡಿಸೆಂಬರ್ ವೇಳೆಗೆ ಚುನಾಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಕಳೆದ ಐದು ದಿನಗಳಲ್ಲಿ ವಲಯ ಮಟ್ಟದ ಪಕ್ಷದ ನಾಯಕರೊಂದಿಗೆ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಿದ್ದಾರೆ.

ವೆರಾವಲ್‌ಗೂ ತೆರಳುವ ಮುನ್ನ ಕೇಂದ್ರ ಸಚಿವ ಅಮಿತ್ ಶಾ ವಲ್ಸಾದ್, ವಡೋದರಾ ಮತ್ತು ಪಾಲನ್‌ಪುರದಲ್ಲಿ ರಾಜ್ಯದ ದಕ್ಷಿಣ, ಮಧ್ಯ ಮತ್ತು ಉತ್ತರ ವಲಯಗಳ ಸಭೆಗಳಲ್ಲಿ ಭಾಗವಹಿಸಿದ್ದರು.

Gujarat Assembly elections 2022: Amit Shah holds meeting with CM Bhupendra Patel

ಮುಂಬರುವ ಗುಜರಾತ್ ಚುನಾವಣೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. 1995 ರಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇನ್ನು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್‌ನ ಬಿಜೆಪಿ ಸರ್ಕಾರವು ಮೀನುಗಾರರಿಗೆ ಡೀಸೆಲ್ ಮತ್ತು ಸೀಮೆಎಣ್ಣೆ ಕೋಟಾವನ್ನು ಹೆಚ್ಚಿಸುವುದಾಗಿ ಘೋಷಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+