ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣೆ: ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಿಜೆಪಿಗೆ

|
Google Oneindia Kannada News

ಅಹಮದಾಬಾದ್, ನ.10 : ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಉಂಟಾಗಿದೆ. ಝಲೋದ್ ಕ್ಷೇತ್ರದ ಪಕ್ಷದ ಶಾಸಕ ಭವೇಶ್ ಕಟಾರಾ ಬುಧವಾರ ಸ್ಪೀಕರ್ ನಿಮಾಬೆನ್ ಆಚಾರ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬುಧವಾರ ಒಂದೇ ದಿನ ಇಬ್ಬರು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ. ಭವೇಶ್ ಕಟಾರಾಗೂ ಮೊದಲು, ಗುಜರಾತ್‌ನ ತಲಾಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಭಗವಾನ್‌ಭಾಯ್ ಡಿ ಬರಾದ್ ಅವರು ಕಾಂಗ್ರೆಸ್‌ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿ, ರಾಜೀನಾಮೆ ಪತ್ರವನ್ನು ಸ್ಪೀಕರ್ ಡಾ. ನಿಮಾಬೆನ್ ಆಚಾರ್ಯ ಅವರಿಗೆ ಸಲ್ಲಿಸಿದ್ದಾರೆ.

Breaking: ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಮಾಜಿ ಸಿಎಂ ವಿಜಯ್ ರೂಪಾನಿBreaking: ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಮಾಜಿ ಸಿಎಂ ವಿಜಯ್ ರೂಪಾನಿ

ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದು, ಚುನಾವಣೆಗೂ ಮುನ್ನ ಅವರು ಬಿಜೆಪಿ ಸೇರಲಿದ್ದಾರೆ.

Gujarat Assembly Elections 2022: Another MLA Quits Congress

ಹತ್ತು ಬಾರಿ ಶಾಸಕರಾಗಿರುವ ಕಾಂಗ್ರೆಸ್ ಪಕ್ಷದ ಶಾಸಕ ಮತ್ತು ಬುಡಕಟ್ಟು ಮುಖಂಡ ಮೋಹನ್‌ಸಿನ್ಹ್ ರಥ್ವಾ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ತೆರಳಿದ್ದಾರೆ. ಇದು ಕಾಂಗ್ರೆಸ್‌ಗೆ ದೊಡ್ಡ ಹೊಡೆತ. ಇದರ ಬೆನ್ನಲ್ಲೆ ಸತತ ಎರಡನೇ ದಿನವೂ ಕಾಂಗ್ರೆಸ್ ಪಕ್ಷಕ್ಕೆ ಆಘಾತ ಉಂಟಾಗಿದೆ.

ಇತ್ತ, ಗುರುವಾರ ಭಾರತೀಯ ಜನತಾ ಪಕ್ಷವೂ ಗುಜರಾತ್ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ.

2017ರ ಚುನಾವಣೆಯಲ್ಲಿ ಗೆದ್ದಿರುವ 99 ಶಾಸಕರ ಪೈಕಿ ಶೇ.20ರಷ್ಟು ಮಂದಿಯನ್ನು ಈ ಬಾರಿ ಬಿಜೆಪಿ ಕೈಬಿಡಬಹುದು ಎಂದು ಮೂಲಗಳು ತಿಳಿಸಿವೆ.

Gujarat Assembly Elections 2022: Another MLA Quits Congress

ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಗುಜರಾತ್‌ನಲ್ಲಿ ಏಳನೇ ಅವಧಿಯ ಅಧಿಕಾರವನ್ನು ಪಡೆಯುವ ವಿಶ್ವಾಸದಲ್ಲಿ ಬಿಜೆಪಿಯಿದೆ. ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆಯಲಿದೆ.

English summary
Gujarat assembly elections 2022: Ahead of the Assembly elections another Congress MLA from Jhalod, Bhavesh Katara submitted his resignation, he will join Bharatiya Janata Party. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X