ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣೆ: ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

|
Google Oneindia Kannada News

ಅಹಮದಾಬಾದ್, ನ.10 : ಭಾರತೀಯ ಜನತಾ ಪಕ್ಷ ಗುಜರಾತ್ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಗುರುವಾರ) ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ.

"ಬಿಜೆಪಿ ವರಿಷ್ಠರು ಒಟ್ಟು 182 ಕ್ಷೇತ್ರಗಳ ಪೈಕಿ ಹೆಚ್ಚಿನ ವಿಧಾನಸಭಾ ಸ್ಥಾನಗಳ ಟಿಕೆಟ್‌ಗಳನ್ನು ಅಂತಿಮಗೊಳಿಸಿದ್ದಾರೆ. ಇತರ ಸ್ಥಾನಗಳಿಗೆ ಟಿಕೆಟ್ ನೀಡಲು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ನೀಡಲಾಗಿದೆ" ಎಂದು ಮೂಲಗಳು ತಿಳಿಸಿವೆ.

Breaking: ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಮಾಜಿ ಸಿಎಂ ವಿಜಯ್ ರೂಪಾನಿBreaking: ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಮಾಜಿ ಸಿಎಂ ವಿಜಯ್ ರೂಪಾನಿ

ಪ್ರಧಾನಿ ಮೋದಿ ನೇತೃತ್ವದಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಗುರುವಾರ ಪಟ್ಟಿ ಬಿಡುಗಡೆ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಮತ್ತು ಬಿಎಸ್ ಯಡಿಯೂರಪ್ಪ, ದೇವೇಂದ್ರ ಫಡ್ನವಿಸ್ ಮತ್ತು ಲಾಲ್ ಸಿಂಗ್ ರಾಜಪುರ ಸೇರಿದಂತೆ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಗುಜರಾತ್ ಚುನಾವಣೆಗಾಗಿ ಬಿಜೆಪಿ ಕೋರ್ ಗ್ರೂಪ್ ಸಭೆ ಮಂಗಳವಾರ ಸಂಜೆ ನಡ್ಡಾ ನಿವಾಸದಲ್ಲಿ ನಡೆದಿತ್ತು.

ಮಾಜಿ ಸಿಎಂ ವಿಜಯ್ ರೂಪಾನಿ ಸ್ಪರ್ಧೆಯಲ್ಲಿಲ್ಲ

ಮಾಜಿ ಸಿಎಂ ವಿಜಯ್ ರೂಪಾನಿ ಸ್ಪರ್ಧೆಯಲ್ಲಿಲ್ಲ

ಇತ್ತೀಚೆಗಷ್ಟೇ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದ್ರಸಿನ್ಹ್ ಚುಡಾಸಮಾ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ವರದಿಗಳ ಪ್ರಕಾರ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.

"ನಾನು ಐದು ವರ್ಷ ಮುಖ್ಯಮಂತ್ರಿಯಾಗಿ ಎಲ್ಲರ ಸಹಕಾರದಿಂದ ಕೆಲಸ ಮಾಡಿದ್ದೇನೆ. ಈ ಚುನಾವಣೆಯಲ್ಲಿ ಹೊಸ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಬೇಕು, ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ವರಿಷ್ಠರಿಗೆ ಪತ್ರ ಕಳುಹಿಸಿದ್ದು, ದೆಹಲಿಗೆ ತಲುಪಿಸಿದ್ದೇನೆ. ಆಯ್ಕೆಯಾದ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಕೆಲಸ ಮಾಡುತ್ತೇವೆ" ಎಂದು ವಿಜಯ್ ರೂಪಾನಿ ಹೇಳಿದ್ದಾರೆ.

ಒಂಬತ್ತು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಚುಡಾಸಮಾ

ಒಂಬತ್ತು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಚುಡಾಸಮಾ

ಬಿಜೆಪಿ ಹಿರಿಯ ನಾಯಕ ಭೂಪೇಂದ್ರಸಿನ್ಹ್ ಚುಡಾಸಮಾ ಅವರು ಸತತ ಒಂಬತ್ತು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇತರರಿಗೆ ಅವಕಾಶ ಸಿಗಬೇಕು ಎಂದಿದ್ದಾರೆ.

"ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕರಿಗೆ ತಿಳಿಸಿದ್ದಾರೆ. ಇತರ ಕಾರ್ಯಕರ್ತರಿಗೆ ಅವಕಾಶ ಸಿಗಬೇಕು ಎಂದು ನಾನು ನಿರ್ಧರಿಸಿದ್ದೇನೆ. ನಾನು ಇಲ್ಲಿಯವರೆಗೆ 9 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಪಕ್ಷಕ್ಕೆ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.

ಶೇ.20ರಷ್ಟು ಹಾಲಿ ಶಾಸಕರಿಗೆ ಕೊಕ್ ಸಾಧ್ಯತೆ

ಶೇ.20ರಷ್ಟು ಹಾಲಿ ಶಾಸಕರಿಗೆ ಕೊಕ್ ಸಾಧ್ಯತೆ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ನಂತರ ಭೂಪೇಂದ್ರ ಪಟೇಲ್ ಅಧಿಕಾರ ವಹಿಸಿಕೊಂಡರು. 2017ರ ಚುನಾವಣೆಯಲ್ಲಿ ಗೆದ್ದಿರುವ 99 ಶಾಸಕರ ಪೈಕಿ ಶೇ.20ರಷ್ಟು ಮಂದಿಯನ್ನು ಈ ಬಾರಿ ಬಿಜೆಪಿ ಕೈಬಿಡಬಹುದು ಎಂದು ಮೂಲಗಳು ತಿಳಿಸಿವೆ.

ಹಾರ್ದಿಕ್ ಪಟೇಲ್‌ ಬಿಜೆಪಿಯಿಂದ ಕಣಕ್ಕೆ

ಹಾರ್ದಿಕ್ ಪಟೇಲ್‌ ಬಿಜೆಪಿಯಿಂದ ಕಣಕ್ಕೆ

ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಜಾಮ್‌ನಗರದಿಂದ ಟಿಕೆಟ್ ಪಡೆಯುವ ಸಾಧ್ಯತೆ ಇದೆ. ಅಲ್ಲದೆ, ಇತ್ತೀಚೆಗೆ ಬಿಜೆಪಿ ಸೇರಿದ ಹಾರ್ದಿಕ್ ಪಟೇಲ್, ಅಲ್ಪೇಶ್ ಠಾಕೂರ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ.

ಗುಜರಾತ್ ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಈ ಬಾರಿ ಪಕ್ಷವು ತನ್ನ ಏಳನೇ ಅವಧಿಯ ಅಧಿಕಾರವನ್ನು ಪಡೆಯುವ ವಿಶ್ವಾಸ ವ್ಯಕ್ತಪಡಿಸಿದೆ. ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆಯಲಿದೆ.

English summary
Gujarat assembly elections 2022: Thursday Bharatiya Janata Party is likely to release its first list of candidates for the elections. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X