ಗುಜರಾತ್ ಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ
ಅಹಮದಾಬಾದ್, ನ.13: ಗುಜರಾತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ 9 ಅಭ್ಯರ್ಥಿಗಳನ್ನು ಘೋಷಿಸಿದೆ. ಡಿಸೆಂಬರ್ 1 ಮತ್ತು 5ರಂದು ಚುನಾವಣೆ ನಡೆಯಲಿದೆ.
ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಇದುವರೆಗೆ 104 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಆಮ್ ಆದ್ಮಿ ಪಕ್ಷ ಮಾಡುತ್ತಿರುವ ಪ್ರಚಾರದಷ್ಟು ಶ್ರಮಪಡುತ್ತಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.
ಈ ತಿಂಗಳ ನವೆಂಬರ್ 4 ರಂದು ಕಾಂಗ್ರೆಸ್ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 43 ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಬಳಿಕ 46 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ನವೆಂಬರ್ 10 ರಂದು ಪ್ರಕಟಿಸಲಾಗಿದೆ.

ನಾಲ್ಕನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ದ್ವಾರಕಾದಿಂದ ಮಾಲುಭಾಯಿ ಕಂಡೋರಿಯಾ, ತಲಾಲಾದಿಂದ ಮಾನ್ಸಿನ್ ದೋಡಿಯಾ, ಕೋಡಿನಾರ್ ಎಸ್‌ಸಿಯಿಂದ ಮಹೇಶ್ ಮಕ್ವಾನಾ, ಭಾವನಗರ ಗ್ರಾಮಾಂತರದಿಂದ ರೇವತ್‌ಸಿನ್ ಗೋಹಿಲ್ ಮತ್ತು ಭಾವನಗರ ಪೂರ್ವದಿಂದ ಬಲದೇವ್ ಮಜಿಭಾಯಿ ಸೋಲಂಕಿ ಅವರನ್ನು ಕಣಕ್ಕಿಳಿಸಲಾಗಿದೆ.
ಪಟ್ಟಿಯಲ್ಲಿರುವ ಇತರ ಅಭ್ಯರ್ಥಿಗಳಲ್ಲಿ ಬೊಟಾಡ್‌ನಿಂದ ರಮೇಶ್ ಮೇರ್, ಜಂಬೂಸರ್‌ನಿಂದ ಸಂಜಯ್ ಸೋಲಂಕಿ, ಭರೂಚ್‌ನಿಂದ ಜಯಕಾಂತ್‌ಭಾಯ್ ಬಿ ಪಟೇಲ್ ಮತ್ತು ಧರಮ್‌ಪುರ ಎಸ್‌ಟಿಯಿಂದ ಕಿಶನ್‌ಭಾಯ್ ವೆಸ್ತಾಭಾಯಿ ಪಟೇಲ್ ಸೇರಿದ್ದಾರೆ.
ಇನ್ನು, ಶುಕ್ರವಾರ ಕಾಂಗ್ರೆಸ್ ಬಿಡುಗಡೆ ಮಾಡಿರುವ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ, 46 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತನ್ನ 21 ಮಂದಿ ಹಾಲಿ ಶಾಸಕರನ್ನು ಕಣಕ್ಕಿಳಿಸಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರದಿಂದ ಹೊರಗುಳಿದು ಎರಡು ದಶಕಗಳಿಗೂ ಹೆಚ್ಚು ಕಾಲವಾಗಿದೆ. ಹೀಗಾಗಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಸುವ ಸಾಹಸಕ್ಕೆ ಮುಂದಾಗಿಲ್ಲ. ಈ 46 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ, ನಾಲ್ಕು ಮುಸ್ಲಿಂ ಅಭ್ಯರ್ಥಿಗಳನ್ನು ಹೆಸರಿಸಿದೆ.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications