• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣೆ: ಗರಿಗೆದರಿದ ಚುನಾವಣ ಪ್ರಚಾರ, ಭಾನುವಾರ ಮೋದಿ, ಶಾ ರ್‍ಯಾಲಿ

|
Google Oneindia Kannada News

ಅಹಮದಾಬಾದ್, ನ. 20: ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರವನ್ನು ಭರದಿಂದ ನಡೆಸುತ್ತಿವೆ. ಆಡಳಿತರೂಡ ಭಾರತೀಯ ಜನತಾ ಪಕ್ಷ ತನ್ನ ಅತ್ಯಂತ ಜನಪ್ರಿಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಪ್ರಚಾರ ಕಣಕ್ಕೆ ಇಳಿಸಿದೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರದ ಅಂಗವಾಗಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ಗುಜರಾತ್ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಪ್ರಧಾನಿ ಮೋದಿ ನವೆಂಬರ್ 20 ರಿಂದ ನವೆಂಬರ್ 22 ರವರೆಗೆ ಸತತ ಮೂರು ದಿನಗಳ ಕಾಲ ಗುಜರಾತ್‌ನ ಸೌರಾಷ್ಟ್ರದಲ್ಲಿ ರ್‍ಯಾಲಿಗಳನ್ನು ನಡೆಸಲು ನಿರ್ಧರಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಾಪಿ ಮತ್ತು ನರ್ಮದಾ ಜಿಲ್ಲೆಗಳಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ.

ಭಾನುವಾರ ಸೋಮನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಬಳಿಕ ಸೌರಾಷ್ಟ್ರ ಪ್ರದೇಶದಲ್ಲಿ ನಾಲ್ಕು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವೆರಾವಲ್, ಧೋರಾರ್ಜಿ, ಅಮ್ರೇಲಿ ಮತ್ತು ಬೊಟಾಡ್‌ನಲ್ಲಿ ಸ್ಥಳಗಳನ್ನು ರ್‍ಯಾಲಿಗಾಗಿ ಅಂತಿಮಗೊಳಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ರಾಜ್ಯದ ತಾಪಿ ಮತ್ತು ನರ್ಮದಾ ಜಿಲ್ಲೆಗಳಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ.

ಗುಜರಾತ್ ವಿಧಾನಸಭೆಯ 182 ಸ್ಥಾನಗಳ ಪೈಕಿ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನದಲ್ಲಿ 70 ಮಹಿಳೆಯರು ಸೇರಿದಂತೆ ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

Gujarat Assembly Elections 2022: PM Modi, Amit Shah To Hold Campaign Sunday

ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗವು ಇದುವರೆಗೆ 1,515 ನಾಮಪತ್ರಗಳನ್ನು ಸ್ವೀಕರಿಸಿದೆ.

ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಫಲಿತಾಂಶದ ಜೊತೆಗೆ ಗುಜರಾತ್ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.

ನರೇಂದ್ರ ಮೋದಿ
Know all about
ನರೇಂದ್ರ ಮೋದಿ
English summary
Gujarat Assembly Elections 2022: Prime Minister Narendra Modi and Union Home Minister Amit Shah to hold rallies in Gujarat. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X