ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Just in: ಗುಜರಾತ್ ಚುನಾವಣಾ ಅಖಾಡಕ್ಕೆ ರಾಹುಲ್ ಗಾಂಧಿ

|
Google Oneindia Kannada News

ಅಹಮದಾಬಾದ್, ನ. 14: ಕಾವೇರಿರುವ ಗುಜರಾತ್ ಚುನಾವಣಾ ಕಣಕ್ಕೆ ರಾಹುಲ್ ಗಾಂಧಿ ಇಳಿಯಲಿದ್ದು, ನವೆಂಬರ್ 22 ರಂದು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಕಳೆದೆರಡು ತಿಂಗಳಿನಿಂದ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿರಾಮದ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಲಿದ್ದು, ನವೆಂಬರ್ 22 ರಂದು ಗುಜರಾತ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ.

ಭಾರೀ ವಿವಾದಕ್ಕೆ ಕಾರಣವಾಗಿರುವ ಈ ಬಿಜೆಪಿ ಅಭ್ಯರ್ಥಿ ಪಾಯಲ್ ಕುಕ್ರಾಣಿ ಯಾರು?ಭಾರೀ ವಿವಾದಕ್ಕೆ ಕಾರಣವಾಗಿರುವ ಈ ಬಿಜೆಪಿ ಅಭ್ಯರ್ಥಿ ಪಾಯಲ್ ಕುಕ್ರಾಣಿ ಯಾರು?

ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Gujarat Assembly Elections 2022: Rahul Gandhi To Campaign On November 22

ವಿಧಾನಸಭಾ ಚುನಾವಣೆ ನಡೆದ ಹಿಮಾಚಲ ಪ್ರದೇಶದಲ್ಲಿ ರಾಹುಲ್ ಗಾಂಧಿ ಪ್ರಚಾರದಲ್ಲಿ ತೊಡಗಿಸಿಕೊಳ್ಳದ ಕಾರಣ ಬಿಜೆಪಿ ಭಾರೀ ಟೀಕೆ ಮಾಡುತ್ತಿದೆ. ಇದೇ ಕಾರಣಕ್ಕೆ ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ತೆರಳುತ್ತಿರುವುದಾಗಿ ಅಂದಾಜಿಸಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಈಗ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ತನ್ನ ಗಮನವನ್ನು ಗುಜರಾತ್ ಮೇಲೆ ಕೇಂದ್ರೀಕರಿಸಿದೆ. ಮುಂದಿನ ಕೆಲವು ವಾರಗಳಲ್ಲಿ, ಪಕ್ಷದ ಪ್ರಮುಖ ನಾಯಕರಿಂದ ಹಲವಾರು ಪ್ರಚಾರ ಸಭೆಗಳನ್ನು ನಡೆಸಲು ಪಕ್ಷ ನಿರ್ಧರಿಸಿದೆ. ಆದರೂ, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಈಗಾಗಲೇ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಆರಂಭಿಸಿವೆ.

ಈ ನಡುವೆ ಕಾಂಗ್ರೆಸ್ ಗುಜರಾತ್ ಚುನಾವಣೆಗೆ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಾಜ್ಯದ 142 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

Gujarat Assembly Elections 2022: Rahul Gandhi To Campaign On November 22

ನವೆಂಬರ್ 4 ರಂದು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು, ಅದರಲ್ಲಿ 43 ಅಭ್ಯರ್ಥಿಗಳ ಹೆಸರಿತ್ತು. 46 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ನವೆಂಬರ್ 10 ರಂದು ಪ್ರಕಟಿಸಲಾಯಿತು. ಶುಕ್ರವಾರ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಗುಜರಾತ್‌ನಲ್ಲಿ ಬಿಜೆಪಿಯ 27 ವರ್ಷಗಳ ಆಡಳಿತವನ್ನು ಕೊನೆಗೊಳಿಸಲು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪ್ರಯತ್ನಿಸುತ್ತಿದೆ. ಅದರಲ್ಲೂ ಎಎಪಿ ಈ ಬಾರಿ ತಾವೇ ಬಿಜೆಪಿಗೆ ಎದುರಾಳಿ ಎಂದು ಬಿಂಬಿಸಿಕೊಳ್ಳುತ್ತಿದೆ.

English summary
Gujarat Assembly Elections 2022: During a break from Congress party's ongoing Bharat Jodo Yatra, Congress leader Rahul Gandhi will be campaigning in Gujarat on November 22. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X