ಸರ್ಕಾರಿ ನೌಕರರ ಮತಕ್ಕೆ ಗಾಳ; ಹಳೆ ಪಿಂಚಣಿ ಯೋಜನೆ ಹಿಂದೆ ಪಕ್ಷಗಳು

ಅಹಮದಾಬಾದ್, ಅ. 21: ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರಳಿ ತರುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿದೆ.

ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಕುರಿತು ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಮಾಡಿದ್ದ ಘೋಷಣೆಯನ್ನು ಉಲ್ಲೇಖಿಸಿದ ಗುಜರಾತ್ ಎಎಪಿ ಅಧ್ಯಕ್ಷ ಗೋಪಾಲ್ ಇಟಾಲಿಯಾ, ಇಲ್ಲಿಯೂ ಆಪ್ ಅಧಿಕಾರಕ್ಕೆ ಬಂದರೆ ಇಲ್ಲಿಯೂ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.

ಪಂಜಾಬ್‌ನಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು ಎಎಪಿಯ ಐತಿಹಾಸಿಕ ನಿರ್ಧಾರವಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿರ್ಧಾರದಿಂದ ಸಾವಿರಾರು ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಎಎಪಿ ಅಧಿಕಾರಕ್ಕೆ ಬಂದ ನಂತರ ಗುಜರಾತ್‌ನಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಪರಿಚಯಿಸಲಿದೆ ಎಂದು ಗೋಪಾಲ್ ಇಟಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Gujarat Assembly polls; Political Parties To Bring Back Old Pension Scheme

ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭರವಸೆಗಳನ್ನು ಈಡೇರಿಸುವಲ್ಲಿ ಹೆಸರುವಾಸಿಯಾಗಿದ್ದಾರೆ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಇಸುದನ್ ಗಾಧ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಗುಜರಾತ್‌ನ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ.

ಕೇಜ್ರಿವಾಲ್ ಅವರು ರಾಜ್ಯಕ್ಕೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಹಳೆಯ ಪಿಂಚಣಿ ಯೋಜನೆ ಅನ್ನು ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.

Gujarat Assembly polls; Political Parties To Bring Back Old Pension Scheme

ಕಳೆದ 27 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿರುವ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರಳುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಕೂಡ ಭರವಸೆ ನೀಡುತ್ತಿದೆ.

"ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ದೇಶದಲ್ಲೇ ಮೊದಲ ಬಾರಿಗೆ ಪರಿಚಯಿಸಿದ್ದು ಕಾಂಗ್ರೆಸ್. ನಾವು ಅದನ್ನು ರಾಜಸ್ಥಾನ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನಲ್ಲಿ ಮತ್ತೆ ಜಾರಿ ಮಾಡಿದ್ದೇವೆ. ಸರ್ಕಾರ ರಚಿಸಿದ ನಂತರ ಗುಜರಾತ್‌ನಲ್ಲಿಯೂ ನಾವು ಮತ್ತೆ ಜಾರಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+