ಶುಕ್ರವಾರ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ
ಅಹಮದಾಬಾದ್, ಡಿಸೆಂಬರ್ 21: ಗುಜರಾತ್ ವಿಧಾನಸಭೆಗೆ ಆಯ್ಕೆಯಾದ ಬಿಜೆಪಿಯ ನೂತನ ಸಚಿವರು ಇದೇ ಶುಕ್ರವಾರ ಗಾಂಧಿನಗರದಲ್ಲಿ ಸಭೆ ಸೇರಲಿದ್ದಾರೆ. ಈ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಈ ಶಾಸಕರು ಆಯ್ಕೆ ಮಾಡುವ ಸಾಧ್ಯತೆ ಇದೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಕೇಂದ್ರದಿಂದ ವೀಕ್ಷಕರಾಗಿ ಆಗಮಿಸಲಿದ್ದು ನೂತನ ಮುಖ್ಯಮಂತ್ರಿ ಆಯ್ಕೆಗೂ ಮುನ್ನ ಪಕ್ಷದ ಶಾಸಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಈ ಬಾರಿ ಗುಜರಾತ್ ನಲ್ಲಿ ವಿಜಯ್ ರೂಪಾನಿ ನಾಯಕತ್ವದಲ್ಲಿ ಬಿಜೆಪಿ ಚುನಾವಣೆಯನ್ನು ಎದುರಿಸಿತ್ತು. ಹೀಗಾಗಿ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದೆ. ಹೀಗಿದ್ದೂ ಬೇರೆಯವರು ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.
ಒಂದೊಮ್ಮೆ 2019ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪಾಟೀದಾರ್ ಸಮುದಾಯದವವರನ್ನು ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸಿದರೂ ಅಚ್ಚರಿಯಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಒಂದೊಮ್ಮೆ ಪಾಟೀದಾರರನ್ನೇ ಮುಖ್ಯಮಂತ್ರಿ ಮಾಡಲು ಹೊರಟರೆ ಉಪಮುಖ್ಯಮಂತ್ರಿ ನಿತಿತ್ ಪಟೇಲ್ ಮೊದಲ ಆಯ್ಕೆಯಾಗುವ ಸಾಧ್ಯತೆ ಇದೆ.
ಇವೆಲ್ಲದರ ಆಚೆಗೆ ಹೊಸ ಮುಖ್ಯಮಂತ್ರಿಯನ್ನು ಬಿಜೆಪಿ ಆಯ್ಕೆ ಮಾಡಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.












Click it and Unblock the Notifications