ಲೋಕಸಭಾ ಚುನಾವಣೆ ಮುನ್ನವೇ ಬಿಜೆಪಿಗೆ ಆಘಾತ: ಗುಜರಾತ್ ಬಿಜೆಪಿ ಕಾರ್ಯದರ್ಶಿ ರಾಜೀನಾಮೆ
ಅಹಮದಾಬಾದ್, ಆಗಸ್ಟ್ 5: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧಗೊಳ್ಳುತ್ತಿರುವ ಬೆನ್ನಲೇ ಪಕ್ಷಕ್ಕೆ ಆಘಾತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನ ಉದಯೋನ್ಮೂಕ ರಾಜಕಾರಣಿ, ಪಕ್ಷದ ಕಾರ್ಯದರ್ಶಿ ರಾಜೀನಾಮೆ ನೀಡಿ ಆಶ್ಚರ್ಯ ಮೂಡಿಸಿದ್ದಾರೆ.
ಗುಜರಾತ್ ಬಿಜೆಪಿಯಲ್ಲಿ ಗುಂಪುಗಾರಿಕೆಯ ಲಕ್ಷಣಗಳು ಕಂಡು ಬರುತ್ತಿದ್ದು, ಪಕ್ಷದ ಉದಯೋನ್ಮುಖ ಯುವ ನಾಯಕ ಮತ್ತು ಪ್ರಬಲ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಸಿನ್ಹ್ ವಘೇಲಾ ಅವರು ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ದಿಢೀರ್ ನಡೆ ಹಿಂದಿನ ಕಾರಣಗಳ ಬಗ್ಗೆ ಪಕ್ಷ ಬಿಗಿಪಟ್ಟಿದ್ದರೂ ವಘೇಲಾ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಈ ಬಗ್ಗೆ ಪಕ್ಷವು ಪತ್ರಿಕಾಗೋಷ್ಠಿ ನಡೆಸುತ್ತದೆ ಎಂದು ಹೇಳಿದ್ದಾರೆ. ರಾಜೀನಾಮೆ ಬಗ್ಗೆ ವಘೇಲಾ ಎಲ್ಲೂ ಮಾಹಿತಿ ನೀಡಿಲ್ಲ. ವಘೇಲಾ ಅವರು ಪಾಟೀಲ್ ನಂತರ ಹೆಚ್ಚು ಬೇಡಿಕೆಯಿರುವ ರಾಜ್ಯ ಬಿಜೆಪಿ ನಾಯಕರಾಗಿ ಗುರುತಿಸಿಕೊಂಡಿದ್ದು, ಕಳೆದೆರಡು ವರ್ಷಗಳಲ್ಲಿ ಪಕ್ಷದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಕಳೆದ ತಿಂಗಳು ವಘೇಲಾ ಅವರಿಗೆ ರಾಜೀನಾಮೆ ನೀಡುವಂತೆ ತಿಳಿಸಲಾಗಿತ್ತು. ಗುಜರಾತ್‌ನ ಗಾಂಧಿನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿ ಕಮಲಂಗೆ ಭೇಟಿ ನೀಡದಂತೆ ತಿಳಿಸಲಾಯಿತು. ಅವರು ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದರು. ಆದರೆ ಒತ್ತಡಕ್ಕೆ ಮಣಿಯಬೇಕಾಯಿತು. ಜುಲೈ 31 ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ವಘೇಲಾ ಅವರು 2016 ರಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು, ಈ ಹುದ್ದೆಗೆ ಏರಿದ ಅತ್ಯಂತ ಕಿರಿಯ ವ್ಯಕ್ತಿಗಳಲ್ಲಿ ಒಬ್ಬರಾದರು. ಈ ಹಿಂದೆ ಅವರು ಪಕ್ಷದ ಯುವ ಸಂಘಟನೆಯ (ಭಾರತೀಯ ಜನತಾ ಯುವ ಮೋರ್ಚಾ) ನೇತೃತ್ವ ವಹಿಸಿದ್ದರು. ಪಕ್ಷದ ಹಿರಿಯ ನಾಯಕನೊಂದಿಗಿನ ಅವರ ಜಗಳ ಸೇರಿದಂತೆ ಹಲವು ಊಹಾಪೋಹದ ಕಥೆಗಳು ಅವರ ನಿರ್ಗಮನಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಪಕ್ಷವು ಗುಂಪುಗಾರಿಕೆ ಎದುರಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇತ್ತೀಚಿನ ತಿಂಗಳುಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಹಲವಾರು ಪದಾಧಿಕಾರಿಗಳನ್ನು ವಜಾಗೊಳಿಸಿರುವುದು ಮತ್ತು ಪಕ್ಷದ ಅಧ್ಯಕ್ಷ ಪಾಟೀಲ್ ಅವರ ಸುಲಿಗೆ ಮತ್ತು ಮಾನನಷ್ಟಕ್ಕಾಗಿ ಸೂರತ್‌ನಲ್ಲಿ ಎರಡು ಎಫ್‌ಐಆರ್‌ಗಳು ಸೇರಿದಂತೆ ಹಲವಾರು ಘಟನೆಗಳು ಪಕ್ಷದ ಆಂತರಿಕ ಭಿನ್ನಾಭಿಪ್ರಾಯಕ್ಕೆ ಸಾಕ್ಷಿಯಾಗಿದೆ. ಪಾಟೀಲರನ್ನು ಸುಲಿಗೆ ಮಾಡಿ ಮಾನಹಾನಿ ಮಾಡುವ ಯತ್ನ ಬಿಜೆಪಿಯ ಅತೃಪ್ತ ನಾಯಕರ ಕೈವಾಡವಿರಬಹುದು ಎಂದು ಮೂಲಗಳು ತಿಳಿಸಿವೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications