ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Gujarat CM oath ceremony Live: ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

|
Google Oneindia Kannada News

ಅಹಮದಾಬಾದ್ ಡಿಸೆಂಬರ್ 12: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಭೂಪೇಂದ್ರ ಪಟೇಲ್ ಅವರು ಇಂದು(ಡಿಸೆಂಬರ್ 12)ಸತತ ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು 18ನೇ ಮುಖ್ಯಮಂತ್ರಿಯಾಗಲಿರುವ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಪಟೇಲ್ ಅವರು ಸೆಪ್ಟೆಂಬರ್ 13, 2021 ರಂದು ಗುಜರಾತ್‌ನ 17 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಎರಡನೇ ಬಾರಿ ಭೂಪೇಂದ್ರ ಪಟೇಲ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ 2022 ರ ಚುನಾವಣೆಯಲ್ಲಿ ಸತತ 7ನೇ ಬಾರಿಗೆ ಭರ್ಜರಿ ಗೆಲುವಿನೊಂದಿಗೆ ಗುಜರಾತ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿತು. ತಮ್ಮದೇ ದಾಖಲೆಯನ್ನು ಮುರಿದು ಪಟೇಲ್ ಮತ್ತೊಮ್ಮೆ 2022ರ ಚುನಾವಣೆಯಲ್ಲಿ ಘಟ್ಲೋಡಿಯಾ ಕ್ಷೇತ್ರದಿಂದ 1,91,000 ಮತಗಳ ಭರ್ಜರಿ ಅಂತರದಿಂದ ಗೆದ್ದರು.

ಇಂದು ಭೂಪೇಂದ್ರ ಪಟೇಲ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

Gujarat CM Oath Ceremony Live Updates in Kannada : Bhupendra Patel Swearing-In as Gujarat CM today

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 182 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದುಕೊಂಡಿದ್ದು, ರಾಜ್ಯದಲ್ಲಿ ಇದುವರೆಗಿನ ಇದು ಅತ್ಯಧಿಕ ಮತದಾನವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ 17 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೇವಲ 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇನ್ನೂ ಮೂರು ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿದ್ದು, ಸಮಾಜವಾದಿ ಪಕ್ಷ (ಎಸ್‌ಪಿ) ರಾಜ್ಯದಲ್ಲಿ ಏಕೈಕ ಸ್ಥಾನವನ್ನು ಗೆದ್ದಿದೆ. ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ 77 ಮತ್ತು ಎನ್‌ಸಿಪಿ, ಬಿಟಿಪಿ ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 1, 2 ಮತ್ತು 3 ಸ್ಥಾನಗಳನ್ನು ಗಳಿಸಿದ್ದವು.

Newest FirstOldest First
3:01 PM, 12 Dec

ಭೂಪೇಂದ್ರ ಪಟೇಲ್ ಮತ್ತೊಮ್ಮೆ ಸಿಎಂ ಆದರು. ಗುಜರಾತ್ ಕ್ಯಾಬಿನೆಟ್ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ. 1) ಹೃಷಿಕೇಶ್ ಪಟೇಲ್ 2) ಕಾನು ದೇಸಾಯಿ 3) ರಾಘವಜಿ ಪಟೇಲ್ 4) ಮುಲುಭಾಯಿ ಬೇರಾ 5) ಕುಂವರ್ಜಿ ಬಾಲಿಯಾನ್ 6) ಭಾನುಬೆನ್ ಬಬಾರಿಯಾ 7) ಕುಬೇರ್ ದಿಂಡೋರ್ 8) ಬಲವಂತ್ ಸಿಂಗ್ ರಜಪೂತ್ 9) ಹರ್ಷ ಸಂಘವಿ 10) ಜಗದೀಶ್ ಪಾಂಚಾಲ್ 11) ಬಚು ಖಬರ್ 12) ಭಿಖು ಸಿಂಗ್ ಪರ್ಮಾರ್ 13) ಮುಖೇಶ್ ಪಟೇಲ್ 14) ಕುವರ್ಜಿ ಹಿಡಿಯುತ್ತಾನೆ 15) ಪ್ರಫುಲ್ ಪನ್ಸೇರಿಯಾ 16) ಪುರುಷೋತ್ತಮ ಸೋಲಂಕಿ
2:56 PM, 12 Dec

ಮುಖ್ಯಮಂತ್ರಿ ಪಟೇಲ್ ರ 2.0 ಕ್ಯಾಬಿನೆಟ್ ವಿವಿಧ ಜಾತಿ ಮತ್ತು ಜಿಲ್ಲೆಗಳ ಶಾಸಕರ ಮಿಶ್ರಣವಾಗಿದೆ ಎಂದು ಮೂಲಗಳು ತಿಳಿಸಿದ್ದು, ತನಗೆ ಮತ ಹಾಕಿದ ಸಮುದಾಯಗಳನ್ನು ಸಂತೋಷವಾಗಿಡಲು ಬಿಜೆಪಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿದು ಬಂದಿದೆ. ಇದು 25-28 ಸಚಿವರನ್ನು ಹೊಂದಿರುತ್ತದೆ.
2:34 PM, 12 Dec

ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಕುಟುಂಬಸ್ಥರು ಭಾಗಿಯಾಗಿದ್ದರು.
2:33 PM, 12 Dec

ಬಲ್ವಂತ್ ಸಿಂಗ್ ರಜಪೂತ್, ಕಬುಭಾಯಿ ದೇಸಾಯಿ, ರಾಘವ್ಜಿ ಪಟೇಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
2:32 PM, 12 Dec

ಕುನ್ವರ್ಜಿಭಾಯಿ ಮೋಹನ್‌ಭಾಯ್ ಬವಾಲಿಯಾ, ಡಾ ಕುಬೇರ್ ದಿಂಡೋರ್ ಮತ್ತು ಬಾನುಬೆನ್ ಬಬಾರಿಯಾ ಅವರು ಗುಜರಾತ್ ವಿಧಾನಸಭೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
2:31 PM, 12 Dec

ಶಾಸಕರಲ್ಲಿ ಸಾಂಘವಿ, ಖಬಾದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು

ಹರ್ಷ ಸಾಂಘವಿ, ಜಗದೀಶ್ ವಿಶ್ವಕರ್ಮ, ಪರ್ಷೋತ್ತಂಬಾಯಿ ಓಧವ್ಜಿಭಾಯಿ ಸೋಲಂಕಿ, ಬಚುಭಾಯಿ ಖಬಾದ್ ಮತ್ತು ಮುಖೇಶ್ಭಾಯ್ ಜಿನಾಭಾಯ್ ಪಟೇಲ್ ಗುಜರಾತ್ ಸರ್ಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
2:13 PM, 12 Dec

ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭೂಪೇಂದ್ರ ಪಟೇಲ್ ಸತತ ಎರಡನೇ ಬಾರಿಗೆ ರಾಜ್ಯದ ಸಿಎಂ ಆದರು. ಇದೇ ವೇದಿಕೆಯಲ್ಲಿ ಇತರ 16 ಶಾಸಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
2:13 PM, 12 Dec

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭದ ವೇದಿಕೆಯನ್ನು ತಲುಪಿದ್ದಾರೆ. ಕೆಲವೇ ಹೊತ್ತಿನಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
2:09 PM, 12 Dec

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್, 'ನಾನು ಅತ್ಯಂತ ಕಿರಿಯ ಶಾಸಕ. ನಾನು ಪಕ್ಷಕ್ಕಾಗಿ ಮಾತ್ರ ಕೆಲಸ ಮಾಡುತ್ತೇನೆ. ಯಾರನ್ನು ಸಂಪುಟದಲ್ಲಿ ಇರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಂತೋಷದಿಂದ ಸ್ವೀಕರಿಸುತ್ತೇನೆ' ಎಂದು ಹೇಳಿದರು.
2:08 PM, 12 Dec

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಗಾಂಧಿನಗರಕ್ಕೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ನೆಫಿಯು ರಿಯೊ ಅವರು,' 'ನಾನು ಗುಜರಾತ್‌ನ ವಿಜಯೋತ್ಸವವನ್ನು ಆಚರಿಸಲು ಇಲ್ಲಿಗೆ ಬಂದಿದ್ದೇವೆ, ನಾಗಾಲ್ಯಾಂಡ್‌ನ ಚುನಾವಣೆಯಲ್ಲಿಯೂ ಗೆಲ್ಲುವ ವಿಶ್ವಾಸವಿದೆ' ಎಂದು ಹೇಳಿದರು.
2:08 PM, 12 Dec

ಭೂಪೇಂದ್ರ ಪಟೇಲ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ನಾಯಕರನ್ನು ಸ್ವಾಗತಿಸಲು ಬಿಜೆಪಿ ಮಹಿಳಾ ಮೋರ್ಚಾ ಸಿದ್ಧತೆ ನಡೆಸಿದೆ.
2:03 PM, 12 Dec

ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಭಾವಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಗಾಂಧಿ ನಗರಕ್ಕೆ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಗುಜರಾತ್‌ನಲ್ಲಿ ಬಿಜೆಪಿ ಮೊದಲ ಬಾರಿಗೆ ಇಂತಹ ದೊಡ್ಡ ಗೆಲುವು ಸಾಧಿಸಿದೆ. ನಾನು ಗುಜರಾತ್‌ನ ಎಲ್ಲಾ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ' ಎಂದರು.
Advertisement
2:01 PM, 12 Dec

ಯುಪಿ ಸಿಎಂ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ತ್ರಿಪುರಾ ಸಿಎಂ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದಾರೆ.
1:54 PM, 12 Dec

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಹಮದಾಬಾದ್‌ಗೆ ಆಗಮಿಸಿದ್ದಾರೆ.
1:33 PM, 12 Dec

ಇಂದು ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಲಿದ್ದು ಬೃಹತ್ ಸಮಾರಂಭವನ್ನು ಏರ್ಪಡಿಸಲಾಗಿದೆ. ಹೀಗಾಗಿ ದೇಶದ ವಿವಿದೆಡೆಯಿಂದ ಈ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕೂಡ ಸಮಾರಂಭವದಲ್ಲಿ ಪಾಲ್ಗೊಳ್ಳಲಿದ್ದು ಈಗಾಗಲೇ ಗುಜರಾತ್ ತಲುಪಿದ್ದಾರೆ.
11:47 AM, 12 Dec

ಮಹಿಳಾ ಶಾಸಕರು ಸೇರಿದಂತೆ ಮೊದಸಾದಿಂದ ಗೆದ್ದಿರುವ ಭಿಖುಸಿಂಹಜಿ ಚತುರ್ಸಿಂಹಜಿ ಪರ್ಮಾರ್, ಕೇಶೋಡ್‌ನಿಂದ ದೇವಭಾಯಿ ಪಂಜಾಭಾಯಿ ಮಲಂ ಮತ್ತು ಕಾಮ್ರೇಜ್‌ನಿಂದ ಪ್ರಫುಲ್ ಪನ್ಸೇರಿಯಾ ಕೂಡ ಪಟೇಲ್ ಸಂಪುಟಕ್ಕೆ ಸೇರ್ಪಡೆಗೊಳ್ಳುವ ರೇಸ್‌ನಲ್ಲಿದ್ದಾರೆ.
11:45 AM, 12 Dec

ಇದರ ನಡುವೆ ನೂತನ ಸಂಪುಟ ರಚನೆಯ ಕಸರತ್ತು ಜೋರಾಗಿದೆ. ಭೂಪೇಂದ್ರ ಪಟೇಲ್ ಅವರ ಹೊಸ ಕ್ಯಾಬಿನೆಟ್ ನಲ್ಲಿ ಹಳೆಯ ಹಾಗೂ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ. ಸೂರತ್‌ನ ಮಜುರಾದಿಂದ ಸತತ ಮೂರನೇ ಅವಧಿಗೆ ಗೆದ್ದಿರುವ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಮತ್ತು ಗಾಂಧಿನಗರ ದಕ್ಷಿಣದಿಂದ ಗೆದ್ದ ಅಲ್ಪೇಶ್ ಠಾಕೋರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ.
11:44 AM, 12 Dec

ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸುವ ನಿರೀಕ್ಷೆ ಇದೆ. ಇಂದು ಭೂಪೇಂದ್ರ ಪಟೇಲ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
11:42 AM, 12 Dec

ಇಂದು ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದು ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ಸಕಲ ತಯಾರಿ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಗೆ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದು ರಾಜಕೀಯ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

English summary
Gujarat CM Swearing-In ceremony Live Updates in Kannada : PM Modi, Amit Shah and saints to attend ceremony. Check Bhupendra Patel oath taking as Gujarat CM latest news and highlights. ++ Kannada Description.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X