ನ.26ರಿಂದ 28ರ ವರೆಗೆ ಗುಜರಾತ್ ಪ್ರಚಾರದ ಅಂಗಳಕ್ಕೆ ಮಲ್ಲಿಕಾರ್ಜುನ ಖರ್ಗೆ

ಗಾಂಧಿನಗರ, ನವೆಂಬರ್ 22: ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 26 ರಿಂದ 28 ರವರೆಗೆ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ನವೆಂಬರ್ 26ರಂದು ಅಹಮದಾಬಾದ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ನವೆಂಬರ್ 27ರಂದು ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ನಂತರ ಇಂದೋರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಲಿದ್ದಾರೆ. ಈ ಭಾರತ್ ಜೋಡೋ ಯಾತ್ರೆಯು ನವೆಂಬರ್ 23ರಂದು ಮಧ್ಯಪ್ರದೇಶವನ್ನು ಪ್ರವೇಶಿಸುತ್ತದೆ. ತದನಂತರದಲ್ಲಿ ಖರ್ಗೆಯವರು ನವೆಂಬರ್ 28ರಂದು ಗಾಂಧಿನಗರ ಬಳಿ ಮತ್ತೊಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಚುನಾವಣಾ ಸಭೆಗಳ ಇತರ ವಿವರಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

Gujarat Election 2022: AICC president Mallikarjun Kharge to campaign in Gujarat from Nov 26

ಹಿಮಾಚಲ ಪ್ರದೇಶದಲ್ಲೂ ಮಲ್ಲಿಕಾರ್ಜುನ ಖರ್ಗೆ ಪ್ರಚಾರ

ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ಅವರಿಂದ ಅಧಿಕಾರ ಸ್ವೀಕರಿಸಿದ ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಈ ಹಿಂದೆ ನವೆಂಬರ್ 12ರಂದು ವಿಧಾನಸಭಾ ಚುನಾವಣೆ ನಡೆದ ಹಿಮಾಚಲ ಪ್ರದೇಶದಲ್ಲೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷದ ಪರ ಅಬ್ಬರ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೀಗ ಗುಜರಾತ್ ಚುನಾವಣಾ ಅಂಗಳದಲ್ಲಿ ಪ್ರಚಾರ ಕೈಗೊಳ್ಳಲು ಮುಂದಾಗಿದ್ದಾರೆ.

ಗುಜರಾತ್ ಚುನಾವಣೆ ಬಗ್ಗೆ ತಿಳಿಯಿರಿ

ಗುಜರಾತ್‌ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ.

ನವೆಂಬರ್ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 15 ನಾಮಪತ್ರ ಪರಿಶೀಲನೆ, ನವೆಂಬರ್ 17 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ಅದೇ ರೀತಿ ಗುಜರಾತ್‌ನ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 18ರಂದು ನಾಮಪತ್ರ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಅಂತಿಮವಾಗಿ ಡಿಸೆಂಬರ್ 8ರಂದು 182 ವಿಇಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+