ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ನಲ್ಲಿ ಏನಿದು ಲೆಕ್ಕಾಚಾರ?: ಒಬಿಸಿ ಮತ ಬಿದ್ದರೆ ಬಿಜೆಪಿ ಗೆದ್ದ ಹಾಗೆ!

|
Google Oneindia Kannada News

ಗಾಂಧಿನಗರ, ನವೆಂಬರ್ 21: ಗುಜರಾತ್ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿಯು ಹಿಂದುಳಿದ ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಐಡಿಯಾಲಜಿಗೆ ಹೊಂದಾಣಿಕೆ ಆಗುವಂತೆ ತಂತ್ರಗಾರಿಕೆ ಹೆಣೆಯಲಾಗುತ್ತಿದೆ.

ಗುಜರಾತ್ ಚುನಾವಣೆಯಲ್ಲಿ ಒಬಿಸಿ ಮತಗಳನ್ನು ಸೆಳೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಹಲವು ರಾಜ್ಯಗಳ ಸಮುದಾಯಗಳ ಬಿಜೆಪಿ ನಾಯಕರು ಗುಜರಾತ್ ರಂಗ ಪ್ರವೇಶ ಮಾಡಿದ್ದಾರೆ. ಕ್ಷೇತ್ರಗಳಲ್ಲಿ ಬೇರೂರಿದ ನಾಯಕರು ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

Breaking: ಗುಜರಾತ್ ಚುನಾವಣೆಗಾಗಿ ಬಿಜೆಪ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್Breaking: ಗುಜರಾತ್ ಚುನಾವಣೆಗಾಗಿ ಬಿಜೆಪ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ವಿವಿಧ ರಾಜ್ಯಗಳ ಬಿಜೆಪಿ ಶಾಸಕರು ಮತ್ತು ಸಂಸದರಿಗೆ ಮೂರು ದಿನಗಳ ಪ್ರವಾಸ ಕೈಗೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ. ಈ ಮೂರು ದಿನಗಳಲ್ಲಿ ನಿಗದಿಪಡಿಸಿರುವ ಕ್ಷೇತ್ರಗಳಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅವರು ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಸಭೆಗಳನ್ನು ನಡೆಸುತ್ತಾ ರಣತಂತ್ರ ರೂಪಿಸಬೇಕಾಗುತ್ತದೆ. ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸುವ ಟಾಸ್ಕ್ ಅನ್ನು ಬಿಜೆಪಿ ನಾಯಕರಿಗೆ ನೀಡಲಾಗಿದೆ.

ಒಬಿಸಿ ಮತಗಳ ಮೇಲೆಯೇ ಬಿಜೆಪಿಗೆ ಕಣ್ಣು

ಒಬಿಸಿ ಮತಗಳ ಮೇಲೆಯೇ ಬಿಜೆಪಿಗೆ ಕಣ್ಣು

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಬೇಕಾದರೆ ಎಲ್ಲ ಸಮುದಾಯಗಳನ್ನು ಒಲಿಸಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಅದರಲ್ಲೂ ರಾಜ್ಯದ ಒಟ್ಟು ಮತದಾರರ ಪೈಕಿ ಅರ್ಧಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಒಬಿಸಿ ಸಮುದಾಯದ ಮೇಲೆ ಬಿಜೆಪಿ ಹೆಚ್ಚು ಗಮನಹರಿಸುತ್ತಿದೆ. ಕಳೆದ 2017ರಲ್ಲಿ ಬಿಜೆಪಿಯ ಗೆಲುವಿನಲ್ಲಿ ಒಬಿಸಿ ಮತಗಳು ಪ್ರಮುಖ ಪಾತ್ರ ವಹಿಸಿದ್ದವು. ರಾಜ್ಯದಲ್ಲಿ ಆರು ಅವಧಿಗೆ ಅಧಿಕಾರವನ್ನು ಪಡೆದುಕೊಂಡಿರುವ ಬಿಜೆಪಿಯು ಇದೀಗ ಏಳನೇ ಬಾರಿ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದೆ.

ಒಬಿಸಿ ಮೋರ್ಚಾ ಜೊತೆ ಸಿಎಂ ಭೂಪೇಂದ್ರ ಪಟೇಲ್ ಸಭೆ

ಒಬಿಸಿ ಮೋರ್ಚಾ ಜೊತೆ ಸಿಎಂ ಭೂಪೇಂದ್ರ ಪಟೇಲ್ ಸಭೆ

ಗುಜರಾತ್ ಒಬಿಸಿ ಮೋರ್ಚಾವು ಸಿಎಂ ಭೂಪೇಂದ್ರ ಪಟೇಲ್ ಜೊತೆಗೆ ಒಬಿಸಿ ಬ್ಲಾಕ್‌ನ ವಿವಿಧ ಸಮುದಾಯಗಳೊಂದಿಗೆ ಸಭೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಒಬಿಸಿ ಸಮುದಾಯದಲ್ಲಿ 145ಕ್ಕೂ ಹೆಚ್ಚು ಉಪ-ಗುಂಪುಗಳಿವೆ. ರಾಜ್ಯದ 182 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳಲ್ಲಿ ಒಬಿಸಿ ಅಭ್ಯರ್ಥಿಗಳ ಗೆಲುವಿಗೆ ಇದೇ ಮೋರ್ಚಾ ಪ್ರಮುಖ ಕಾರಣವಾಗಿದೆ.

ಪಸ್ಮಾಂಡ ಮುಸ್ಲಿಂ ಸಮುದಾಯದೊಂದಿಗೆ ಸಂವಾದ

ಪಸ್ಮಾಂಡ ಮುಸ್ಲಿಂ ಸಮುದಾಯದೊಂದಿಗೆ ಸಂವಾದ

ಬಿಜೆಪಿಯು ಪಸ್ಮಾಂಡ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಂವಾದ ನಡೆಸುತ್ತಿದೆ ಎಂದು ಒಬಿಸಿ ಮೋರ್ಚಾ ಅಧ್ಯಕ್ಷ ಡಾ. ಕೆ. ಲಕ್ಷ್ಮಣ್ ಹೇಳಿದ್ದಾರೆ. ದ್ವಾರಕಾ ಜಿಲ್ಲೆಯ ಪ್ರವಾಸ್‌ನಲ್ಲಿ ಭಾಗವಹಿಸಿರುವ ಒಬಿಸಿ ಮೋರ್ಚಾ ಅಧ್ಯಕ್ಷ ಡಾ. ಕೆ. ಲಕ್ಷ್ಮಣ್, "ನಾವು ರಾಜ್ಯದಾದ್ಯಂತ ಪಸ್ಮಾಂಡ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದೇವೆ. ಅವರನ್ನು ನಮ್ಮ ಕಡೆಗೆ ಬರುವಂತೆ ಮನವರಿಕೆ ಮಾಡುತ್ತಿದ್ದೇವೆ. ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದರೆ, ಬಿಜೆಪಿಯು ಸಮುದಾಯದ ಅತ್ಯಂತ ಹಿಂದುಳಿದವರನ್ನು ಮೇಲಕ್ಕೆತ್ತಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಸ್ಮಾಂಡ ಮುಸ್ಲಿಂ ಸಮುದಾಯವನ್ನು ಮೆಚ್ಚಿಸುವ ನಿರ್ಣಯವೊಂದನ್ನು ಪಕ್ಷ ಘೋಷಿಸಿತ್ತು. ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯು ಈ ವರ್ಷದ ಆರಂಭದಲ್ಲಿ ಗುಜರಾತ್‌ನ ಕೆವಾಡಿಯಾದಲ್ಲಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಡೆಸಲಾಯಿತು ಎಂದು ಒಬಿಸಿ ಮೋರ್ಚಾ ಮುಖಂಡರು ಹೇಳಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆ ಯಾವಾಗ?

ಗುಜರಾತ್ ವಿಧಾನಸಭಾ ಚುನಾವಣೆ ಯಾವಾಗ?

ಗುಜರಾತ್‌ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ.

93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 8ರಂದು 182 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
Gujarat Election 2022: Bharatiya Janata Party eyes on OBC Votes with Modi card. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X