Gujarat Election Dates 2022 Live: ಡಿ.1 ಮತ್ತು 5ರಂದು ಎರಡು ಹಂತಗಳಲ್ಲಿ ಗುಜರಾತ್ ಚುನಾವಣೆ
ಗಾಂಧಿನಗರ, ನವೆಂಬರ್ 03: ಗುಜರಾತ್ ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಕೃತವಾಗಿ ದಿನಾಂಕ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗವು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ದಿನಾಂಕವನ್ನು ಘೋಷಿಸಲಿದೆ.
ಗುಜರಾತ್‌ನಲ್ಲಿ ಜಾರಿಯಲ್ಲಿರುವ ಸರ್ಕಾರದ ಅವಧಿಯು 2023ರ ಫೆಬ್ರವರಿ 23ರಂದು ಅಂತ್ಯಗೊಳ್ಳುತ್ತದೆ. ಈ ಹಿನ್ನೆಲೆ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವುದಕ್ಕೆ ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ತೊಂದರೆಗಳ ಹಿನ್ನೆಲೆ ಒಂದು ತಿಂಗಳ ಅಂತರದಲ್ಲಿ ಎರಡು ರಾಜ್ಯಗಳ ಚುನಾವಣೆ ನಡೆಸುವುದಕ್ಕೆ ಕೇಂದ್ರ ಆಯೋಗವು ನಿರ್ಧರಿಸಿದೆ.

ರಾಜ್ಯದ 182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆಯ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತೊಡೆ ತಟ್ಟುವುದಕ್ಕೆ ಅಣಿಯಾಗಿರುವ ಆಪ್, ಈಗಾಗಲೇ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ನಾಮಪತ್ರ ವಾಪಸ್ಸಾತಿ, ನಾಮಪತ್ರ ಪರಿಶೀಲನೆ, ಮತದಾನ ಹಾಗೂ ಮತಎಣಿಕೆ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ.












Click it and Unblock the Notifications