• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಗುಜರಾತ್ ಚುನಾವಣೆಗಾಗಿ ಬಿಜೆಪ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

|
Google Oneindia Kannada News

ಗಾಂಧಿನಗರ, ನವೆಂಬರ್ 11: ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷವು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸ್ಥಾನ ನೀಡಲಾಗಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುನ್ನ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಹೆಸರು ಸೇರ್ಪಡೆಯಾಗಿದೆ.

ಗುಜರಾತ್ ಚುನಾವಣೆ: ಕಾಂಗ್ರೆಸ್‌ 2ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ 21 ಹಾಲಿ ಶಾಸಕರುಗುಜರಾತ್ ಚುನಾವಣೆ: ಕಾಂಗ್ರೆಸ್‌ 2ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ 21 ಹಾಲಿ ಶಾಸಕರು

ಕೇಂದ್ರೀಯ ನಾಯಕರ ಜೊತೆಗೆ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಸ್ಮೃತಿ ಇರಾನಿ ಕೂಡ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹೆಸರನ್ನೂ ಸಹ ಸೇರಿಸಲಾಗಿದೆ. ಇಬ್ಬರೂ ನಾಯಕರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು.

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬೇರೆ ರಾಜ್ಯದ ನಾಯಕರು:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಗುಜರಾತ್ ಚುನಾವಣೆ ಬಗ್ಗೆ ತಿಳಿಯಿರಿ:

ಗುಜರಾತ್‌ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ.

ನವೆಂಬರ್ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 15 ನಾಮಪತ್ರ ಪರಿಶೀಲನೆ, ನವೆಂಬರ್ 17 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ಅದೇ ರೀತಿ ಗುಜರಾತ್‌ನ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ.

ನವೆಂಬರ್ 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 18ರಂದು ನಾಮಪತ್ರ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಅಂತಿಮವಾಗಿ ಡಿಸೆಂಬರ್ 8ರಂದು 182 ವಿಇಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
Gujarat Election 2022: Nitin Gadkari, Vijay Rupani are in BJP Star Campaigners List.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X