ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣಾ ಪ್ರಚಾರಕ್ಕೆ ತೆರೆ, ಡಿ.14ರಂದು ಮತದಾನ

|
Google Oneindia Kannada News

ಅಹಮದಾಬಾದ್, ಡಿಸೆಂಬರ್. 12 : ಗುಜರಾತ್ ವಿಧಾನಸಭೆಯ 2ನೇ ಹಂತದ ಮತದಾನಕ್ಕೆ ಇಂದು ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಡಿ.14ರ ಗುರುವಾರ ಮತದಾನ ನಡೆಯಲಿದೆ.

'ಸಾಗರ ವಿಮಾನ'ದಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಪ್ರಯಾಣ'ಸಾಗರ ವಿಮಾನ'ದಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಪ್ರಯಾಣ

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರು.

Gujarat Election : Campaigning for 2nd phase ends, voting on Dec 14

ನರೇಂದ್ರ ಮೋದಿ ಸಾಬರಮತಿ ನದಿಯಿಂದ ದರೋಯ್ ಅಣೆಕಟ್ಟೆ ತನಕ ಸಾಗರ ವಿಮಾನದಲ್ಲಿ ಐತಿಹಾಸಿಕ ಪ್ರಯಾಣ ಮಾಡಿದರು. ರಾಹುಲ್ ಗಾಂಧಿ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಚಾರ ಕಾರ್ಯದ ಕೊನೆಯ ದಿನ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ದೇವಾಲಯಗಳಿಗೆ ಭೇಟಿ ನೀಡಿದರು. ರಾಹುಲ್ ಗಾಂಧಿ ಪ್ರಸಿದ್ಧ ಜಗನ್ನಾಥ ದೇವಾಲಯಕ್ಕೆ ಭೇಟಿ ಕೊಟ್ಟರು.

ಗುಜರಾತ್: ಸಾಗರ ವಿಮಾನದಲ್ಲಿ ಮೋದಿ ಪ್ರಚಾರದ ಸರ್ಕಸ್ಗುಜರಾತ್: ಸಾಗರ ವಿಮಾನದಲ್ಲಿ ಮೋದಿ ಪ್ರಚಾರದ ಸರ್ಕಸ್

ಹಾರ್ದಿಕ್ ಪಟೇಲ್ ಅಹಮದಾಬಾದ್‌ನ ನಿಕೋಲ್‌ನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕಾರ್ಯ ಅಂತ್ಯವಾಯಿತು.

ಡಿ.14ರ ಗುರುವಾರ 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 851 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2.22 ಕೋಟಿ ಮತದಾರರು ಮತ ಚಲಾವಣೆ ಮಾಡುವ ಹಕ್ಕು ಹೊಂದಿದ್ದಾರೆ.

182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆದಿತ್ತು. 89 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ 66.75ರಷ್ಟು ಮತದಾನ ನಡೆದಿತ್ತು. ಡಿ.18ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

English summary
Campaigning for the 2nd phase of Gujarat elections 2017 ended today. Voting will be held on December 14. Total 851 candidates are in the fray, 2.22 crore people are eligible to vote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X