ಗುಜರಾತ್: 900ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ
ಗುಜರಾತ್‌ನಲ್ಲಿ ಚುನಾವಣಾ ಆಯೋಗ ವಿವಿಧ ದರ್ಜೆಗಳು ಮತ್ತು ಸೇವೆಗಳ 900ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಶ್ರೇಣಿಗಳು ಮತ್ತು ಸೇವೆಗಳ 900ಕ್ಕೂ ಹೆಚ್ಚು ಅಧಿಕಾರಿಗಳನ್ನು ಇಸಿಐ ಮಾರ್ಗಸೂಚಿಗಳು ಮತ್ತು ಸೂಚನೆಗಳ ಪ್ರಕಾರ ವರ್ಗಾಯಿಸಲಾಗಿದೆ. ಗುಜರಾತ್ ಮುಖ್ಯ ಕಾರ್ಯದರ್ಶಿಯಿಂದ ಅನುಸರಣೆಯನ್ನು ಸ್ವೀಕರಿಸಲಾಗಿದೆ ಎಂದು ಇಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಕ್ಟೋಬರ್ 21 ರಂದು, ಆಯೋಗವು ಗುಜರಾತ್ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ನಿಗದಿತ ಅವಧಿ ಮುಗಿದ ನಂತರ ಅನುಸರಣೆ ವರದಿಗಳನ್ನು ಒದಗಿಸುವಂತೆ ಪತ್ರ ಬರೆದಿತ್ತು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರನ್ನೊಳಗೊಂಡ ಆಯೋಗವು ಆರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಉಳಿದ 51 ಅಧಿಕಾರಿಗಳನ್ನು ತಮ್ಮ ಪ್ರಧಾನ ಕಚೇರಿಗೆ ವರದಿ ಮಾಡುವಂತೆ ಸೂಚಿಸಿತ್ತು. ಗುರುವಾರದೊಳಗೆ ವರದಿಯನ್ನು ಕಳುಹಿಸುವಂತೆ ಅದು ಗುಜರಾತ್ ಸರ್ಕಾರವನ್ನು ಕೇಳಿತ್ತು.\

ಮುಂದಿನ ವರ್ಷ ಫೆಬ್ರವರಿ 18 ರೊಳಗೆ ಅವಧಿ ಮುಗಿಯುವ ಗುಜರಾತ್ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ, ಈ ವರ್ಷಾಂತ್ಯದಲ್ಲಿ ನಡೆಯುವ ಚುನಾವಣೆಗೆ ಬಿಜೆಪಿ ಹಾಗೂ ಆಪ್ ತೀವ್ರ ಪೈಪೋಟಿಗೆ ಇಳಿದಿವೆ. ಚುನಾವಣೋತ್ತರ ಭರವಸೆಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯುತ್ತಿವೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರಳಿ ತರುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿದೆ.
ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭರವಸೆಗಳನ್ನು ಈಡೇರಿಸುವಲ್ಲಿ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಗುಜರಾತ್‌ನ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ.
ಕೇಜ್ರಿವಾಲ್ ಅವರು ರಾಜ್ಯಕ್ಕೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಹಳೆಯ ಪಿಂಚಣಿ ಯೋಜನೆ ಅನ್ನು ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ. ಕಳೆದ 27 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿರುವ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರಳುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಕೂಡ ಭರವಸೆ ನೀಡುತ್ತಿದೆ.

ಈಗಾಗಲೇ 68 ಸ್ಥಾನಗಳ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತಗಳು ಘೋಷಣೆಯಾಗಲಿವೆ.\












Click it and Unblock the Notifications