ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Gujarat Election Result 2022 : ನಮ್ಮದೀಗ ರಾಷ್ಟ್ರೀಯ ಪಕ್ಷ ಎಂದ ಅರವಿಂದ್ ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಡಿಸೆಂಬರ್ 8: ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಈಗಾಗಲೇ ಎಲ್ಲರ ನಿರೀಕ್ಷೆಗಳನ್ನೂ ಮೀರಿ ಗೆಲುವು ಸಾಧಿಸಿದೆ. 156 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 7ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ.

ಮೊದಲಬಾರಿಗೆ ಗುಜರಾತ್‌ನಲ್ಲಿ ಸ್ಪರ್ಧೆ ಮಾಡಿದ್ದ ಆಮ್ ಆದ್ಮಿ ಪಕ್ಷ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಒಟ್ಟಾರೆ ಚಲಾವಣೆಯಾದ ಮತಗಳಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿದ್ದ ಮತಗಳ ಪಾಲು ಶೇಕಡಾ 13ರಷ್ಟಿದೆ. ಅಂದರೆ ಈ ಮಾನದಂಡ ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಗುರುತಿಸಲು ಸಹಕಾರಿಯಾಗಿದೆ. ಭಾರತೀಯ ಚುನಾವಣಾ ಆಯೋಗ (ಇಸಿಐ) ಇದನ್ನು ಅಧಿಕೃತವಾಗಿ ಘೋಷಿಸಲಿದೆ.

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

ಅದಕ್ಕೂ ಮುನ್ನವೇ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್‌ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Gujarat Election Result 2022 : After Won 4 Seats In Gujarat Kejriwal Declared AAP As National Party

"ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಮತ್ತು ಎಲ್ಲಾ ದೇಶವಾಸಿಗಳಿಗೆ ರಾಷ್ಟ್ರೀಯ ಪಕ್ಷವಾಗಲು ಸಹಕಾರ ನೀಡಿದ್ದಕ್ಕೆ ಅಭಿನಂದನೆಗಳು" ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಹಿನ್ನಡೆ

2017 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಪಡೆದುಕೊಂಡಿದ್ದ ಕಾಂಗ್ರೆಸ್ ಈ ಬಾರಿ ಧೂಳಿಪಟವಾಗಿದೆ. ಅದು ಕೇವಲ 17 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದೆ. ಒಂದು ವೇಳೆ ಆಪ್ ಈ ಬಾರಿ ಗುಜರಾತ್ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೆ, ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿಗೆ 2024 ರ ಲೋಕಸಭೆ ಚುನಾವಣೆಯಲ್ಲಿ ಸವಾಲು ಹಾಕುವ ಅವಕಾಶ ಇತ್ತು. ಆದರೆ, ಗುಜರಾತ್ ಸೋಲು ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾಗಿರುವ ಗುಜರಾತ್‌ನಲ್ಲಿ ಮೊದಲ ಬಾರಿಗೆ ತ್ರಿಕೋನ ಹೋರಾಟವನ್ನು ನೀಡಲು ಎಎಪಿ ಭಾರಿ ಪ್ರಚಾರವನ್ನು ನಡೆಸಿತ್ತು. ದೆಹಲಿ ಮುನ್ಸಿಪಲ್ ಚುನಾವಣೆಯ ಗೆಲುವಿನಿಂದ ಉತ್ತೇಜಿತವಾಗಿರುವ ಎಎಪಿ ತನ್ನ ಕಲ್ಯಾಣ ನೀತಿಯನ್ನು ಗುಜರಾತ್‌ನಲ್ಲಿ ಜನರು ಒಪ್ಪಿಕೊಳ್ಳುತ್ತಾರೆ ಎಂದು ಭಾವಿಸಿತ್ತು. ಆದರೆ, ಗುಜರಾತ್ ಜನತೆ ಆಮ್ ಆದ್ಮಿ ಪಕ್ಷವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

English summary
Gujarat Assembly Election Results 2022 Updates, After Won 4 Seats In Gujarat Kejriwal Declared AAP As National Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X