Gujarat Election Results 2022: ಪ್ರಧಾನಿ ಮೋದಿ ತವರು ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ
ಗಾಂಧಿನಗರ, ಡಿಸೆಂಬರ್ 8: ಗುಜರಾತ್ ಚುನಾವಣೆ ಫಲಿತಾಂಶ (Gujarat Election Results 2022) ಇಂದು ಹೊರಬರಲಿದೆ. ಬೆಳಿಗ್ಗೆಯಿಂದಲೇ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಪ್ರಧಾನಿ ಮೋದಿ ಅವರ ತವರು ಜಿಲ್ಲೆಯಾದ ಮೆಹಸಾನದ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್ ಚುನಾವಣೆಯು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಸತತ ಏಳನೇ ಬಾರಿ ಗುಜರಾತ್‌ನ ಗದ್ದುಗೆ ಹಿಡಿಯುವ ಸನ್ನಾಹದಲ್ಲಿ ಬಿಜೆಪಿ ಇದೆ.
Recommended Video
ಪ್ರಧಾನಿ ಮೋದಿ ಅವರು ಗುಜರಾತ್‌ನಲ್ಲಿ ಅಬ್ಬರದ ಪ್ರಚಾರ ಮಾಡಿದ್ದಾರೆ. ಈ ಬಾರಿ ಬಿಜೆಪಿಗೆ ಪಾಟೀದಾರ್ ಹಾಗೂ ಒಬಿಸಿ ಮತಗಳು ಸುಲಭದಲ್ಲಿ ಸಿಗಲಿವೆ ಎಂಬುದು ರಾಜಕೀಯ ವಿಶ್ಲೇಷಕರ ವಾದವಾಗಿದೆ. ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಹಾಗೂ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಕೊನೆಯ ಸಾರಿ ಸೌರಾಷ್ಟ್ರದಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿತ್ತು. ಆದರೆ, ಈ ಸಾರಿ ಸೌರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇಲ್ಲಿ ಪಾಟೀದಾರ್ ಸಮುದಾಯದ ಮತಗಳು ನಿರ್ಣಾಯಕವಾಗಿವೆ.

ಪ್ರಧಾನಿ ಮೋದಿ ತವರು ಜಿಲ್ಲೆಯಾದ ಮೆಹಸಾನಾದಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಂಡಿದೆ. ಮೋದಿಯವರು ಮೆಹಸಾನಾ ಜಿಲ್ಲೆಯ ವಡ್ನಾಗರ್‌ದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ.
ಮೆಹಸಾನಾ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (BJP), ಆಮ್ ಆದ್ಮಿ ಪಕ್ಷ (AAP) ಮತ್ತು ಕಾಂಗ್ರೆಸ್(Congress) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಮುಖೇಶ್ ಪಟೇಲ್, ಕಾಂಗ್ರೆಸ್‌ನಿಂದ ಭಗತ್ ಪಟೇಲ್ ಮತ್ತು ಎಎಪಿಯಿಂದ ಪಿ.ಕೆ. ಪಟೇಲ್ ಕಣಕ್ಕಿಳಿದಿದ್ದಾರೆ. ಮೆಹಸಾನಾದಲ್ಲಿ ಕಳೆದ ಮೂರು ಬಾರಿಯಿಂದ ಬಿಜೆಪಿ ಜಯ ಸಾಧಿಸಿದೆ.

ಮೆಹ್ಸಾನಾ ಜಿಲ್ಲೆಯ ಖೇರಾಲು, ಉಂಜಾ, ಬೇಚರಾಜಿ, ಕಡಿ, ವಿಜಾಪುರ ವಿಧಾನಸಭೆ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.
ಡಿಸೆಂಬರ್ 01 ಹಾಗೂ 05 ರಂದು ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. ಇಂದು ಪೂರ್ಣ ಫಲಿತಾಂಶ ಹೊರಬೀಳಲಿದೆ.












Click it and Unblock the Notifications