Gujarat Election Result 2022 : ಬಿಜೆಪಿಯಿಂದ ಕಣಕ್ಕಿಳಿದ ಮೊದಲ ಕ್ರಿಶ್ಚಿಯನ್ ಅಭ್ಯರ್ಥಿಗೆ ಜಯ
ಅಹಮದಾಬಾದ್, ಡಿಸೆಂಬರ್ 8: ಕಳೆದ 20 ವರ್ಷಗಳ ಬಳಿಕ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೊದಲ ಕ್ರಿಶ್ಚಿಯನ್ ಅಭ್ಯರ್ಥಿ, ಮೋಹನ್ ಕೊಂಕಣಿ ತಾಪಿ ಜಿಲ್ಲೆಯ ವ್ಯಾರಾ ಬುಡಕಟ್ಟು ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.
20 ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿಯಿಂದ ಕಣಕ್ಕಿಳಿದ ಮೊದಲ ಕ್ರಿಶ್ಚಿಯನ್ ಅಭ್ಯರ್ಥಿ ಮೋಹನ್ ಕೊಂಕಣಿ, ತಾಪಿ ಜಿಲ್ಲೆಯ ವ್ಯಾರಾ ಬುಡಕಟ್ಟು ಕ್ಷೇತ್ರದಿಂದ ಸ್ಪರ್ಧಿಸಿ 22,670 ಮತಗಳಿಂದ ಗೆಲುವು ಸಾಧಿಸಿದ್ದಾರೆ. ನಾಲ್ಕು ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಪುನಭಾಯ್ ಗಮಿತ್ ಮೂರನೇ ಸ್ಥಾನಕ್ಕೆ ಕುಸಿದರು. ಆಮ್ ಆದ್ಮಿ ಪಕ್ಷ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಗುಜರಾತ್‌ನ ಮೊದಲ ಬುಡಕಟ್ಟು ಮುಖ್ಯಮಂತ್ರಿಯಾಗಿದ್ದ ಅಮರಸಿಂಹ ಚೌಧರಿ ವ್ಯಾರಾ ಕ್ಷೇತ್ರದಲ್ಲಿ ನಿಂತು ಗೆಲುವು ಸಾಧಿಸಿದ್ದರು. ಈ ಕ್ಷೇತ್ರ ಇದೇ ಮೊದಲ ಬಾರಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಇಬ್ಬರು ಕ್ರಿಶ್ಚಿಯನ್ ಅಭ್ಯರ್ಥಿಗಳ ನಡುವೆ ಸ್ಪರ್ಧೆಗೆ ಸಾಕ್ಷಿಯಾಯಿತು.

ಆಪ್ ಅಭ್ಯರ್ಥಿಯಿಂದ ಗೆಲುವಿಗೆ ಅಡ್ಡಿ?
ಹಾಲಿ ಶಾಸಕರಾದ ಗಮಿತ್ 2004 ರಲ್ಲಿ ನಡೆದ ಉಪಚುನಾವಣೆ ಬಳಿಕ ಸತತವಾಗಿ ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಅವರು ಶಾಸಕರಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳು ಅವರನ್ನು ಗೆಲ್ಲಿಸಿದ್ದವು. ಆದರೆ, ಇಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಹಾಕಿದ ಕಾರಣ ಬಿಜೆಪಿ ಅಭ್ಯರ್ಥಿಗೆ ಅನುಕೂಲವಾಯಿತು. ಈ ಕ್ಷೇತ್ರದಲ್ಲಿ ಒಟ್ಟು 2.20 ಲಕ್ಷ ಮತದಾರರಿದ್ದು, ಅದರಲ್ಲಿ 40 ಸಾವಿರ ಮತದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಯ ಮತಎಣಿಕೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಬಿಜೆಪಿ 7.10 ನಿಮಿಷದ ವೇಳೆಗೆ 147 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು, 9 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಹೊರಬೀಳಲಿದೆ.
ಆಮ್ ಆದ್ಮಿ ಪಕ್ಷ 5 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಸೋಮವಾರ ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications