• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Gujarat Election Result 2022 : ಗುಜರಾತ್ ಚುನವಾಣೆ ಭರ್ಜರಿ ಜಯದ ನಂತರ ಅಮಿತ್ ಶಾ ಕೊಟ್ಟ ಪ್ರತಿಕ್ರಿಯೆ ಇದು

|
Google Oneindia Kannada News

ನವದೆಹಲಿ, ಡಿಸೆಂಬರ್ 8: 2022ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸಿದೆ. ದಾಖಲೆಯ ಸ್ಥಾನಗಳನ್ನು ಗೆಲ್ಲುವ ಮೂಲಕ 7ನೇ ಬಾರಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಮುಂದಾಗಿದೆ.

ಬಿಜೆಪಿ ಭರ್ಜರಿ ವಿಜಯದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ "ಹುಸಿ ಭರವಸೆ ನೀಡುವವರನನ್ನು ಗುಜರಾತ್ ಮತದಾರ ತಿರಸ್ಕರಿಸಿದ್ದಾರೆ" ಎಂದು ಹೇಳಿದ್ದಾರೆ.

Gujarat Election Results 2022: ಎಎಪಿ, ಒವೈಸಿಯಿಂದ ಮುಸ್ಲಿಂ ಮತಗಳ ವಿಭಜನೆ, ಬಿಜೆಪಿಗೆ ಲಾಭGujarat Election Results 2022: ಎಎಪಿ, ಒವೈಸಿಯಿಂದ ಮುಸ್ಲಿಂ ಮತಗಳ ವಿಭಜನೆ, ಬಿಜೆಪಿಗೆ ಲಾಭ

"ಗುಜರಾತ್ ಸುಳ್ಳು ಭರವಸೆ ನೀಡುವರನ್ನು ತಿರಸ್ಕರಿಸುತ್ತದೆ. ದಂಗೆಕೋರರು ಮತ್ತು ತುಷ್ಟೀಕರಣ ರಾಜಕೀಯ ಮಾಡುವವರನ್ನು ಮತದಾರರು ತಿರಸ್ಕರಿಸಿದ್ದಾರೆ. ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಶ್ರಮಿಸುವವರನ್ನು ಗುಜರಾತ್ ಜನತೆ ಆರಿಸಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಸೇರಿದಂತೆ ಪಕ್ಷದ ಗೆಲುವಿಗೆ ಶ್ರಮಿಸಿದವರಿಗೆ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

"ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಈ ಗೆಲುವು ಅಭೂತಪೂರ್ವ ವಿಶ್ವಾಸವನ್ನು ನೀಡಿದೆ. ಮಹಿಳೆಯರು, ಯುವಕರು ಮತ್ತು ರೈತರು ಸೇರಿದಂತೆ ಎಲ್ಲಾ ವರ್ಗದ ಜನತೆ ಬಿಜೆಪಿ ಜೊತೆಗಿದ್ದಾರೆ ಎಂದು ಇದು ತೋರಿಸಿದೆ. ಎರಡು ದಶಕಗಳಲ್ಲಿ ಮೋದಿ ನಾಯಕತ್ವದಲ್ಲಿ ಗುಜರಾತ್ ಇತಿಹಾಸ ನಿರ್ಮಿಸಲು ಕೆಲಸ ಮಾಡಿದೆ. ಅಭಿವೃದ್ದಿಯಲ್ಲಿ ಬಿಜೆಪಿ ದಾಖಲೆ ನಿರ್ಮಿಸಿದೆ. ಜನ ಕೂಡ ಅದಕ್ಕೆ ತಕ್ಕಂತೆ ಆಶೀರ್ವಾದ ಮಾಡುವ ಮೂಲಕ ದಾಖಲೆಯ ಜಯಕ್ಕೆ ಕಾರಣವಾಗಿದ್ದಾರೆ" ಎಂದು ಅವರು ಹೇಳಿದ್ದಾರೆ.

ಭೂಪೇಂದ್ರ ಪಟೇಲ್ ಮುಖ್ಯಮಂತ್ರಿ

ಮತದಾನ ಆರಂಭಕ್ಕೆ ಮುನ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್, 2022 ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸುವುದಾಗಿ ಹೇಳಿದ್ದರು. ಪ್ರಸ್ತುತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದರು. ಅದರಂತೆ ಭೂಪೇಂದ್ರ ಪಟೇಲ್ ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡುವತ್ತ ಮುನ್ನುಗ್ಗಿದೆ. ಮಧ್ಯಾಹ್ನ 3.00 ಗಂಟೆಗೆ ಬಂದ ವರದಿಯ ಪ್ರಕಾರ ಬಿಜೆಪಿ ಈಗಾಗಲೇ 34 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 122 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ಸಾಂಪ್ರದಾಯಿಕ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್ ಇದುವರೆಗೆ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಕಂಡಿದೆ. 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮುಖಭಂಗ ಅನುಭವಿಸಿದೆ. ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು.

English summary
Gujarat Assembly Election Results 2022 Updates, Union Minister Amit Shah Reacted after massive victory in Gujarat Election. He Said, Gujarat Peaple Rejected empty promises.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X