Gujarat Election results 2022: ಬಿಜೆಪಿ ಕಾರ್ಯಕರ್ತರ ಸಂಭ್ರಮ ಆರಂಭ
ಅಹಮದಾಬಾದ್, ಡಿಸೆಂಬರ್ 8: ಗುಜರಾತ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಶುಕ್ರವಾರ 10 ಗಂಟೆ ಸುಮಾರಿಗೆ ಬಹುಮತ ದಾಟಿ ಭಾರತೀಯ ಜನತಾ ಪಕ್ಷ 137 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರಿಂದ ಗಾಂಧಿನಗರ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.
ಇನ್ನೂ ಕಾಂಗ್ರೆಸ್ ಈ ಸಮಯದಲ್ಲಿ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಆಮ್ ಆದ್ಮಿ ಪಕ್ಷ 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತರ 2 ಕ್ಷೇತ್ರಗಳಲ್ಲಿ ಇಬ್ಬರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರಲ್ಲಿ ಸಿಎಂ ಅಭ್ಯರ್ಥಿ ಭೂಪೇಂದ್ರ ಪಟೇಲ್ 12,000 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಡಿಸೆಂಬರ್ 1 ಹಾಗೂ 5ರಂದು ಕ್ರಮವಾಗಿ ಮೊದಲ ಹಾಗೂ ಎರಡನೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 59.11 ಹಾಗೂ ಎರಡನೇ ಹಂತದಲ್ಲಿ 63.14ರಷ್ಟು ಮತದಾನವಾಗಿತ್ತು. ಶುಕ್ರವಾರ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

1,621 ಅಭ್ಯರ್ಥಿಗಳು ಕಣದಲ್ಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಭಾರೀ ಭದ್ರತೆ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದಿದ್ದ ಬಿಜೆಪಿ ಈ ಭಾರಿಯೂ ಗೆಲ್ಲುವ ವಿಶ್ವಾಸದಲ್ಲಿ ಇದೆ. ಚುನಾವಣಾ ಎಕ್ಸಿಟ್ ಪೋಲ್‌ಗಳು ಕೂಡ ಬಿಜೆಪಿಗೆ ಪೂರಕವಾಗಿ ಇವೆ. ಗುಜರಾತ್‌ನಲ್ಲಿ 182 ವಿಧಾನಸಭಾ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ.64.33ರಷ್ಟು ಮತದಾನವಾಗಿದೆ. ಆದರೆ, ಇದು 2017ರ ಚುನಾವಣೆಯಲ್ಲಿ ದಾಖಲಾದ ಮತದಾನಕ್ಕೆ ಹೋಲಿಸಿದರೆ ಶೇ.4ಕ್ಕಿಂತ ಕಡಿಮೆಯಾಗಿದೆ.
2017ರಲ್ಲಿ ನಡೆದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಪಡೆದ್ದಿತ್ತು. ಅದರ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದುಕೊಂಡಿತ್ತು. ಪ್ರಸ್ತುತ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿಯ ಬಲವು 111 ಆಗಿದೆ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್‌ನ ಹಲವಾರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಫರ್ಧೆವನ್ನು ನೀಡಿತು. ಆದಾಗ್ಯೂ, ಆಮ್ ಆದ್ಮಿ ಪಾರ್ಟಿ ಮತ ಪಡೆಯುವ ಮೂಲಕ ಕಾಂಗ್ರೆಸ್‌ಗೆ ಪ್ರಬಲ ಹೊಡೆತ ನೀಡಬಹುದು. 2017 ರಲ್ಲಿ ಪಾಟಿದಾರ್ ಸಮುದಾಯದ ಪ್ರತಿಭಟನೆಯೊಂದಿಗೆ ಬಿಜೆಪಿ ಕೂಡ ಒತ್ತಡದಲ್ಲಿ ಸಿಲುಕಿತ್ತು. ಆದರೆ ಈ ಬಾರಿ ಪರಿಸ್ಥಿತಿಯು ಬಿಜೆಪಿಯ ಪರವಾಗಿದ್ದು, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಬಹುದು ಎನ್ನಲಾಗಿದೆ.












Click it and Unblock the Notifications