Gujarat New Govt : ಡಿಸೆಂಬರ್‌ 12ಕ್ಕೆ ಗುಜರಾತ್‌ ಸಿಎಂ ಅಧಿಕಾರ ಸ್ವೀಕಾರ

ಅಹಮದಾಬಾದ್‌, ಡಿಸೆಂಬರ್‌ 8: ಗುಜರಾತ್‌ ವಿಧಾನಸಭಾ ಚುನಾವಣೆ 2022 ಫಲಿತಾಂಶದ ಬಹುತೇಕ ಚಿತ್ರಣ ಸಿಗುತ್ತಿದ್ದು, ಆಯ್ಕೆಯಾಗುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಡಿಸೆಂಬರ್‌ 12ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಡಳಿತರೂಢ ಬಿಜೆಪಿ ಗೆಲುವಿನ ಹಾದಿಯಲ್ಲಿದೆ. ಈಗಾಗಲೇ 158 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿ ಭೂಪೇಂದ್ರ ಪಟೇಲ್‌, ಪಾಟಿದಾರ್‌ ಸಮುದಾಯದ ಯುವ ನಾಯಕ ಹಾರ್ದಿಕ್‌ ಪಟೇಲ್‌ ಹಾಗೂ ರಿವಾಬಾ ಜಡೇಜಾ ಅವರು ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌.ಪಾಟೀಲ್‌ ತಿಳಿಸಿದ್ದಾರೆ.

Recommended Video

      Gujarat Election Results: 150ಕ್ಕೂ ಸೀಟ್ ಗೆಲ್ಲುವತ್ತ ಬಿಜೆಪಿ, 7 ನೇ ಬಾರಿ ಸರ್ಕಾರ ರಚನೆ ಖಚಿತ | Oneindia

      ಬಿಜೆಪಿಯ ಹಲವಾರು ಗಣ್ಯರು ಇದು ನಿರೀಕ್ಷೆ ಫಲಿತಾಂಶ ಆಗಿದೆ. ಇದು ನರೇಂದ್ರ ಮೋದಿ ಅವರನ್ನು ಜನರು ಮೆಚ್ಚಿಕೊಂಡಿರುವ ಬಗೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್‌ ಇದುವರೆಗೆ ಕೇವಲ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಆಮ್ ಆದ್ಮಿ ಪಕ್ಷ ಬರೀ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಗುಜರಾತ್‌ ವಿಧಾನಸಭೆಗೆ ನಡೆದ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 158 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಡಿಸೆಂಬರ್‌ 1 ಹಾಗೂ 5ರಂದು ಕ್ರಮವಾಗಿ ಮೊದಲ ಹಾಗೂ ಎರಡನೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 59.11 ಹಾಗೂ ಎರಡನೇ ಹಂತದಲ್ಲಿ 63.14ರಷ್ಟು ಮತದಾನವಾಗಿತ್ತು.

      Gujarat Election results 2022: Gujarat CM will take charge on December 12

      1,621 ಅಭ್ಯರ್ಥಿಗಳು ಕಣದಲ್ಲಿರುವ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಭಾರೀ ಭದ್ರತೆ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದಿದ್ದ ಬಿಜೆಪಿ ಈ ಭಾರಿಯೂ ಗೆಲ್ಲುವ ವಿಶ್ವಾಸದಲ್ಲಿ ಇದೆ. ಚುನಾವಣಾ ಎಕ್ಸಿಟ್‌ ಪೋಲ್‌ಗಳು ಕೂಡ ಬಿಜೆಪಿಗೆ ಪೂರಕವಾಗಿ ಇದ್ದವು. ಗುಜರಾತ್‌ನಲ್ಲಿ 182 ವಿಧಾನಸಭಾ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ.64.33ರಷ್ಟು ಮತದಾನವಾಗಿದೆ. ಆದರೆ, ಇದು 2017ರ ಚುನಾವಣೆಯಲ್ಲಿ ದಾಖಲಾದ ಮತದಾನಕ್ಕೆ ಹೋಲಿಸಿದರೆ ಶೇ.4ಕ್ಕಿಂತ ಕಡಿಮೆಯಾಗಿದೆ.

      2017ರಲ್ಲಿ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಪಡೆದ್ದಿತ್ತು. ಅದರ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದುಕೊಂಡಿತ್ತು. ಪ್ರಸ್ತುತ 182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಯಲ್ಲಿ ಬಿಜೆಪಿಯ ಬಲವು 111 ಆಗಿದೆ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್‌ನ ಹಲವಾರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

      ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಫರ್ಧೆವನ್ನು ನೀಡಿತು. ಆದಾಗ್ಯೂ, ಆಮ್‌ ಆದ್ಮಿ ಪಾರ್ಟಿ ಮತ ಪಡೆಯುವ ಮೂಲಕ ಕಾಂಗ್ರೆಸ್‌ಗೆ ಪ್ರಬಲ ಹೊಡೆತ ನೀಡಬಹುದು. 2017 ರಲ್ಲಿ ಪಾಟಿದಾರ್ ಸಮುದಾಯದ ಪ್ರತಿಭಟನೆಯೊಂದಿಗೆ ಬಿಜೆಪಿ ಕೂಡ ಒತ್ತಡದಲ್ಲಿ ಸಿಲುಕಿತ್ತು. ಆದರೆ ಈ ಬಾರಿ ಪರಿಸ್ಥಿತಿಯು ಬಿಜೆಪಿಯ ಪರವಾಗಿದ್ದು, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಬಹುದು ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+