Gujarat Election results 2022: ನಾವು ಹೊಸ ದಾಖಲೆ ಸೃಷ್ಟಿಸುತ್ತೇವೆ: ರಾಜನಾಥ್‌ ಸಿಂಗ್‌

ಅಹಮದಾಬಾದ್‌, ಡಿಸೆಂಬರ್‌ 8: ಗುಜರಾತ್‌ನಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸುತ್ತಿರುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಗುಜರಾತ್‌ನಲ್ಲಿ ಆಡಳಿತರೂಢ ಪರ ಅಲೆ ಇದೆ. ರಾಜ್ಯದ ಜನತೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇಟ್ಟಿರುವುದರಿಂದ ಗುಜರಾತ್‌ನಲ್ಲಿ ನಾವು ಹೊಸ ದಾಖಲೆಯನ್ನು ರಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Recommended Video

      Gujarat Election Results: 150ಕ್ಕೂ ಸೀಟ್ ಗೆಲ್ಲುವತ್ತ ಬಿಜೆಪಿ, 7 ನೇ ಬಾರಿ ಸರ್ಕಾರ ರಚನೆ ಖಚಿತ | Oneindia

      ಇನ್ನೂ ಕರ್ನಾಟಕ ಸಂಸದ ಪಿಸಿ ಮೋಹನ್‌ ಗುಜರಾತ್‌ ಜನರು ಉಚಿತ ಭಾಗ್ಯಗಳ ಸಂಸ್ಕೃತಿಯನ್ನು ತಿರಸ್ಕರಿಸಿದ್ದಾರೆ. ಈ ಬಾರಿ ಮೋದಿ ಮ್ಯಾಜಿಕ್‌ ನಡೆದಿದೆ. ಪಿಎಂ ಮೋದಿಯಿಂದ ಎಲ್ಲವೂ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

      ಗುಜರಾತ್‌ ವಿಧಾನಸಭೆಗೆ ನಡೆದ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 156 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಡಿಸೆಂಬರ್‌ 1 ಹಾಗೂ 5ರಂದು ಕ್ರಮವಾಗಿ ಮೊದಲ ಹಾಗೂ ಎರಡನೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 59.11 ಹಾಗೂ ಎರಡನೇ ಹಂತದಲ್ಲಿ 63.14ರಷ್ಟು ಮತದಾನವಾಗಿತ್ತು.

      Gujarat Election results 2022: Rajnath Singh said that we will create a new record

      1,621 ಅಭ್ಯರ್ಥಿಗಳು ಕಣದಲ್ಲಿರುವ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಭಾರೀ ಭದ್ರತೆ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದಿದ್ದ ಬಿಜೆಪಿ ಈ ಭಾರಿಯೂ ಗೆಲ್ಲುವ ವಿಶ್ವಾಸದಲ್ಲಿ ಇದೆ. ಚುನಾವಣಾ ಎಕ್ಸಿಟ್‌ ಪೋಲ್‌ಗಳು ಕೂಡ ಬಿಜೆಪಿಗೆ ಪೂರಕವಾಗಿ ಇದ್ದವು. ಗುಜರಾತ್‌ನಲ್ಲಿ 182 ವಿಧಾನಸಭಾ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ.64.33ರಷ್ಟು ಮತದಾನವಾಗಿದೆ. ಆದರೆ, ಇದು 2017ರ ಚುನಾವಣೆಯಲ್ಲಿ ದಾಖಲಾದ ಮತದಾನಕ್ಕೆ ಹೋಲಿಸಿದರೆ ಶೇ.4ಕ್ಕಿಂತ ಕಡಿಮೆಯಾಗಿದೆ.

      2017ರಲ್ಲಿ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಪಡೆದ್ದಿತ್ತು. ಅದರ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದುಕೊಂಡಿತ್ತು. ಪ್ರಸ್ತುತ 182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಯಲ್ಲಿ ಬಿಜೆಪಿಯ ಬಲವು 111 ಆಗಿದೆ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್‌ನ ಹಲವಾರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

      ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಫರ್ಧೆವನ್ನು ನೀಡಿತು. ಆದಾಗ್ಯೂ, ಆಮ್‌ ಆದ್ಮಿ ಪಾರ್ಟಿ ಮತ ಪಡೆಯುವ ಮೂಲಕ ಕಾಂಗ್ರೆಸ್‌ಗೆ ಪ್ರಬಲ ಹೊಡೆತ ನೀಡಬಹುದು. 2017 ರಲ್ಲಿ ಪಾಟಿದಾರ್ ಸಮುದಾಯದ ಪ್ರತಿಭಟನೆಯೊಂದಿಗೆ ಬಿಜೆಪಿ ಕೂಡ ಒತ್ತಡದಲ್ಲಿ ಸಿಲುಕಿತ್ತು. ಆದರೆ ಈ ಬಾರಿ ಪರಿಸ್ಥಿತಿಯು ಬಿಜೆಪಿಯ ಪರವಾಗಿದ್ದು, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಬಹುದು ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+