Gujarat Election Results 2022: ಬಿಜೆಪಿಗೆ 135-145 ಸ್ಥಾನಗಳಲ್ಲಿ ಗೆಲುವು ಎಂದ ಹಾರ್ದಿಕ್ ಪಟೇಲ್

ಅಹಮದಾಬಾದ್, ಡಿ.08: ಗುಜರಾತ್ ವಿಧಾನಸಭಾ ಚುನಾವಣೆ 2022ರ ಫಲಿತಾಂಶ ಇಂದು ಪ್ರಕಟವಾಗಲಿದೆ. ಕಳೆದ 27 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ರಾಜ್ಯದಲ್ಲಿ ಈ ಬಾರಿ ಅಧಿಕಾರ ಯಾರಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ.

ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್, ಈ ಬಾರಿ ರಾಜ್ಯದಲ್ಲಿ 135 ರಿಂದ 145 ಸ್ಥಾನಗಳಲ್ಲಿ ಗೆಲುವು ಸಾಧಿಸಿ, ನಾವು ಖಂಡಿತವಾಗಿಯೂ ಸರ್ಕಾರವನ್ನು ರಚಿಸಲಿದ್ದೇವೆ. ನಿಮಗೇನಾದರೂ ಸಂದೇಹವಿದೆಯೇ? ಎಂದು ವಿಶ್ವಾಸ ವ್ಯಕ್ತಪಡಿಸಿದರು.

Recommended Video

      Gujarat Election Results: 150ಕ್ಕೂ ಸೀಟ್ ಗೆಲ್ಲುವತ್ತ ಬಿಜೆಪಿ, 7 ನೇ ಬಾರಿ ಸರ್ಕಾರ ರಚನೆ ಖಚಿತ | Oneindia

      ವಿರಂಗಾಂನ ಬಿಜೆಪಿ ಅಭ್ಯರ್ಥಿಯಾಗಿರುವ ಹಾರ್ದಿಕ್ ಪಟೇಲ್, 'ಕೆಲಸದ ಆಧಾರದ ಮೇಲೆ ಸರ್ಕಾರ ರಚನೆಯಾಗುತ್ತಿದೆ. ಕಳೆದ 20 ವರ್ಷಗಳಲ್ಲಿ ಇಲ್ಲಿ ಯಾವುದೇ ಗಲಭೆಗಳು, ಭಯೋತ್ಪಾದಕ ದಾಳಿಗಳು ನಡೆದಿಲ್ಲ. ಬಿಜೆಪಿ ಅವರ ನಿರೀಕ್ಷೆಗಳನ್ನು ಈಡೇರಿಸಿದೆ ಎಂದು ಜನರಿಗೆ ತಿಳಿದಿದೆ" ಎಂದರು.

      Gujarat Election Results 2022: we will win 135-145 seats-Hardik Patel

      "ಬಿಜೆಪಿ ಸರ್ಕಾರದ ಅಡಿಯಲ್ಲಿ ತಮ್ಮ ಭವಿಷ್ಯವು ಸುರಕ್ಷಿತವಾಗಿರುತ್ತದೆ ಎಂದು ರಾಜ್ಯದ ಜನರು 'ಕಮಲ'ದ ಚಿಹ್ನೆ ಒತ್ತಿದ್ದಾರೆ. ಸರ್ಕಾರ ಉತ್ತಮ ಆಡಳಿತ ನೀಡಿ, ಜನರ ನಂಬಿಕೆಯನ್ನು ಬಲಪಡಿಸಿದೆ" ಎಂದು ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ಹೇಳಿದರು.

      ಗುಜರಾತ್ ರಾಜ್ಯದಲ್ಲಿ ಬಿಜೆಪಿಯು ಸತತ 7ನೇ ಬಾರಿಗೆ ಅಧಿಕಾರ ಹಿಡಿಯಲಿದೆ ಎಂದು ಎಕ್ಸಿಟ್ ಪೋಲ್‌ಗಳ ಸಮೀಕ್ಷೆ ಹೇಳುತ್ತಿವೆ. ಇದರ ನಡುವೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳು ಕೂಡ ಗೆಲುವು ನಮ್ಮದೆ ಎನ್ನುತ್ತಿವೆ.

      ಗುಜರಾತ್ ವಿಧಾನಸಭೆ ಚುನಾವಣೆಗೆ ಈ ತಿಂಗಳು ಎರಡು ಹಂತಗಳಲ್ಲಿ ಮತದಾನ ನಡೆದಿದೆ. 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಮತ ಎಣಿಕೆ ಮುಗಿದ ಕೂಡಲೇ ಚುನಾವಣಾ ಫಲಿತಾಂಶ 2022 ಪ್ರಕಟವಾಗಲಿದೆ. ಈ ಮೊದಲು ಕಾಂಗ್ರೆಸ್ - ಬಿಜೆಪಿ ನಡುವಿನ ಹೋರಾಟವಾಗಿದ್ದ ಚುನಾವನೆ, ಗುಜರಾತ್ ವಿಧಾನಸಭೆ ಚುನಾವಣೆ 2022ರಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವಿನ ಹೋರಾಟವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+